ಚಾಮರಾಜನಗರ: ಲಘು ಹೃದಯಾಘಾತವಾಗಿ ರಸ್ತೆಯಲ್ಲಿ ಬಿದ್ದು ಒದ್ದಾಡುತ್ತಿದ್ದ ಮಹಿಳೆಯನ್ನು ಕಂಡ ಆರೋಗ್ಯ ಸಚಿವ ಶ್ರೀರಾಮುಲು ಅವರು, ತಮ್ಮ ಕಾರಿನಲ್ಲೇ ಮಹಿಳೆಯನ್ನು ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಿ ಮಾನವೀಯತೆ ಮರೆದಿದ್ದಾರೆ.
ಮಲೆ ಮಹದೇಶ್ವರ ಬೆಟ್ಟಕ್ಕೆ ಹೋಗುವ ದಾರಿಯಲ್ಲಿ ಮಹಿಳೆಯೊಬ್ಬರಿಗೆ ಲಘು ಹೃದಯಾಘಾತವಾಗಿ ರಸ್ತೆ ಮಧ್ಯೆಯಲ್ಲಿ ಬಿದ್ದು ಒದ್ದಾಡುತ್ತಿದ್ದರು. ಇದೇ ಮಾರ್ಗದಲ್ಲಿ ಶ್ರೀರಾಮುಲು ಅವರು ಕೂಡ ಮಲೆ ಮಹದೇಶ್ವರನ ಬೆಟ್ಟಕ್ಕೆಂದು ಕಾರಿನಲ್ಲಿ ಬರುತ್ತಿದ್ದರು. ಈ ವೇಳೆ ರಸ್ತೆಯಲ್ಲಿ ಒದ್ದಾಡುತ್ತಿದ್ದ ಮಹಿಳೆಯನ್ನು ಕಂಡ ಸಚಿವರು ಸಹಾಯ ಹಸ್ತ ಚಾಚಿದ್ದಾರೆ. ತಮ್ಮ ಕಾರಿನಲ್ಲೇ ಮಹಿಳೆಯನ್ನು ಪ್ರಾರ್ಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿ, ಚಿಕಿತ್ಸೆ ಕೊಡಿಸಿ ಜೀವ ಉಳಿಸಿದ್ದಾರೆ.
Advertisement
Advertisement
ಈಗಾಗಲೇ ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ಇರುವ ಸಮಸ್ಯೆ, ಕುಂದುಕೊರತೆಗಳನ್ನು ಅರಿಯಲು ಸ್ವತಃ ಶ್ರೀರಾಮುಲು ಅವರು ಆಸ್ಪತ್ರೆಯಲ್ಲಿ ವಾಸ್ತವ್ಯ ಹೂಡಿದ್ದಾರೆ. ರೋಗಿಗಳ ಸಮಸ್ಯೆಗಳನ್ನು ಹತ್ತಿರದಿಂದ ತಿಳಿಯಲು ಶ್ರೀರಾಮುಲು ಆಸ್ಪತ್ರೆಯಲ್ಲಿ ತಂಗಿದ್ದಾರೆ. ಬೆಳಗ್ಗೆ ಎದ್ದು ಆಸ್ಪತ್ರೆಯ ಶೌಚಾಲಯದಲ್ಲೇ ಸ್ನಾನ ಮುಗಿಸಿ, ತಾವು ಉಳಿದಿದ್ದ ಕೊಠಡಿಯಲ್ಲೇ ಸಚಿವರು ಶಿವಪೂಜೆ ನೆರವೇರಿಸಿದ್ದರು.
Advertisement
ಜೀವಕ್ಕೆ ಬೆಲೆ ಕಟ್ಟಲಾಗದು. ಆಪತ್ಕಾಲದಲ್ಲಿ ಹೆಣ್ಣುಮಗಳ ಜೀವ ರಕ್ಷಿಸಿ ಧನ್ಯನಾದೆ.
ಚಾಮರಾಜನಗರಿಂದ ವಾಹನದಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದಾಗ ರಸ್ತೆ ಬದಿಯ ಮನೆಯೊಂದರ ಬಳಿ ಮಹಿಳೆಯೊಬ್ಬರು ಅನಾರೋಗ್ಯದಿಂದ ತೀವ್ರ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದರು. 1/3 pic.twitter.com/E8yAZbyMVW
— B Sriramulu (@sriramulubjp) September 25, 2019
Advertisement
ಪೂಜೆಯ ಬಳಿಕ ಆಸ್ಪತ್ರೆ ಆವರಣದಲ್ಲಿ ಶ್ರೀರಾಮುಲು ಅವರು ಸಿಬ್ಬಂದಿ ಜೊತೆ ಕುಂದುಕೊರತೆ ಸಭೆ ನಡೆಸಿದ್ದು, ಶುಶ್ರೂಷಕರ ಡಿ ದರ್ಜೆ ನೌಕರರ ಸಮಸ್ಯೆಗಳನ್ನು ಆಲಿಸಿದರು. ಜೊತೆಗೆ ಸೇವಾಭದ್ರತೆ, ಸಂಬಳದ ಕೊರತೆ ಬಗ್ಗೆ ಸಚಿವರಲ್ಲಿ ಶುಶ್ರೂಷಕಿಯರು ಮನವಿ ಮಾಡಿದ್ದರು.
ಆಸ್ಪತ್ರೆಯ ಸಮಸ್ಯೆ, ಸಿಬ್ಬಂದಿ ಸಮಸ್ಯೆಗಳನ್ನು ಆಲಿಸಿದ ಸಚಿವರು, ಕೇಂದ್ರ ಸರ್ಕಾರದ ನೂತನ ಯೋಜನೆ ಬಗ್ಗೆ ತಿಳಿಸಿ ಸಂಬಳ ಹೆಚ್ಚಿಸುವ ಬಗ್ಗೆ ಭರವಸೆ ನೀಡಿದರು. ಶ್ರೀರಾಮುಲು ಅವರ ಈ ಪ್ರಯತ್ನಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಸ್ವತಃ ಸಚಿವರೇ ಹೀಗೆ ಸಮಸ್ಯೆಗಳನ್ನು ಕಣ್ಣಾರೆ ಕಂಡು ಪರಿಹಾರ ನೀಡುವುದು ಒಂದೊಳ್ಳೆ ಪ್ರಯತ್ನ ಎಂದು ಶ್ಲಾಘಿಸಿದ್ದಾರೆ. ಈಗ ಕಷ್ಟದಲ್ಲಿದ್ದ ಮಹಿಳೆಗೆ ಸಹಾಯ ಮಾಡುವ ಮೂಲಕ ಶ್ರೀರಾಮುಲು ಅವರು ಮನ ಗೆದ್ದಿದ್ದಾರೆ.
— B Sriramulu (@sriramulubjp) September 25, 2019