– ಲೋಡುಗಟ್ಟಲೆ ಮಾವು ರಸ್ತೆಗೆ ಸುರಿದು ಪ್ರತಿಭಟನೆ
ಕೋಲಾರ: ಮಾವು ಬೆಲೆ ತೀವ್ರ ಕುಸಿತ ಹಿನ್ನೆಲೆ ಸರ್ಕಾರ ಬೆಂಬಲ ಬೆಲೆ ನೀಡಬೇಕೆಂದು ಒತ್ತಾಯಿಸಿ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನಲ್ಲಿ ಇಂದು ಬಂದ್ ಗೆ ಕರೆ ನೀಡಲಾಗಿದೆ.
ಜಿಲ್ಲಾ ಮಾವು ಬೆಳೆಗಾರರ ಸಂಘದಿಂದ ಬಂದ್ ಗೆ ಕರೆ ನೀಡಲಾಗಿದೆ. ಒಂದು ಟನ್ ಮಾವಿಗೆ ಮಾರುಕಟ್ಟೆಯಲ್ಲಿ 3000-4000 ರೂಪಾಯಿಗೆ ಕುಸಿತವಾಗಿದೆ. ಒಂದು ಟನ್ ಮಾವಿಗೆ ಕನಿಷ್ಠ 5 ಸಾವಿರ ಬೆಂಬಲ ಬೆಲೆ ನೀಡಿ ಮಾವು ಬೆಳೆಗಾರರ ನೆರವಿಗೆ ಸರ್ಕಾರ ಬರಬೇಕೆಂದು ಬೆಳೆಗಾರರು ಒತ್ತಾಯಿಸಿದ್ದಾರೆ.
Advertisement
Advertisement
ಜಿಲ್ಲೆಯ ಸಾವಿರಾರು ಮಾವು ಬೆಳೆಗಾರರು ಬಂದ್ ನಲ್ಲಿ ಭಾಗಿಯಾಗಿದ್ದು, ಬಂದ್ ಹಿನ್ನೆಲೆ ಶ್ರೀನಿವಾಸಪುರ ಪಟ್ಟಣದಲ್ಲಿ ಅಂಗಡಿ ಮುಂಗಟ್ಟುಗಳು ಬಂದ್, ಬಸ್ ಸಂಚಾರ ಸ್ಥಗಿತವಾಗಿದೆ.
Advertisement
ಶ್ರೀನಿವಾಸಪುರ ಹಳೇ ಬಸ್ ನಿಲ್ದಾಣದಲ್ಲಿ ಮಾವು ಬೆಳೆಗಾರರ ಪ್ರತಿಭಟನೆ ನಡೆಸುತ್ತಿದ್ದಾರೆ. ರಸ್ತೆಗೆ ಲೋಡುಗಟ್ಟಲೆ ಮಾವು ಸುರಿದು ಪ್ರತಿಭಟನೆ ಕೈಗೊಂಡಿದ್ದಾರೆ. ಮಾವು ಬೆಳೆಗಾರರಿಗೆ ರೈತ ಸಂಘದ ಮುಖಂಡರು ಬೆಂಬಲ ಸೂಚಿಸಿದ್ದಾರೆ. ಮಾವಿಗೆ ಬೆಂಬಲ ಬೆಲೆ ಘೋಷಿಸಿ ಇಲ್ಲವೇ ಫಲ್ಪ್ ಪ್ಯಾಕ್ಟರಿ ತೆರೆಯುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.