– ಫೀಲ್ಡ್‌ಗಿಳಿದ ಗರುಡ ಟೀಮ್
ಬೆಂಗಳೂರು: ಪಾದರಾಯನಪುರದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಆದರೂ ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ಮಹಿಳೆಯರು ಕಾಂಪೌಂಡ್ ಹಾರಿ ಹೊರಗಡೆ ಹೋಗಿದ್ದಾರೆ. ಹೀಗಾಗಿ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಸಚಿವ ಶ್ರೀರಾಮುಲು ಸೂಚನೆ ನೀಡಿದ್ದಾರೆ.
ಪಾದರಾಯನಪುರದಲ್ಲಿ ಕಾಂಪೌಂಡ್ ಹಾರಿ ಮಹಿಳೆಯರು ಹೊರಗೆ ಹೋಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಶ್ರೀರಾಮುಲು ಟ್ವೀಟ್ ಮಾಡುವ ಮೂಲಕ ಪ್ರತಿಕ್ರಿಯಿಸಿದ್ದಾರೆ. “ಪಾದರಾಯನಪುರದಲ್ಲಿ ಕ್ವಾರಂಟೈನ್‍ನಲ್ಲಿರಬೇಕಾದ ಕೆಲ ಮಹಿಳೆಯರು ಹೊರ ಹೋದ ಬಗ್ಗೆ ತನಿಖೆಗೆ ಸೂಚಿಸಲಾಗಿದೆ. ನಾಡಿನ ಜನರ ಆರೋಗ್ಯದ ವಿಷಯದಲ್ಲಿ ಆಟವಾಡುವ ಇಂತಹ ಘಟನೆ ಸಹಿಸಲು ಅಸಾಧ್ಯ. ಇವರ ಮೇಲೆ ನಿರ್ದಾಕ್ಷಿಣ್ಯ ಕ್ರಮಕ್ಕಾಗಿ ಮಾನ್ಯ. ಸಿಎಂ ಯಡಿಯೂರಪ್ಪ ಅವರ ಜೊತೆ ಚರ್ಚೆ ನಡೆಸಲಾಗುವುದು. ನಾಡಿನ ಜನತೆಯ ಆರೋಗ್ಯ ಕಾಪಾಡುವುದೇ ನಮ್ಮ ಮುಖ್ಯ ಧ್ಯೇಯ” ಎಂದು ಟ್ವಿಟ್ಟರಿನಲ್ಲಿ ಬರೆದುಕೊಂಡಿದ್ದಾರೆ.
Advertisement
Advertisement
ಪಾದರಾಯನಪುರದಲ್ಲಿ ಸೀಲ್‍ಡೌನ್, ಲಾಕ್‍ಡೌನ್ ಇದ್ದರೂ ಮಹಿಳೆಯರು ಕೇರ್ ಮಾಡದೇ ಕಾಂಪೌಂಡ್ ಹಾರಿ ಬೇರೆ ಕಡೆ ಹೋಗಿದ್ದಾರೆ. ಈ ಘಟನೆಯಿಂದ ಎಚ್ಚೆತ್ತ ಬಿಬಿಎಂಪಿ ಅಧಿಕಾರಿಗಳು ಮತ್ತು ಗಡುಡ ತಂಡ ಫೀಲ್ಡಿಗಿಳಿದು ಜನರ ಕಳ್ಳ ಮಾರ್ಗವನ್ನು ಕಂಡುಹಿಡಿಯುವ ಪ್ರಯತ್ನ ಮಾಡುತ್ತಿದ್ದಾರೆ. ಪಾದರಾಯನಪುರದ ವಿಜಯನಗರಕ್ಕೆ ಹೋಗಿದ್ದು, ಇಡೀ ರಸ್ತೆಯಲ್ಲಿ ಓಡಾಡಿದ್ದಾರೆ. ಹೀಗಾಗಿ ವಿಜಯನಗರಕ್ಕೂ ಕೊರೊನಾ ಹಬ್ಬುವ ಭೀತಿ ಎದುರಾಗಿದೆ
Advertisement
ಪಾದರಾಯನಪುರದಲ್ಲಿ ಕ್ವಾರಂಟೈನ್ ನಲ್ಲಿರಬೇಕಾದ ಕೆಲ ಮಹಿಳೆಯರು ಹೊರ ಹೋದ ಬಗ್ಗೆ ತನಿಖೆಗೆ ಸೂಚಿಸಲಾಗಿದೆ.
ನಾಡಿನ ಜನರ ಆರೋಗ್ಯದ ವಿಷಯದಲ್ಲಿ ಆಟವಾಡುವ ಇಂತಹ ಘಟನೆ ಸಹಿಸಲು ಅಸಾಧ್ಯ.
ಇವರ ಮೇಲೆ ನಿರ್ದಾಕ್ಷಿಣ್ಯ ಕ್ರಮಕ್ಕಾಗಿ ಮಾನ್ಯ @CMofKarnataka ಗಳೊಡನೆ ಚರ್ಚೆ ನಡೆಸಲಾಗುವುದು.
ನಾಡಿನ ಜನತೆಯ ಆರೋಗ್ಯ ಕಾಪಾಡುವುದೇ ನಮ್ಮ ಮುಖ್ಯ ಧ್ಯೇಯ. https://t.co/XxLz3FDmz6
— B Sriramulu (@sriramulubjp) May 11, 2020
Advertisement
ಪಾದರಾಯನಪುರದವನ್ನು ಸೀಲ್‍ಡೌನ್ ಮಾಡಲಾಗಿದ್ದು, ಏರಿಯಾದಲ್ಲಿ ಪೊಲೀಸರು ಬ್ಯಾರಿಕೇಡ್ ಹಾಕಿದ್ದಾರೆ. ಆದರೆ ಮಹಿಳೆಯರು ಪೊಲೀಸರ ಮಾತಿಗೂ ಬಲೆ ಕೊಡದೆ ಬ್ಯಾರಿಕೇಡ್ ದಾಟಲು ಯತ್ನಿಸಿದ್ದಾರೆ. ಆಗ ಪೊಲೀಸರು ಮಹಿಳೆಯರಿಗೆ ಹೋಗಲು ಅವಕಾಶ ಮಾಡಿಕೊಟ್ಟಿಲ್ಲ. ಕೊನೆಗೆ ಮಹಿಳೆಯರು ಏಳು ಅಡಿ ಕಾಂಪೌಂಡ್ ಹಾರಿ ನಂತರ ರೈಲ್ವೇ ಹಳಿ ದಾಟಿ ವಿಜಯನಗರದ ಕಡೆ ಹೋಗಿದ್ದಾರೆ.