ಉಡುಪಿ: ಕೋಟ ಶ್ರೀನಿವಾಸ ಪೂಜಾರಿ ಒಂದು ರುಪಾಯಿ ಖರ್ಚು ಮಾಡದೇ ಗೆದ್ದಿದ್ದಾರೆ ಎಂದು ಬಿಜೆಪಿ ಸಂಘಟನಾ ರಾಷ್ಟ್ರೀಯ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಹೇಳಿದ್ದಾರೆ.
ವಿಧಾನ ಪರಿಷತ್ ಚುನಾವಣೆ ನಡೆದು ಫಲಿತಾಂಶ ಬಂದಿದೆ. ಬುದ್ಧಿವಂತರ ಚುನಾವಣೆ ಮಾದರಿ ಎಂದೆಲ್ಲಾ ಇವರಿಗೆ ಬಿಂಬಿತವಾದ ಪರಿಷತ್ ಚುನಾವಣೆಗೆ ಕೋಟಿ ಕೋಟಿ ರೂಪಾಯಿ ಹಣದ ಹೊಳೆ ಹರಿದ ಬಗ್ಗೆ ಜಿಲ್ಲಾ ಮಟ್ಟದ ಶಕ್ತಿಕೇಂದ್ರ ಪ್ರಮುಖರ ಸಭೆಯಲ್ಲಿ ಪಾಲ್ಗೊಂಡ ಸಂತೋಷ್ ಅವರು ಖೇದ ವ್ಯಕ್ತಪಡಿಸಿದ್ದಾರೆ. ಈ ವೇಳೆ ಅವರು, ಮತಗಳು, ಮತ ಹಾಕಿದ ಪ್ರತಿನಿಧಿಗಳು ಖರೀದಿಯಾಗಿದ್ದಾರೆ ಎಂದು ವಿರೋಧ ವ್ಯಕ್ತಪಡಿಸಿದರು. ಇದನ್ನೂ ಓದಿ: ಪಠ್ಯಪುಸ್ತಕ ವಿತರಿಸದಿರುವುದು ಶಿಕ್ಷಣ ಸಚಿವರ ಅಸಮರ್ಥತೆಯ ಸಂಕೇತ: ಎಎಪಿ
Advertisement
Advertisement
ದ.ಕ-ಉಡುಪಿ ಶೇ.99 ನಾವು ಮಾರಾಟಕ್ಕಿಲ್ಲ ಅಂತ ತೋರಿಸಿಕೊಟ್ಟಿದೆ. ವಿಧಾನಪರಿಷತ್ ಚುನಾವಣೆಯಲ್ಲಿ ಇದು ಸಾಬೀತಾಗಬೇಕು. ನಾವು ಮಾರಾಟಕ್ಕಿಲ್ಲ, ದಾಕ್ಷಿಣ್ಯಕ್ಕೆ ಒಳಗಾಗುವುದಿಲ್ಲ ಎಂದು ಪ್ರತಿಜ್ಞೆ ಮಾಡಬೇಕು. ಸಾರ್ವಜನಿಕ ವ್ಯವಸ್ಥೆಯಲ್ಲಿ ಇರುವವರಿಗೆ ಈ ಬದ್ಧತೆ ಬೇಕು ಎಂದು ಕರೆ ನೀಡಿದರು.
Advertisement
ಕೆಲ ಜಿಲ್ಲೆಗಳಲ್ಲಿ ಕೋಟ್ಯಂತರ ರೂಪಾಯಿ ಪರಿಷತ್ತಿನ ಚುನಾವಣೆಗೆ ಖರ್ಚಾಗಿದೆ. ಆಮಿಷಗಳಿಗೆ ಮಣಿದು ಜನಪ್ರತಿನಿಧಿಗಳು ಮತ ಚಲಾವಣೆ ಮಾಡಿರುವುದು ಜಗಜ್ಜಾಹೀರಾಗಿದೆ. ದ.ಕ ಉಡುಪಿ ಬಿಜೆಪಿ ಅಭ್ಯರ್ಥಿ ಒಂದು ರೂಪಾಯಿ ಖರ್ಚು ಮಾಡದೆ ಗೆದ್ದಿದ್ದಾರೆ ಎಂದು ಕೋಟ ಶ್ರೀನಿವಾಸ ಪೂಜಾರಿ ಹೆಸರು ಉಲ್ಲೇಖ ಮಾಡದೇ ವಿಷಯ ಪ್ರಸ್ತಾಪ ಮಾಡಿದರು. ಇದನ್ನೂ ಓದಿ: ಪುತ್ತೂರು, ಸುಳ್ಯ, ಬೆಳ್ತಂಗಡಿ, ಕಡಬ ತಾಲೂಕಿನಲ್ಲಿ ನಿಷೇಧಾಜ್ಞೆ ಜಾರಿ
Advertisement
ವಿಧಾನ ಪರಿಷತ್ ರದ್ದು ಗೊಳಿಸುವ ಸಮಯ ಬಂದಿದೆಯಲ್ಲವೇ? ಅಂತ ಪಕ್ಷದ ಹಿರಿಯ ಮತ್ತು ಸಂವೇದನೆ ಇರುವ ಕಾರ್ಯಕರ್ತರೊಬ್ಬರು ನನ್ನನ್ನು ಪ್ರಶ್ನಿಸಿದರು. ದ.ಕನ್ನಡದ ಉಡುಪಿ ಜಿಲ್ಲೆಯಲ್ಲಿ ಈ ಪ್ರಶ್ನೆ ಉದ್ಭವಿಸುವುದಿಲ್ಲ. ಯಾರೂ ವೋಟ್ ಮಾರಾಟ ಮಾಡಬಾರದು ಅದೊಂದು ನಡವಳಿಕೆ. ನಾನು ಮಾರಾಟಕ್ಕಿಲ್ಲ ಎನ್ನುವುದು ರಾಜಕಾರಣಿಯೊಬ್ಬನಿಗೆ ಇರಬೇಕಾದ ಅತಿ ದೊಡ್ಡ ಗುಣ ಎಂದು ಹೇಳಿದರು.