ಚಿತ್ರದುರ್ಗ: ಕಾಂಗ್ರೆಸ್ ಈ ದೇಶಕ್ಕೆ ಸೂರ್ಯಗ್ರಹಣ ಹಾಗೂ ಚಂದ್ರ ಗ್ರಹಣವಿದ್ದಂತೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ವ್ಯಂಗ್ಯವಾಡಿದ್ದಾರೆ.
Advertisement
ನಗರದಲ್ಲಿ ಇಂದು ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ 65 ನೇ ಪುಣ್ಯ ಸ್ಮರಣೆ ನಿಮಿತ್ತ ನಗರದಲ್ಲಿನ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ನೆರವೇರಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗ್ರಹಣಗಳು ಯಾವ ರೀತಿ ಬಂದು ಹೋಗುತ್ತವೋ ಅದೇ ರೀತಿ ಕಾಂಗ್ರೆಸ್ ಪಕ್ಷ ಕೂಡ ಬಂದು ಹೋಗುತ್ತದೆ. ಈ ದೇಶ ಹಾಗೂ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡದೇ ಅಭಿವೃದ್ಧಿ ಕಾರ್ಯಗಳಿಗೆ ತಡೆಗೋಡೆಯಾಗಿ ನಿಲ್ಲುವಂತಹ ಪಕ್ಷ ಕಾಂಗ್ರೆಸ್ ಎಂದು ಆರೋಪಿಸಿದರು. ಇದನ್ನೂ ಓದಿ: 200 ಕೋಟಿ ರೂ. ವಂಚನೆ ಪ್ರಕರಣ – ದೇಶ ತೊರೆಯದಂತೆ ಜಾಕ್ವೆಲಿನ್ ಗೆ ತಡೆ
Advertisement
Advertisement
ಈ ಕಾಂಗ್ರೆಸ್‍ನವರಿಂದ ದೇಶ ಹಾಗೂ ರಾಜ್ಯ ಅಭಿವೃದ್ಧಿ ಸಾಧ್ಯವಿಲ್ಲ. ಹಾಗಾಗಿ ಬಿಜೆಪಿ ಪಕ್ಷಕ್ಕೆ ಜನರ ಆಶೀರ್ವಾದ ಇದ್ದು, ರಾಜ್ಯದಲ್ಲಿ 25 ಸ್ಥಾನಗಳಿಗೆ ವಿಧಾನ ಪರಿಷತ್ ಚುನಾವಣೆ ನಡೆಯುತ್ತಿದ್ದು, 20 ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಅದರಲ್ಲಿ 15 ಸ್ಥಾನಗಳನ್ನು ನಾವು ಗೆಲ್ಲಲಿದ್ದೇವೆ ಎಂದು ಹೇಳಿದರು.
Advertisement
ಪ್ರಸ್ತುತ ಈಗ ನಡೆಯುತ್ತಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ತಮ್ಮ ಸ್ಥಾನಗಳನ್ನು ಉಳಿಸಿಕೊಳ್ಳಲು ಹರ ಸಾಹಸ ಪಡುತ್ತಿದೆ. ಇವರಿಗೆ ಜನರು ಇಂದಿನ ವಿಧಾನ ಪರಿಷತ್ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದು, ಬಿಜೆಪಿ ಚಿತ್ರದುರ್ಗದಲ್ಲಿ ನವೀನ್ ಸೇರಿದಂತೆ 15 ಸ್ಥಾನಗಳನ್ನು ಗೆಲ್ಲಲಿದೆ ಎಂದರು. ಇದೇ ವೇಳೆ ಕೇಂದ್ರ ಸಚಿವ ನಾರಾಯಣಸ್ವಾಮಿ, ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ, ಕೆ.ಎಸ್.ನವೀನ್ ಸೇರಿದಂತೆ ಇತರರು ಉಪಸ್ಥಿತರಿದ್ದರು. ಇದನ್ನೂ ಓದಿ: ಪಕ್ಷ ಅಧಿಕಾರಕ್ಕೆ ಬಂದ್ರೆ 18 ವರ್ಷ ಮೇಲ್ಪಟ್ಟಯುವತಿಯರಿಗೆ ಪತ್ರಿ ತಿಂಗಳು 1 ಸಾವಿರ- ಕೇಜ್ರಿವಾಲ್