ನವದೆಹಲಿ: ಗಣತಂತ್ರದ ಮುನ್ನಾ ದಿನ ಪದ್ಮ ಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟವಾಗಿದ್ದು, ಅರುಣ್ ಜೇಟ್ಲಿ, ಸುಷ್ಮಾ ಸ್ವರಾಜ್, ಜಾರ್ಜ್ ಫರ್ನಾಂಡೀಸ್ ಮತ್ತು ಇತ್ತೀಚಿಗಷ್ಟೇ ಕೃಷ್ಣೈಕ್ಯರಾದ ಪೇಜಾವರ ಶ್ರೀಗಳಿಗೆ ಎರಡನೇ ಅತ್ಯುಚ್ಛ ಪುರಸ್ಕಾರ ಪದ್ಮವಿಭೂಷಣ (ಮರಣೋತ್ತರ) ಪ್ರಶಸ್ತಿ ಘೋಷಣೆ ಆಗಿದೆ.
ಬಾಕ್ಸಿಂಗ್ ತಾರೆ ಮೇರಿಕೂಮ್‍ಗೂ ಪದ್ಮವಿಭೂಷಣ ಪ್ರಶಸ್ತಿ ಪ್ರಕಟವಾಗಿದೆ. ಗೋವಾದ ಮಾಜಿ ಮುಖ್ಯಮಂತ್ರಿ, ಮಾಜಿ ರಕ್ಷಣಾ ಸಚಿವರಾಗಿದ್ದ ಮನೋಹರ್ ಪರಿಕ್ಕರ್, ಪಿವಿ ಸಿಂಧೂಗೆ ಪದ್ಮಭೂಷಣ ಘೋಷಣೆ ಆಗಿದೆ. ಇದನ್ನೂ ಓದಿ: ನಡೆದಾಡುವ ಅರಣ್ಯ ವಿಶ್ವಕೋಶ ತುಳಸಿ ಗೌಡರಿಗೆ ಪದ್ಮಶ್ರೀ ಗೌರವ
Advertisement
ಪಬ್ಲಿಕ್ ಟಿವಿಯ ‘ಪಬ್ಲಿಕ್ ಹೀರೋ’ ಆಗಿದ್ದ ಉತ್ತರ ಕನ್ನಡ ಜಿಲ್ಲೆ ಆಂಕೋಲ ತಾಲೂಕಿನ ಹೊನ್ನಳ್ಳಿಯ ಅರಣ್ಯ ಪ್ರೇಮಿ ಹಾಲಕ್ಕಿ ಸಮುದಾಯದ ತುಳಸಿ ಗೌಡ, ಅಕ್ಷರ ಸಂತ ದಕ್ಷಿಣ ಕನ್ನಡದ ಅಕ್ಷರ ಸಂತ, ಕಿತ್ತಳೆ ಹಣ್ಣು ಮಾರಿ ಹರೇಕಳದ ನ್ಯೂಪಡ್ಪು ಗ್ರಾಮದಲ್ಲಿ ಶಾಲೆ ಕಟ್ಟಿಸಿದ ಹಾಜಬ್ಬ, ವಿಜಯ ಸಂಕೇಶ್ವರ್, ಕೆ ವಿ ಸಂಪತ್ ಕುಮಾರ್, ಕ್ರೀಡಾಪಟು ಎಂಪಿ ಗಣೇಶ್ ಸೇರಿ 118 ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿ ಪ್ರಕಟವಾಗಿದೆ. ಇದನ್ನೂ ಓದಿ: ಕಿತ್ತಳೆ ಮಾರಿ ಶಾಲೆ ಕಟ್ಟಿದ ಹರೇಕಳ ಹಾಜಬ್ಬರಿಗೆ ಪದ್ಮಶ್ರೀ ಗೌರವ
Advertisement
ಕಳೆದ 60 ವರ್ಷಗಳಿಂದ ತುಳಸಿಗೌಡರು ಸಲ್ಲಿಸಿದ ಅರಣ್ಯ ಸೇವೆ ಪರಿಗಣಿಸಿ 2018 ಜೂನ್ 19ರಂದು ಈ ಸಸ್ಯವಿಜ್ಞಾನಿಯನ್ನು ಪಬ್ಲಿಕ್ ಹೀರೋ ಮಾಡಲಾಗಿತ್ತು. ಲಕ್ಷಾಂತರ ಗಿಡ ನೆಟ್ಟು ಕಾಡನ್ನಾಗಿ ಪರಿವರ್ತಿದ್ದರು. ಪದ್ಮಶ್ರೀ ಪ್ರಶಸ್ತಿ ಹಿನ್ನೆಲೆಯಲ್ಲಿ ತುಳಸಿಗೌಡರ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ.