ರಾಯಚೂರು: ಸಿದ್ದರಾಮಯ್ಯ (Siddaramaiah) ಹರಕೆಯ ಕುರಿಯಾಗಿದ್ದಾರೆ. ಅವರು ಹರಕೆಯ ಕುರಿಯಾಗಬಾರದು. ಕಾಂಗ್ರೆಸ್‍ಗೆ (Congress) ದಮ್, ತಾಕತ್ ಇದ್ರೆ ಸಿದ್ದರಾಮಯ್ಯ ಅವರನ್ನ ಸಿಎಂ ಅಭ್ಯರ್ಥಿಯಾಗಿ ಘೋಷಣೆ ಮಾಡಲಿ ಎಂದು ಸಾರಿಗೆ ಸಚಿವ ಶ್ರೀರಾಮುಲು (Sriramulu) ಸವಾಲು ಹಾಕಿದ್ದಾರೆ.
ರಾಯಚೂರಿನ (Raichuru) ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ (Vijaya sankalpa yatre) ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ದೇವರಾಜ ಅರಸು (Devaraj Arasu), ನಿಜಲಿಂಗಪ್ಪ (Nijalingappa), ವೀರೇಂದ್ರ ಪಾಟೀಲ್, ಬಂಗಾರಪ್ಪ (Bangarappa) ಅವರನ್ನು ಯಾವ ರೀತಿಯಲ್ಲಿ ನಡೆಸಿಕೊಂಡರೋ, ಅದೇ ರೀತಿಯಲ್ಲಿ ಸಿದ್ದರಾಮಯ್ಯ ಅವರನ್ನು ನಡೆಸಿಕೊಳ್ಳುತ್ತಿದೆ. ಆ ಪರಿಸ್ಥಿತಿ ಸಿದ್ದರಾಮಯ್ಯ ಅವರಿಗೆ ಬರಬಾರದು ಎಂದಿದ್ದಾರೆ. ಇದನ್ನೂ ಓದಿ: ಶಾಸಕ ಹಂಚಿದ ಕುಕ್ಕರ್ ಅಸಲಿ ಮುಖ ತೆರೆದಿಟ್ಟ ಶೃಂಗೇರಿಯ ಮತದಾರರು
Advertisement
Advertisement
ಕಾಂಗ್ರೆಸ್‍ನಲ್ಲಿ ಒಗ್ಗಟ್ಟಿಲ್ಲ, ಒಳ ಜಗಳಗಳು ಪ್ರಾರಂಭವಾಗಿ ಮನೆಯೊಂದು ಮೂರು ಬಾಗಿಲಾಗಿದೆ ಎಂದು ವ್ಯಂಗ್ಯಮಾಡಿದ್ದಾರೆ.
Advertisement
ನಾನು ಉಪ ಮುಖ್ಯಮಂತ್ರಿ ಸ್ಥಾನ ಕೇಳವ ಕಾಲ ಹೋಗಿದೆ. ಈಗ ಪ್ರಮೋಷನ್ ಆಗಿ ಸಿಎಂ ಸ್ಥಾನ ಕೇಳುವ ಸಮಯ ಬಂದಿದೆ. ಪಕ್ಷ ಮುಂದೆ ನನ್ನನ್ನ ಸಿಎಂ ಅಭ್ಯರ್ಥಿಯಾಗಿ ಘೋಷಣೆ ಮಾಡಬಹುದು ಎಂದು ಸಿಎಂ ಬಯಕೆಯನ್ನು ತೆರೆದಿಟ್ಟಿದ್ದಾರೆ.
Advertisement
ಬಿಎಂಟಿಸಿ (BMTC) ಬಸ್‍ನಲ್ಲಿ ಕಂಡಕ್ಟರ್ ಸಜೀವ ದಹನ ವಿಚಾರವಾಗಿ, ಮೃತನ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಲು ಆದೇಶ ಮಾಡಿದ್ದೇನೆ. ಕುಟುಂಬದವರಿಗೆ ಉದ್ಯೋಗ ನೀಡಲು ಆದೇಶಿಸಿಸಲಾಗಿದೆ. ಇನ್ಸೂರೆನ್ಸ್ ಬಗ್ಗೆಯೂ ಈಗಾಗಲೇ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.
ಸಾರಿಗೆ ನೌಕರರ ಮುಷ್ಕರ ವಿಚಾರದಲ್ಲಿ, ಶೀಘ್ರದಲ್ಲೇ ಸಿಹಿ ಸುದ್ದಿ ಕೊಡುತ್ತೇವೆ. 10% ವೇತನ ಹೆಚ್ಚಳಕ್ಕೆ ನಾವು ಒಪ್ಪಿದ್ದೇವೆ. ಆದರೆ ನೌಕರರು ಒಪ್ಪುತ್ತಿಲ್ಲ ಎಂದಿದ್ದಾರೆ.
ಜನಾರ್ದನ ರೆಡ್ಡಿಗೆ (Janardhana Reddy) ಸಿಬಿಐ (CBI) ಸಮನ್ಸ್ (Summons) ಜಾರಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಅದು ಸಾಮಾನ್ಯ ಪ್ರಕ್ರಿಯೆ, ಅದರ ಬಗ್ಗೆ ನಾನು ಮಾತನಾಡುವುದಿಲ್ಲ. ಬಿಜೆಪಿಗರ (BJP) ಮೇಲೂ ದಾಳಿಯಾಗಿವೆ. ಕಾನೂನು ಚೌಕಟ್ಟಿನಲ್ಲಿ ಸಿಬಿಐ ಕಾರ್ಯ ನಿರ್ವಹಿಸುತ್ತದೆ ಎಂದಿದ್ದಾರೆ. ಇದನ್ನೂ ಓದಿ: ನಾನು ರಾಜಕೀಯದಲ್ಲಿ ಇರುವವರೆಗೆ ಅಭಿಷೇಕ್ ರಾಜಕೀಯಕ್ಕೆ ಬರಲ್ಲ: ಸುಮಲತಾ