ವೇಷತೊಟ್ಟು ಜೋಗತಿಯಾದ ನಟ ಶ್ರೀನಗರ ಕಿಟ್ಟಿ

Public TV
2 Min Read
Srinagar Kitty

ಪತ್ರಕರ್ತ ರವಿ ಬೆಳಗೆರೆ (Ravi Belagere) ಅವರು ಜೋಗತಿಯರ ಜೀವನದ ಆಗು ಹೋಗುಗಳ ಬಗ್ಗೆ ಬರೆದಿರುವ `ವೇಷಗಳು’ ಎಂಬ ಸಣ್ಣ ಕಥೆಯನ್ನಾಧರಿಸಿ (Ravi Belagere Novel) ಅದೇ ಹೆಸರಿನಲ್ಲಿ ಚಲನಚಿತ್ರವೊಂದು ತಯಾರಾಗುತ್ತಿದೆ. ಗ್ರೀನ್ ಟ್ರೀ ಸ್ಟುಡಿಯೋಸ್ ಅಡಿಯಲ್ಲಿ ಕಿಶನ್ ರಾವ್ ದಳವಿ ಅವರು ಈ ಚಿತ್ರಕ್ಕೆ ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಜು.8ರ ಮಂಗಳವಾರ ಶ್ರೀನಗರ ಕಿಟ್ಟಿ ಅವರ ಹುಟ್ಟುಹಬ್ಬ. ಅದೇದಿನ ಭಾವನಾ ಬೆಳಗೆರೆ ಹಾಗೂ ಶ್ರೀನಗರ ಕಿಟ್ಟಿ ಅರ್ಪಿಸುವ ‘ವೇಷಗಳು’ ಚಿತ್ರದ ಟೈಟಲ್ ಟೀಸರ್ ಬಿಡುಗಡೆ ಹಾಗೂ ಕಿಟ್ಟಿ ಅವರ ಬರ್ತ್ ಡೇ ಸಮಾರಂಭ ಏರ್ಪಡಿಸಲಾಗಿತ್ತು.

Srinagar Kitty

ವೇದಿಕೆಯಲ್ಲಿ ನಿರ್ದೇಶಕ ಕಿಶನ್ ರಾವ್ ಅವರು ಈ ಕಥೆಯನ್ನಿಟ್ಟುಕೊಂಡು ಸಿನಿಮಾ ಮಾಡಲು ಬೆಳಗೆರೆ ಅವರ ಮಗಳು ಭಾವನಾ ಅವರ ಒಪ್ಪಿಗೆ ಹಾಗೂ ಅಳಿಯ ಕಿಟ್ಟಿ (Srinagar Kitty) ಅವರಿಂದ ಜೋಗತಿ ಪಾತ್ರಕ್ಕೆ ಒಪ್ಪಸಲು ಪಟ್ಟಂಥ ಹರಸಾಹಸಗಳನ್ನು ತೆರೆಯ ಮೇಲೆ ಪ್ರದರ್ಶಿಸಲಾಯಿತು. ಇದನ್ನೂ ಓದಿ: 77 ಲಕ್ಷ ವಂಚನೆ – ಆಲಿಯಾ ಭಟ್‌ ಮಾಜಿ ಆಪ್ತ ಕಾರ್ಯದರ್ಶಿ ಬೆಂಗಳೂರಿನಲ್ಲಿ ಅರೆಸ್ಟ್‌

Ravi Belagere 2

ಈ ಚಿತ್ರದಲ್ಲಿ ನಮ್ಮ ಜೋಗತಿಯರ ಬಗ್ಗೆ ಹಾಗೂ ಅವರ ಜೀವನ ಶೈಲಿಯ ಬಗ್ಗೆ ಹೇಳಲಾಗುತ್ತಿದೆ. ಇಲ್ಲಿ ನಟ ಶ್ರೀನಗರ ಕಿಟ್ಟಿ ಅವರು ಬಸಪ್ಪ ಹಾಗೂ ಬಸಮ್ಮ ಜೋಗತಿಯಾಗಿ ಎರಡು ಗೆಟಪ್‌ಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅಲ್ಲದೇ ಈಗಾಗಲೇ ಶ್ರೀನಗರ ಕಿಟ್ಟಿ ಅವರು ಜೋಗತಿ ಪಾತ್ರಕ್ಕಾಗಿ ಪ್ರಶಸ್ತಿ ವಿಜೇತ ಮಂಜಮ್ಮ ಜೋಗತಿ ಅವರನ್ನು ಸಂಪರ್ಕಿಸಿ ಜೋಗತಿಯರ ನಡೆ, ನುಡಿಯ ಬಗ್ಗೆ ಸಾಕಷ್ಟು ಮಾಹಿತಿ ಪಡೆದುಕೊಂಡು ಸಿದ್ಧತೆ ಮಾಡಿಕೊಂಡಿದ್ದಾರೆ. ಚಿತ್ರದಲ್ಲಿ ಬಸಪ್ಪ ಪಾತ್ರವೇ ಬಹುತೇಕ ಆವರಿಸಿಕೊಂಡಿದೆ. ಇದನ್ನೂ ಓದಿ: `ನಾನು ಪಾರ್ಟ್ ಟೈಂ ನಟಿ’ ಎಂದ ಕೇಂದ್ರ ಮಾಜಿ ಸಚಿವೆ ಸ್ಮೃತಿ ಇರಾನಿ..? ಫುಲ್‌ಟೈಂ ಏನ್ ಗೊತ್ತಾ?

ಮುಂದಿನ ತಿಂಗಳಿಂದ ವೇಷಗಳು ಚಿತ್ರದ ಚಿತ್ರೀಕರಣ ಆರಂಭಿಸಿ ಮಧ್ಯಪ್ರದೇಶದ ಮಹಾಕಾಲೇಶ್ವರ, ಉತ್ತರ ಕರ್ನಾಟಕ, ಬೆಂಗಳೂರು ಹಾಗೂ ಮೈಸೂರಲ್ಲಿ ವೇಷಗಳು ಚಿತ್ರದ ಚಿತ್ರೀಕರಣ ನಡೆಸಲಾಗುವುದು. ಮುಂದಿನ ದಿನಗಳಲ್ಲಿ ಚಿತ್ರದ ಉಳಿದ ಕಲಾವಿದರ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ನಿರ್ದೇಶಕ ಕಿಶನ್ ರಾವ್ ತಿಳಿಸಿದರು. ಕೌಶಿಕ್ ಹರ್ಷ ಅವರ ಸಂಗೀತ, ರಾಜ್ ಗುರು ದತ್ತರಾಜ್ ಅವರ ಸಂಭಾಷಣೆ, ಅಕ್ಷಯ್ ಪಿ.ರಾವ್ ಅವರ ಸಂಕಲನ ಈ ಚಿತ್ರಕ್ಕಿದೆ. ಇದನ್ನೂ ಓದಿ: ರಕ್ಷಿತಾ ಪ್ರೇಮ್ ಸಹೋದರ ರಾಣಾ ನಟನೆಯ ಚಿತ್ರದ ಟೈಟಲ್ ಟೀಸರ್ ರಿಲೀಸ್

Share This Article