ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ (Shivarajkumar) ನಟನೆಯ ‘ಭೈರತಿ ರಣಗಲ್’ (Bhairathi Rangal) ಸಿನಿಮಾದಲ್ಲಿ 70%ರಷ್ಟು ಚಿತ್ರೀಕರಣ ಮುಗಿದ್ದು, ಇದೇ ಆಗಸ್ಟ್ 15ಕ್ಕೆ ರಿಲೀಸ್ ಆಗಲಿದೆ. ಇದರ ನಡುವೆ ಮಫ್ತಿ ಪ್ರೀಕ್ವೇಲ್ ‘ಭೈರತಿ ರಣಗಲ್’ ಸಿನಿಮಾದಲ್ಲಿ ರೋರಿಂಗ್ ಸ್ಟಾರ್ ಶ್ರೀಮುರಳಿ (Sriimurali) ಇರುತ್ತಾರಾ ಎಂಬ ಪ್ರಶ್ನೆಗೆ ನಟ ಸ್ಪಷ್ಟನೆ ನೀಡಿದ್ದಾರೆ.
ಚಿತ್ರದುರ್ಗಕ್ಕೆ ಕಾರ್ಯಕ್ರಮವೊಂದಕ್ಕಾಗಿ ಶ್ರೀಮುರಳಿ ಭೇಟಿ ನೀಡಿದ್ದರು. ‘ಬಘೀರ’ ಸಿನಿಮಾ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಶ್ರೀಮುರಳಿ ಮಾಹಿತಿ ಹಂಚಿಕೊಂಡರು. ಬಹುನಿರೀಕ್ಷಿತ ‘ಭೈರತಿ ರಣಗಲ್’ ಸಿನಿಮಾದಲ್ಲಿ ಶ್ರೀಮುರಳಿ ನಟಿಸುತ್ತಿದ್ದಾರಾ? ಎಂಬುದರ ಸ್ವತಃ ಶ್ರೀಮುರಳಿ ಉತ್ತರಿಸಿದ್ದರು. ಈ ಚಿತ್ರದಲ್ಲಿ ನಾನು ನಟಿಸುತ್ತಿಲ್ಲ ಎಂದು ಕ್ಲ್ಯಾರಿಟಿ ನೀಡಿದ್ದರು. ಇದನ್ನೂ ಓದಿ:‘ಕಾಂತಾರ’ ಪ್ರೀಕ್ವೇಲ್‌ನಲ್ಲಿ ರಿಷಬ್ ಶೆಟ್ಟಿ ಜೊತೆ ಜ್ಯೂ.ಎನ್‌ಟಿಆರ್
ಭೈರತಿ ರಣಗಲ್ ಚಿತ್ರದಲ್ಲಿ ನಾನು ನಟನೆ ಮಾಡ್ತಿಲ್ಲ. ಅದು ಶಿವಣ್ಣ ಮಾಮನ ಮೂವಿ ಮಾತ್ರ ಅದ್ರಲ್ಲಿ ನಾನಿಲ್ಲ. `ಮಫ್ತಿ’ ಚಿತ್ರದ ಪ್ರೀಕ್ವೆಲ್ ಕಥೆ ಅದಾಗಿದೆ, ಅದ್ರಲ್ಲಿ ನಾನಿಲ್ಲ ಎಂದು ಶ್ರೀಮುರಳಿ ಸ್ಪಷ್ಟನೆ ನೀಡಿದ್ದಾರೆ. ‘ಭೈರತಿ ರಣಗಲ್’ ಸೀಕ್ವೆಲ್ ಬಗ್ಗೆ ಕೇಳಿದಕ್ಕೆ ನೋ ಕಾಮೆಂಟ್ಸ್ ಎಂದಿದ್ದಾರೆ. ಚಿತ್ರತಂಡಕ್ಕೆ ಆಲ್ ದಿ ಬೆಸ್ಟ್ ಶ್ರೀಮುರುಳಿ ವಿಶ್ ಮಾಡಿದ್ದಾರೆ.
ಚಿತ್ರದಲ್ಲಿ ಶಿವರಾಜಕುಮಾರ್, ರುಕ್ಮಿಣಿ ವಸಂತ್ (Rukmini Vasanth), ರಾಹುಲ್ ಬೋಸ್, ಅವಿನಾಶ್, ದೇವರಾಜ್, ಮಧು ಗುರುಸ್ವಾಮಿ, ಛಾಯಾ ಸಿಂಗ್, ಬಾಬು ಹಿರಣ್ಣಯ್ಯ ಮುಂತಾದವರು ಅಭಿನಯಿಸುತ್ತಿದ್ದಾರೆ. ‘ಭೈರತಿ ರಣಗಲ್’ ಚಿತ್ರಕ್ಕೆ ನವೀನ್ ಕುಮಾರ್ ಛಾಯಾಗ್ರಹಣ ಮತ್ತು ರವಿ ಬಸ್ರೂರು ಅವರ ಸಂಗೀತವಿದೆ. ನರ್ತನ್ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ.