ಕಸ ಸಂಗ್ರಹಣಾ ವಾಹನ ಚಲಾಯಿಸಿ ಜಾಗೃತಿ ಮೂಡಿಸಿದ ಶ್ರೀರಾಮುಲು

Public TV
1 Min Read
Sriramulu

ಚಿತ್ರದುರ್ಗ: ಮೊಳಕಾಲ್ಮೂರಿನಲ್ಲಿಂದು ಕಸ ಸಂಗ್ರಹಣಾ ವಾಹನಗಳಿಗೆ ಸ್ವಯಂ ವಾಹನ ಚಲಾಯಿಸುವ ಮೂಲಕ ಚಾಲನೆ ನೀಡಿದ ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಬಿ. ಶ್ರೀರಾಮುಲು, ಸಾರ್ವಜನಿಕರು ಸ್ಚಚ್ಚತೆಯನ್ನು ಮೈಗೂಡಿಸಿಕೊಂಡು ಸ್ವಚ್ಚ, ಸುಂದರ ಹಾಗೂ ಆರೋಗ್ಯಯುಕ್ತ ಸಮಾಜ ನಿರ್ಮಾಣಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿ ಜಾಗೃತಿ ಮೂಡಿಸಿದರು.

Sriramulu

ಮೊಳಕಾಲ್ಮೂರಿನಲ್ಲಿಂದು ಪಟ್ಟಣ ಪಂಚಾಯಿತಿಯು ಆಯೋಜಿಸಿದ್ದ ಕಸಸಂಗ್ರಹಣಾ ವಾಹನಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಸ್ಚಚ್ಚ ಭಾರತ ಸ್ವಾಥ್ಯ ಭಾರತವಾಗಿದೆ. ಮಹಾತ್ಮ ಗಾಂಧೀಜಿಯವರ ಆಶಯವೂ ಇದಾಗಿತ್ತು. ಮಹಾತ್ಮ ಗಾಂಧೀಜಿ ಅವರ ಆಶಯವನ್ನು ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು ಸಾಕಾರಗೊಳಿಸಿದ್ದಾರೆ ಎಂದು ನುಡಿದರು. ಇದನ್ನೂ ಓದಿ: ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಸೇರ್ಪಡೆಗೊಂಡ ಸಚಿವ ಯಶಪಾಲ್ ಆರ್ಯ, ಶಾಸಕ ಸಂಜೀವ್ ಆರ್ಯ

Sriramulu

ಮಕ್ಕಳಲ್ಲಿ ಸ್ವಚ್ಚತೆ ಕುರಿತು ಜಾಗೃತಿ ಮೂಡಿಸಬೇಕು. ಸಾರ್ವಜನಿಕರು ಸ್ವಚ್ಚತೆಯನ್ನು ಮೈಗೂಡಿಸಿಕೊಂಡು ತಮ್ಮ ಮನೆ, ಪರಿಸರವನ್ನು ಸ್ವಚ್ಚವಾಗಿಟ್ಟುಕೊಳ್ಳಬೇಕು. ಕಡ್ಡಾಯವಾಗಿ ಕಸವನ್ನು ಬೇರ್ಪಡಿಸಿ ಕಸಸಂಗ್ರಹಣಾ ವಾಹನಗಳಿಗೆ ನೀಡಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಕಡ್ಡಾಯವಾಗಿ ಶೌಚಾಯಗಳನ್ನು ಬಳಕೆ ಮಾಡಬೇಕು. ಸ್ಚಚ್ಚತೆ ಕಾಪಾಡಲು ಸರ್ಕಾರವು ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ. ಸಾರ್ವಜನಿಕರು ಸಹಕರಿಸಿ, ಸದುಪಯೋಗಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಹಣವೇ ಇಲ್ಲ ಲಾಕ್ ಮಾಡುವ ಅವಶ್ಯಕತೆ ಇತ್ತಾ?- ಮಾಲೀಕನಿಗೆ ಪತ್ರ ಬರೆದ ಕಳ್ಳರು

Sriramulu

ನಂತರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ, ಇಸ್ಕಾನ್ ಸಂಸ್ಥೆಯ ವತಿಯಿಂದ ಪೌರಕಾರ್ಮಿಕರಿಗೆ ಆಹಾರ ಕಿಟ್‍ಗಳನ್ನು ವಿತರಿಸಿದರು. ಸಂದರ್ಭದಲ್ಲಿ ವಿವಿಧ ಜನಪ್ರತಿನಿಧಿಗಳು, ಮುಖಂಡರು, ಅಧಿಕಾರಿಗಳು ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *