ಬಳ್ಳಾರಿ: ಸೋನಿಯಾ ಗಾಂಧಿ (Sonia Gandhi) ಮನೆಯಲ್ಲಿ ಸಿದ್ದರಾಮಯ್ಯ ಇಲಿ, ಬೆಕ್ಕು, ಜಿರಳೆ ಆಗಿರುತ್ತಾರೆ ಎಂದು ನಾನು ಹೇಳಬಹುದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯಗೆ (Siddaramaiah) ಸಚಿವ ಶ್ರೀರಾಮುಲು (Sriramulu) ತಿರುಗೇಟು ನೀಡಿದರು.
ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ನಾಯಿ ಮರಿಗೆ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಬಳ್ಳಾರಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸಿಎಂ ಆಗಿದ್ದರು, ಇದೀಗ ವಿಪಕ್ಷ ಪಕ್ಷ ನಾಯಕ ಆಗಿದ್ದಾರೆ. ಇಂತಹ ಉನ್ನತ ಸ್ಥಾನದಲ್ಲಿದ್ದು, ಸಿಎಂ ಸ್ಥಾನದ ವ್ಯಕ್ತಿಯನ್ನು ನಾಯಿ ಹೋಲಿಕೆ ಮಾಡುವುದು ಅವರ ಸಂಸ್ಕೃತಿಯನ್ನು ತೋರಿಸುತ್ತದೆ. ಸಿಎಂಗೆ ಹೀಗೆ ಮಾತನಾಡುವುದು ಎಷ್ಟು ಸರಿ? ಲಘುವಾಗಿ ಮಾತಾಡೋದು ಕಾಂಗ್ರೆಸ್ ಸಂಸ್ಕೃತಿಯನ್ನು ತೋರಿಸುತ್ತದೆ ಎಂದು ಕಿಡಿಕಾರಿದರು.
ಸೋನಿಯಾ ಗಾಂಧಿ ಮನೆಯಲ್ಲಿ ಇಲಿ, ಬೆಕ್ಕು ಜಿರಳೆ ಸಿದ್ದರಾಮಯ್ಯ ಇರುತ್ತಾರೆ ಎಂದು ನಾವು ಹೇಳಬಹುದು. ಆದರೆ ನಾವು ಆ ರೀತಿ ಹೇಳುವುದಿಲ್ಲ. ಅದು ನಮ್ಮ ಸಂಸ್ಕೃತಿಯಲ್ಲ. ಸಿಎಂ ಬಗ್ಗೆ ಲಘುವಾಗಿ ಮಾತಾಡೋದು ಸರಿಯಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಆರ್ಥಿಕ ಬಿಕ್ಕಟ್ಟು – ಪಾಕಿಸ್ತಾನದಲ್ಲಿ ಇಂಧನ ಉಳಿಸಲು ಮಾಲ್, ಮಾರ್ಕೆಟ್, ಮದುವೆ ಹಾಲ್‌ಗಳು ಬಂದ್
ವಿರೋಧ ಪಕ್ಷದ ನಾಯಕರಾಗಿ ಲಘುವಾಗಿ ಮಾತಾಡೋದು ಅವರ ಸಂಸ್ಕೃತಿ ತೋರಿಸಿದೆ. ಮೋದಿ ಮುಂದೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಧೈರ್ಯವಾಗಿ ಮಾತಾನಾಡುತ್ತಾರೆ. ಸಿಎಂ ಸ್ಥಾನಕ್ಕೆ ಅಗೌರವ ತೋರಿದ ಸಿದ್ದರಾಮಯ್ಯ ಅವರು ಕ್ಷಮೆ ಕೇಳಬೇಕು. ಸಿದ್ದರಾಮಯ್ಯ ಹೇಳಿಕೆ ಬಿಜೆಪಿಯಿಂದ ತೀವ್ರವಾಗಿ ಖಂಡನೆಗೆ ಆಗ್ರಹ ಮಾಡುತ್ತೇನೆ. ಸೋನಿಯಾ ಮುಂದೆ ಸಿದ್ದರಾಮಯ್ಯ ತುಟಿ ಬಿಚ್ಚಲ್ಲ. ನಮ್ಮ ಸಿಎಂ ಪ್ರಧಾನಿ ಮುಂದೆ ಎಲ್ಲವೂ ಮಾತನಾಡುತ್ತಾರೆ ಎಂದರು. ಇದನ್ನೂ ಓದಿ: 88,920 ರೂ. ಮೌಲ್ಯದ ಬಿಸ್ಕೆಟ್ ಕದ್ದ ಖದೀಮರಿಬ್ಬರ ಬಂಧನ