ಚಿಕ್ಕಮಗಳೂರು: ಶಂಕರಾಚಾರ್ಯರು ಸ್ಥಾಪಿಸಿದ ಚಿಕ್ಕಮಗಳೂರು (Chikkamagaluru) ಜಿಲ್ಲೆ ಶೃಂಗೇರಿ ಮಠದ ಶ್ರೀಗಳು ಅಯೋಧ್ಯೆಯಲ್ಲಿ (Ayodhya) ನಡೆಯುವ ರಾಮಮಂದಿರ (Ram Mandir) ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದು ಮಠದ ಆಡಳಿತಾಧಿಕಾರಿ ಗೌರಿ ಶಂಕರ್ ಸ್ಪಷ್ಟಪಡಿಸಿದ್ದಾರೆ.
ಶೃಂಗೇರಿ ಮಠದ (Sringeri Mutt) ಇಬ್ಬರು ಗುರುವತ್ರಯರಾದ ಭಾರತೀತೀರ್ಥ ಸ್ವಾಮೀಜಿ ಹಾಗೂ ವಿಧುಶೇಖರ ಶ್ರೀಗಳು ಇಬ್ಬರು ಗೈರಾಗಲಿದ್ದು, ಮಠದ ಪ್ರತಿನಿಧಿಯಾಗಿ ಆಡಳಿತಾಧಿಕಾರಿ ಗೌರಿಶಂಕರ್ ಅಯೋಧ್ಯೆಯ ರಾಮಮಂದಿರ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ತೆರಳಲಿದ್ದಾರೆ. ಶೃಂಗೇರಿ ಜಗದ್ಗುರುಗಳು ಅಯೋಧ್ಯೆ ಕಾರ್ಯಕ್ರಮಕ್ಕೆ ಹೋಗುತ್ತಾರೆ ಅನ್ನೋದು ಸುಳ್ಳು ಸುದ್ದಿ ಇಬ್ಬರು ಗುರುಗಳು ಹೋಗುತ್ತಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement
Advertisement
ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಒಮ್ಮೆ ಗುರುಗಳು ಅಯೋಧ್ಯೆಯ ರಾಮಮಂದಿರಕ್ಕೆ ವಿರೋಧ ವ್ಯಕ್ತಪಡಿಸುತ್ತಾರೆ ಎಂದು ಸುಳ್ಳು ಸುದ್ದಿಯನ್ನ ಹರಿಬಿಡುತ್ತಾರೆ. ಮತ್ತೊಮ್ಮೆ ಗುರುಗಳು ಅಯೋಧ್ಯೆ ಕಾರ್ಯಕ್ರಮಕ್ಕೆ ತೆರಳುತ್ತಾರೆ ಎಂದು ಸಂದೇಶ ಹಾಕುತ್ತಾರೆ. ಇದು ಶುದ್ಧ ಸುಳ್ಳು. ಗುರುಗಳು ಅಯೋಧ್ಯೆಗೆ ಹೋಗುತ್ತಿಲ್ಲ. ವದಂತಿಗಳಿಗೆ ಯಾರೂ ಕಿವಿಗೊಡಬಾರದು. ಗುರುಗಳು ಅಯೋಧ್ಯೆಗೆ ಹೋಗುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
Advertisement
ರಾಮ ಮಂದಿರ ಟ್ರಸ್ಟ್‍ನ ಸದಸ್ಯರು ಆಗಿರುವ ವಿಧುಶೇಖರ ಶ್ರೀಗಳು ಜನವರಿ 22ಕ್ಕೆ ಅಯೋಧ್ಯೆಯಲ್ಲಿನ ರಾಮಮಂದಿರ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಹೋಗುತ್ತಿಲ್ಲ. ಆದರೆ, ಗುರುಗಳು ಭಕ್ತವೃಂದಕ್ಕೆ ಎಲ್ಲರೂ ಜನವರಿ 22ರಂದು ರಾಮತಾರಕ ಜಪ ಹಾಗೂ ರಾಮಭುಜಂಗ ಸ್ತೋತ್ರ ಪಠಿಸುವಂತೆ ಕರೆ ನೀಡಿದ್ದಾರೆ.