ಸಹಿಷ್ಣು ಆಗಿರುವವರನ್ನು ಕೆದಕುವುದು ಕೆಲವರ ಚಾಳಿ – ರಾಹುಲ್ ಹೇಳಿಕೆಗೆ ಪೇಜಾವರ ಶ್ರೀ ಕಿಡಿ

Public TV
1 Min Read
Pejavara Shree

ವಿಜಯಪುರ: ಸಹಿಷ್ಣು ಆಗಿರುವವರನ್ನ ಕೆದಕುವುದು ಕೆಲವರ ಚಾಳಿಯಾಗಿ ಹೋಗಿದೆ ಎಂದು ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ (Vishwa Prasanna Teertha seer) ಹೇಳಿದ್ದಾರೆ.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂಗಳ ಬಗ್ಗೆ ರಾಹುಲ್ ಗಾಂಧಿ (Rahul Gandhi) ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ಸಹಿಷ್ಣು ಆಗಿರುವವರನ್ನು ಕೆಣಕಿ, ಗೊಂದಲ ಸೃಷ್ಟಿ ಮಾಡಿ ತಮ್ಮ ಬೇಳೆ ಬೇಯಿಸಿಕೊಳ್ಳಬೇಕು. ಇದೇ ಕಾರಣಕ್ಕೆ ಹೀಗೆ ಗೊಂದಲದ ಹೇಳಿಕೆ ಕೊಟ್ಟು ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತಿದ್ದಾರೆ ಎಂದು ಅವರು ಕಿಡಿಕಾರಿದ್ದಾರೆ. ಇದನ್ನೂ ಓದಿ: Hathras Tragedy: ಇಬ್ಬರು ಮಹಿಳೆಯರು ಸೇರಿ ಸತ್ಸಂಗ ಸಂಘಟನಾ ಸಮಿತಿಯ 6 ಮಂದಿ ಅರೆಸ್ಟ್‌

ಸಮಾಜದ ಎರಡು ಪ್ರಮುಖ ಪಂಗಡಗಳನ್ನು ಒಡೆಯುವುದು, ಅಲ್ಲಿ ಬೆಂಕಿ ಹಚ್ಚುವುದು ಏನು ಕಷ್ಟದ ಕೆಲಸ ಅಲ್ಲ. ಈಗ ಮಣಿಪುರದಲ್ಲಿ ಬೆಂಕಿ ಹಚ್ಚಿದ್ದಾಗಿದೆ. ಇವತ್ತಿಗೂ ಅದನ್ನ ತಣಿಸಲು ಸಾಧ್ಯ ಆಯ್ತಾ? ಹೀಗಿರುವಾಗ ರಾಜಕೀಯ ನಾಯಕರು ಮುಖಂಡರು ಎನ್ನುವಂತಹವರು, ಇಂತಹ ಬೇಜವಾಬ್ದಾರಿ ಹೇಳಿಕೆಗಳನ್ನು ಕೊಡ್ತಾರೆ ಎಂದರೆ, ಸಮಾಜ ಅಂತಹವರನ್ನ ಮೊದಲು ದೂರ ಇಡಬೇಕು ಎಂದು ಅವರು ಹೇಳಿದ್ದಾರೆ.

ಜು.1 ರಂದು ವಿಪಕ್ಷ ನಾಯಕ ರಾಹುಲ್ ಗಾಂಧಿಯವರು ಲೋಕಸಭೆಯಲ್ಲಿ ತಮ್ಮ ಮೊದಲ ಭಾಷಣ ಮಾಡಿದರು. ಈ ವೇಳೆ, ಅಭಯಮುದ್ರವು ಕಾಂಗ್ರೆಸ್‍ನ ಸಂಕೇತವಾಗಿದೆ. ಅಭಯಮುದ್ರವು ನಿರ್ಭಯತೆಯ ಸಂಕೇತವಾಗಿದೆ, ಧೈರ್ಯ ಮತ್ತು ಸುರಕ್ಷತೆಯ ಸಂಕೇತವಾಗಿದೆ, ಇದು ಭಯವನ್ನು ಹೋಗಲಾಡಿಸುತ್ತದೆ. ನಮ್ಮ ಮಹಾಪುರುಷರೆಲ್ಲರೂ ಅಹಿಂಸೆ, ಭಯವನ್ನು ಹೋಗಲಾಡಿಸುವ ಬಗ್ಗೆ ಮಾತನಾಡಿದ್ದಾರೆ. ಆದರೆ, ತಮ್ಮನ್ನು ತಾವು ಹಿಂದೂ ಎಂದು ಕರೆದುಕೊಳ್ಳುವವರು ಹಿಂಸೆ, ದ್ವೇಷ, ಅಸತ್ಯದ ಬಗ್ಗೆ ಮಾತನಾಡುತ್ತಾರೆ. ನೀವು ನಿಜವಾದ ಹಿಂದೂಗಳಲ್ಲ ಎಂದು ಹೇಳಿದ್ದರು.

ಅಧಿವೇಶನದಲ್ಲಿ ಹಿಂದೂ ಪದವನ್ನು ರಾಹುಲ್ ಗಾಂಧಿ ಪ್ರಸ್ತಾಪ ಮಾಡಿದ್ದಕ್ಕೆ ಕೂಡಲೇ ಮಧ್ಯೆ ನಿಂತು ಆಕ್ಷೇಪ ವ್ಯಕ್ತಪಡಿಸಿದ್ದ ಪ್ರಧಾನಿ ಮೋದಿ, ಇಡೀ ಹಿಂದೂ ಸಮುದಾಯವನ್ನು ಹಿಂಸಾತ್ಮಕ ಎಂದು ಕರೆಯುವುದು ಬಹಳ ಗಂಭೀರವಾದ ವಿಷಯ ಎಂದಿದ್ದರು. ಇದನ್ನೂ ಓದಿ: ಕಾನೂನಿಗಿಂತ ಯಾರು ಮೇಲಲ್ಲ, ಈ ಕೃತ್ಯ ಮಾಡುವ ವ್ಯಕ್ತಿತ್ವ ದರ್ಶನ್‌ದಲ್ಲ- ಮೌನ ಮುರಿದ ಸುಮಲತಾ

Share This Article