Bengaluru CityCinemaKarnatakaLatestMain PostSandalwood

ಸೆಟ್ಟೇರಿದ `ಬಘೀರ’ ಸಿನಿಮಾ: ಪ್ರಶಾಂತ್‌ ನೀಲ್‌ ಕಥೆಗೆ ಶ್ರೀಮುರಳಿ ಹೀರೋ

ರೋರಿಂಗ್ ಸ್ಟಾರ್ ಶ್ರೀಮುರಳಿ ನಟನೆಯ  ʻಬಘೀರ’ ಸಿನಿಮಾ ಇಂದು ಸೆಟ್ಟೇರಿದೆ. ಹೊಂಬಾಳೆ ಫಿಲ್ಮ್ಸ್‌ ನಿರ್ಮಾಣದಲ್ಲಿ ಮೂಡಿ ಬರಲಿರುವ, ಡಾ.ಸೂರಿ ಆ್ಯಕ್ಷನ್ ಕಟ್ ಹೇಳ್ತಿರುವ ʻಬಘೀರʼ ಚಿತ್ರದ ಮುಹೂರ್ತ ನೆರವೇರಿದೆ.

ಉಗ್ರಂ, ಭರಾಟೆ, ಮದಗಜ ಸಿನಿಮಾಗಳ ಮೂಲಕ ಮೋಡಿ ಮಾಡಿದ್ದ ರೋರಿಂಗ್ ಸ್ಟಾರ್ ಶ್ರೀಮುರಳಿ ಈಗ ಬಘೀರನಾಗಿ ಮಿಂಚಲು ರೆಡಿಯಾಗಿದ್ದಾರೆ. ಈ ಚಿತ್ರದ ಮುಹೂರ್ತ ಇಂದು ಸರಳವಾಗಿ ನೆರವೇರಿದೆ. ಈ ವೇಳೆ `ಬಘೀರ’ ಚಿತ್ರದ ನಟ ಶ್ರೀಮುರಳಿ, ನಿರ್ದೇಶಕ ಡಾ.ಸೂರಿ ಮತ್ತು ಹೊಂಬಾಳೆ ಫಿಲ್ಮ್ಸ್‌ ಸಂಸ್ಥಾಪಕ ವಿಜಯ್ ಕಿರಗಂದೂರು ಸಾರಥ್ಯದ ಚಿತ್ರಕ್ಕೆ ರಿಷಬ್ ಶೆಟ್ಟಿ, ಮತ್ತು ನಿರ್ದೇಶಕ ಸಂತೋಷ್ ಆನಂದ್ ರಾಮ್ ಮುಹೂರ್ತಕ್ಕೆ ಆಗಮಿಸಿ ಶುಭಹಾರೈಸಿದ್ದಾರೆ.

`ಕೆಜಿಎಫ್’ ಮಾಸ್ಟರ್ ಮೈಂಡ್ ಪ್ರಶಾಂತ್ ನೀಲ್ ಬರೆದಿರುವ ಕಥೆಗೆ, ಡಾ.ಸೂರಿ ನಿರ್ದೇಶನ ಮಾಡುತ್ತಿದ್ದು, ಬಘೀರನಾಗಿ ಶ್ರೀಮುರಳಿ ಕಾಣಿಸಿಕೊಳ್ತಿದ್ದಾರೆ. ಚಿತ್ರದಲ್ಲಿ ಶ್ರೀಮುರಳಿ ರಗಡ್ ಪೊಲೀಸ್ ಆಫೀಸರ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಡಿಫರೆಂಟ್ ಸ್ಟೋರಿ ಮೂಲಕ ಮೋಡಿ ಮಾಡೋಕೆ ಶ್ರೀಮುರಳಿ ರೆಡಿಯಾಗಿದ್ದಾರೆ.

ಈ ಹಿಂದೆಯೇ ಚಿತ್ರ ಫಸ್ಟ್ ಲುಕ್ ರಿವೀಲ್ ಆಗಿದ್ದು, ಶ್ರೀಮುರಳಿ ಸಖತ್ ಖಡಕ್ ಲುಕ್ಕಿನಲ್ಲಿ ಕಾಣಿಸಿಕೊಂಡಿದ್ರು. ಈ ಲುಕ್ ನೋಡಿ ಅಭಿಮಾನಿಗಳು ಕೂಡ ಖುಷಿಪಟ್ಟಿದ್ದರು. ಪ್ರಶಾಂತ್ ನೀಲ್ ಕಥೆಯಲ್ಲಿ, ಶ್ರೀಮುರಳಿ ನಟಿಸಲಿದ್ದು, ಈ ಚಿತ್ರದ ಮೇಲೆ ಅಭಿಮಾನಿಗಳಿಗೆ ನಿರೀಕ್ಷೆಯಿದೆ. ಈಗಷ್ಟೇ ಚಿತ್ರದ ಮುಹೂರ್ತ ನೆರವೇರಿಸಿಕೊಂಡಿರುವ ʻಬಘೀರʼ ಸಿನಿಮಾದ ಶೂಟಿಂಗ್ ಸದ್ಯದಲ್ಲೇ ಶುರುವಾಗಲಿದೆ.

Leave a Reply

Your email address will not be published.

Back to top button