ತುಳುನಾಡಿನ ಜಾನಪದ ಕ್ರೀಡೆಗಳಲ್ಲಿ ಬಹುಮುಖ್ಯವಾದ ಕ್ರೀಡೆ ಕಂಬಳ. ಈ ಕಂಬಳದ ಕುರಿತು “ವೀರ ಕಂಬಳ” ಎಂಬ ಚಿತ್ರವನ್ನು ಖ್ಯಾತ ಎಸ್ ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಕೋಣಗಳನ್ನು ಓಡಿಸುವುದರಲ್ಲಿ ಪ್ರಸಿದ್ಧರಾಗಿರುವ ಶ್ರೀನಿವಾಸ ಗೌಡ ಹಾಗೂ ನಾಟಕ ಕಲಾವಿದ ಸ್ವರಾಜ್ ಶೆಟ್ಟಿ ಕಂಬಳ ಓಡಿಸುವವರ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈವರೆಗೂ ರಿಯಲ್ ಆಗಿ ಕಂಬಳದ ಕೋಣ ಓಡಿಸುತ್ತಿದ್ದ ಶ್ರೀನಿವಾಸ್ ಗೌಡ ಇದೇ ಮೊದಲ ಬಾರಿಗೆ ಬಣ್ಣ ಹಚ್ಚಿದ್ದಾರೆ. ದನ್ನೂ ಓದಿ : ಕಾಶ್ಮೀರ ಟಿವಿ ಸ್ಟಾರ್ ನಟಿ ಹತ್ಯೆ ಮಾಡಿದ ಭಯೋತ್ಪಾದಕರು
Advertisement
ಈ ಸಿನಿಮಾದಲ್ಲಿ ವಿಶೇಷಪಾತ್ರದಲ್ಲಿ ಆದಿತ್ಯ ನಟಿಸುತ್ತಿದ್ದರೆ, ರಾಧಿಕಾ ಚೇತನ್ ಪೊಲೀಸ್ ಕಮಿಷನರ್ ಆಗಿ ಕಾಣಿಸಿಕೊಂಡಿದ್ದಾರೆ. ನವೀನ್ ಪಡೀಲ್, ಗೋಪಿನಾಥ್ ಭಟ್, ಭೋಜರಾಜ್ ವಾಮಾಂಜುರು ಸೇರಿದಂತೆ ಪ್ರಸಿದ್ದ ತುಳು ನಟರು ಈ ಚಿತ್ರದಲ್ಲಿದ್ದಾರೆ. ಬಹುತೇಕ ಚಿತ್ರೀಕರಣ ಮುಗಿದಿದೆ. ಸ್ವಲ್ಪ ಭಾಗದ ಚಿತ್ರೀಕರಣ ಮಾತ್ರ ಬಾಕಿಯಿದ್ದು, ಖ್ಯಾತ ನಟ ಪ್ರಕಾಶ್ ರಾಜ್ ಅವರನ್ನು ಅಭಿನಯಿಸಲು ಚಿತ್ರತಂಡ ಕೇಳಿದೆಯಂತೆ. ಅವರು ಒಪ್ಪಿಗೆ ನೀಡಿದ್ದಾರೆ. ಸದ್ಯದಲ್ಲೇ ಅವರ ಭಾಗ ಶೂಟಿಂಗ್ ಕೂಡ ಮುಗಿಯಲಿದೆ ಎಂದಿದೆ ಸಿನಿಮಾತಂಡ.
Advertisement
Advertisement
ಈ ಚಿತ್ರಕ್ಕೆ ದೇಸಿ ಸಂಗೀತ ಬೇಕಿತ್ತು. ಹಾಗಾಗಿ ಅಲ್ಲಿನ ಬಗ್ಗೆ ತಿಳಿದಿರುವ ಮಣಿಕಾಂತ್ ಕದ್ರಿ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಗಿರಿ ಈ ಚಿತ್ರದ ಛಾಯಾಗ್ರಾಹಕರು. ತುಳು ಹಾಗೂ ಕನ್ನಡ ಭಾಷೆಗಳಲ್ಲಿ ಈ ಚಿತ್ರ ಬರುತ್ತಿದೆ. ತೆಲುಗು, ತಮಿಳು , ಹಿಂದಿ ಹಾಗೂ ಇಂಗ್ಲೀಷ್ ಭಾಷೆಗಳಿಗೆ ಡಬ್ ಆಗಲಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಬಿಡುಗಡೆಗೆ ಸಿದ್ದತೆ ನಡೆಯುತ್ತಿದೆ. ವಿದೇಶಗಳಲ್ಲಿ ಪ್ರೀಮಿಯರ್ ಶೋ ನಡೆಸುವ ಯೋಜನೆಯಿದೆ ಎಂದು “ವೀರ ಕಂಬಳ” ದ ಬಗ್ಗೆ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ : ತಮಿಳು ಖ್ಯಾತ ನಟ ಸಿಂಬು ಮನೆಮುಂದೆ ಹೈಡ್ರಾಮಾ, ಸೀರಿಯಲ್ ನಟಿ ಧರಣಿ
Advertisement
ಈ ಸಿನಿಮಾದಲ್ಲಿ ವಿಶೇಷ ಪಾತ್ರ ಮಾಡಿರುವ ಆದಿತ್ಯ ಮಾತನಾಡಿ, “ನನಗೆ ತುಳು ಚಿತ್ರದಲ್ಲಿ ಅಭಿನಯಿಸುವ ಆಸೆ ಮುಂಚಿನಿಂದಲೂ ಇತ್ತು. ಏಕೆಂದರೆ ನನ್ನ ಅಜ್ಜಿ ಹಾಗೂ ಅಮ್ಮ ಇಬ್ಬರೂ ದಕ್ಷಿಣ ಕನ್ನಡದವರು. ನಾನು ಚಿತ್ರದಲ್ಲಿ ಅಭಿನಯಿಸುವ ವಿಷಯ ನನಗೆ ಗೊತ್ತಿರಲಿಲ್ಲ. ನಿರ್ಮಾಪಕರು ಈ ರೀತಿ ಪಾತ್ರವಿದೆ. ನೀವು ಮಾಡಬೇಕೆಂದರು. ವಿಭಿನ್ನ ಪಾತ್ರದಲ್ಲಿ ಅಭಿನಯಿಸಿದ್ದೇನೆ. ನಾನು ಮೊದಲ ದಿನ ಚಿತ್ರೀಕರಣಕ್ಕೆ ಸಿದ್ದವಾಗಿ ಬಂದಾಗ ಅಲ್ಲಿದವರೆಲ್ಲ ನನ್ನ ನೋಡಿ ಆಶ್ಚರ್ಯಪಟ್ಟರು. ಚಿತ್ರ ಬಿಡುಗಡೆಯಾದಾಗ ನನ್ನ ಪಾತ್ರದ ಬಗ್ಗೆ ನಿಮಗೂ ತಿಳಿಯಬಹುದು” ಎಂದಿದ್ದಾರೆ.