ಬೆಂಗಳೂರು: ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಏಮ್ಸ್‌ಗೆ (All Indian Institute of Medical Sciences ) ಮುಂದಿನ ನಿರ್ದೇಶಕರಾಗಿ ಡಾ.ಎಂ.ಶ್ರೀನಿವಾಸ್ (Dr M Srinivas) ಹೆಸರನ್ನು ಸಂಪುಟದ ನೇಮಕಾತಿ ಸಮಿತಿ ಅನುಮೋದಿಸಿದೆ.
Dr M Srinivas, Dean, ESIC, Medical College & Hospital, Hyderabad as new Director of #AIIMS, Delhi today for a period of 5 years. #AIIMSDirector pic.twitter.com/MEzBk4GonZ
— Priyanka Sharma (@journo_priyanka) September 23, 2022
Advertisement
Advertisement
ಡಾ. ಎಂ.ಶ್ರೀನಿವಾಸ್ ಕನ್ನಡಿಗರಾಗಿದ್ದು ಯಾದಗಿರಿ ಮೂಲದವರಾಗಿದ್ದಾರೆ. ಬಳ್ಳಾರಿಯ ಏಮ್ಸ್‌ನಲ್ಲಿ 1984ರ ಬ್ಯಾಚ್‍ನ ಎಂಬಿಬಿಎಸ್ ವಿದ್ಯಾರ್ಥಿಯಾಗಿದ್ದರು. ಸದ್ಯ ಹೈದರಾಬಾದ್‍ನ ಸನತ್‍ನಗರದ (Hydrabad Sanatnagar) ಇಎಸ್‍ಐಸಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಡೀನ್ ಆಗಿದ್ದು, ಇದಕ್ಕೂ ಮೊದಲು ಅವರು ದೆಹಲಿಯ ಏಮ್ಸ್‌ನಲ್ಲಿಯೇ (AIIMS) ಪೀಡಿಯಾಟ್ರಿಕ್ ಸರ್ಜರಿ ವಿಭಾಗದಲ್ಲಿ ಪ್ರಾಧ್ಯಾಪಕರಾಗಿದ್ದ ಕಾರ್ಯನಿರ್ವಹಿಸಿದ್ದರು. ಇದೀಗ ಹುದ್ದೆಯನ್ನು ವಹಿಸಿಕೊಳ್ಳುವ ದಿನಾಂಕದಿಂದ ಐದು ವರ್ಷಗಳ ಅವಧಿಗೆ ಅಥವಾ 65 ವರ್ಷ ವಯಸ್ಸಿನವರೆಗೆ ಅವರು ಈ ಹುದ್ದೆಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ. ಇದನ್ನೂ ಓದಿ: CET ಬಿಕ್ಕಟ್ಟು ಶಮನ – ಸರ್ಕಾರದ ಸಮನ್ವಯ ಸೂತ್ರಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್
Advertisement
Advertisement
ಈ ಹಿಂದೆ ನಿರ್ದೇಶಕರಾಗಿದ್ದ ಡಾ. ರಣದೀಪ್ ಗುಲೇರಿಯಾ (Dr Randeep Guleria) ಅವರನ್ನು 2017 ಮಾರ್ಚ್ 28ರಂದು ಏಮ್ಸ್ ನಿರ್ದೇಶಕರಾಗಿ ಐದು ವರ್ಷಗಳ ಅವಧಿಗೆ ನೇಮಕ ಮಾಡಲಾಗಿತ್ತು. ಅಧಿಕಾರ ಅವಧಿ ಮುಗಿದ ನಂತರ ಎರಡು ಬಾರಿ ತಲಾ ಮೂರು ತಿಂಗಳಂತೆ ಅವಧಿ ವಿಸ್ತರಿಸಲಾಗಿತ್ತು. ಇವರ ಅಧಿಕಾರಿ ಶುಕ್ರವಾರ ಅಂತ್ಯವಾಗಲಿದ್ದು, ಡಾ.ಶ್ರೀನಿವಾಸ್ ಮುಂದಿನ ಐದು ವರ್ಷ ಕಾರ್ಯನಿರ್ವಹಿಸಲಿದ್ದಾರೆ. ಇದನ್ನೂ ಓದಿ: ಮಂಗಳೂರು ದಸರಾ-2022: ತಾಲೂಕಿನಾದ್ಯಂತ 4 ದಿನ ಹೆಚ್ಚುವರಿ ರಜೆ