ಶ್ರೀನಗರ: ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಸಂಗಮ್ ಪ್ರದೇಶದಲ್ಲಿ ಭಾರತೀಯ ಸೇನೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ಉಗ್ರರನ್ನು ಸೇನೆ ಸದೆಬಡಿದಿದೆ.
ಮೃತಪಟ್ಟ ಇಬ್ಬರೂ ಉಗ್ರರು ಲಷ್ಕರ್-ಇ-ತೊಯ್ಬಾ(ಎಲ್‍ಇಟಿ) ಉಗ್ರಗಾಮಿ ಸಂಘಟನೆಗೆ ಸೇರಿದ್ದು, ಕಳೆದ ರಾತ್ರಿ ಸಂಗಮ್ ಪ್ರದೇಶದ ಬಿಜ್ಬೆಹಾರಾದಲ್ಲಿ ಭದ್ರತಾ ಪಡೆ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಭದ್ರತಾ ಪಡೆ ಯೋಧರು ಕೂಡ ಪ್ರತಿದಾಳಿ ನಡೆಸಿದ್ದಾರೆ. ಭದ್ರತಾ ಪಡೆ ಯೋಧರು ಮತ್ತು ಉಗ್ರಗಾಮಿಗಳ ನಡುವೆ ಆರಂಭವಾದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಮೃತಪಟ್ಟಿದ್ದಾರೆ.
Advertisement
Sangam #Encounter Update: 02 LeT #terrorists have been #killed in this operation by Police, CRPF & Army. #Arms & ammunition recovered. Details shall follow. @JmuKmrPolice https://t.co/5AFEMXJJAn
— Kashmir Zone Police (@KashmirPolice) February 21, 2020
Advertisement
ಪೊಲೀಸರು, ಸಿಆರ್‍ಪಿಎಫ್ ಯೋಧರು ಮತ್ತು ಭಾರತೀಯ ಸೇನಾ ಯೋಧರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸುವಲ್ಲಿ ಸೇನೆ ಯಶಸ್ವಿಯಾಗಿದೆ. ಅಷ್ಟೇ ಅಲ್ಲದೇ ಘಟನಾ ಸ್ಥಳದಲ್ಲಿ ಮದ್ದುಗುಂಡು ಮತ್ತು ಶಸ್ತ್ರಾಸ್ತ್ರಗಳನ್ನು ಪತ್ತೆಯಾಗಿದ್ದು, ಅದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಾಶ್ಮೀರ ವಲಯ ಪೊಲೀಸರು ಮಾಹಿತಿ ನೀಡಿದ್ದಾರೆ.