ಕಾರವಾರ: ಡಿ.ಕೆ.ಶಿವಕುಮಾರ್ ಅವರು ಬಿಜೆಪಿಯವರ ತಟ್ಟೆಯಲ್ಲಿ ನೊಣ ಬಿದ್ದಿದೆ ಎಂದು ಟೀಕಿಸುತ್ತಾರೆ. ನಿಮ್ಮ ತಟ್ಟೆಯಲ್ಲಿ ಕತ್ತೆ ಬಿದ್ದಿದೆ. ಮೊದಲು ಅದನ್ನು ತೆಗೆಯಿರಿ’ ಎಂದು ಸಾರಿಗೆ ಸಚಿವ ಶ್ರೀರಾಮುಲು ವಾಗ್ದಾಳಿ ನಡೆಸಿದ್ದಾರೆ.
Advertisement
ಯಲ್ಲಾಪುರದಲ್ಲಿ ಪಕ್ಷದಿಂದ ಹಮ್ಮಿಕೊಂಡಿದ್ದ ಜನ ಸ್ವರಾಜ್ ಸಮಾವೇಶದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಎಲ್ಲರನ್ನೂ ಏಕವಚನದಲ್ಲಿ ಹೇಗೆ ಬೇಕೋ ಹಾಗೆ ಮಾತಾಡಿಸುತ್ತಾರೆ. ಹಾನಗಲ್ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸೋತಾಗ ಆಡಳಿತ ವಿರೋಧಿ ಅಲೆಯಿದೆ, ಕಾಂಗ್ರೆಸ್ ಗೆಲುವಿನ ಸುನಾಮಿ ಆಗುತ್ತದೆ ಎಂದಿದ್ದರು. ಎಂಥ ಸುನಾಮಿ, ಬಿರುಗಾಳಿ ಬೀಸಿದರೂ ಎದುರಿಸುವ ಶಕ್ತಿ ಬಿಜೆಪಿಗಿದೆ. ಆ ಅಲೆಯಲ್ಲಿ ಕಾಂಗ್ರೆಸ್ ಒಡೆದು ಹೋಗುತ್ತದೆ ಎಂದರು. ಇದನ್ನೂ ಓದಿ: ಅವಳಿ ಮಕ್ಕಳಿಗೆ ಪೋಷಕರಾದ ನಟಿ ಪ್ರೀತಿ ಜಿಂಟಾ ದಂಪತಿ
Advertisement
Advertisement
ಕಳೆದ ಬಾರಿ ಚುನಾವಣೆಯಲ್ಲಿ ಬಾದಾಮಿಯಲ್ಲಿ ಸಿದ್ದರಾಮಯ್ಯ ಅವರು 1,600 ಮತಗಳಿಂದ ಗೆದ್ದರು. ಅದು ಎಣಿಕೆ ಸಂದರ್ಭದಲ್ಲಿ ಮೋಸದಿಂದ ಗೆದ್ದುಕೊಂಡರು. ಮುಖ್ಯಮಂತ್ರಿಯಾಗಿದ್ದವರು ಅಷ್ಟು ಅಂತರದಲ್ಲಿ ಗೆಲ್ಲುವುದು ದೊಡ್ಡ ವಿಚಾರವಲ್ಲ. ಮುಂದೆ ಅವರು ಎಲ್ಲಿ ಸ್ಪರ್ಧಿಸುತ್ತಾರೋ ಅಲ್ಲಿ ಕಾಂಗ್ರೆಸಿಗರೇ ಸುನಾಮಿ ರೀತಿಯಲ್ಲಿ ಕೆಲಸ ಮಾಡಿ ಅವರನ್ನು ಸೋಲಿಸುತ್ತಾರೆ. ಕಾಂಗ್ರೆಸ್‍ನಲ್ಲಿ ಗುಂಪುಗಳಿವೆ. ಕೇಂದ್ರದಲ್ಲಿ ಮೋದಿ ಅಧಿಕಾರದಲ್ಲಿರುವ ತನಕ ಕಾಂಗ್ರೆಸ್‍ಗೆ ಗೆಲುವು ಸಾಧ್ಯವಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಎರಡು ದಿನಗಳಲ್ಲಿ 20ಕ್ಕೂ ಹೆಚ್ಚು ಮನೆಗಳ್ಳತನ – ಆತಂಕದಲ್ಲಿ ಗಡಿಭಾಗದ ಜನರು
Advertisement
ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದಾಗ ಮುಸ್ಲಿಂ ನಾಯಕರನ್ನು ರಾಷ್ಟ್ರಪತಿ ಮಾಡಿದ್ದೀರಾ? ಅಬ್ದುಲ್ ಕಲಾಂರನ್ನು ರಾಷ್ಟ್ರಪತಿ ಮಾಡಿದ್ದು ಬಿಜೆಪಿ ಅಂತರ ಪರಿಶಿಷ್ಟ ಜಾತಿ ಸಮುದಾಯದವರು ಅದೇ ಹುದ್ದೆಯಲ್ಲಿದ್ದಾರೆ. ಬಿಜೆಪಿ ಅಧಿಕಾರದಲ್ಲಿದೆ ಎಂದು ಕಾಂಗ್ರೆಸ್‍ನವರು ಏನು ಬೇಕಾದರೂ ಹೇಳುವುದು ಶೋಭೆ ತರುವುದಿಲ್ಲ, ರಾಹುಲ್ ಗಾಂಧಿ ಪಾರ್ಟ್ ಟೈಂ ನಾಯಕ. ದೇಶಕ್ಕೆ ಅವರು ಬೇಕಾ ಅಥವಾ ಫುಲ್ ಟೈಂ ನಾಯಕ ಮೋದಿ ಬೇಕಾ ಎಂದು ಯೋಚಿಸಬೇಕು’ ಎಂದು ವ್ಯಂಗ್ಯವಾಡಿದರು.