ಬಳ್ಳಾರಿ: ಬಳ್ಳಾರಿ ಉಪಚುನಾವಣೆಗೆ ಸಹಕಾರ ನೀಡದಿರುವುದಕ್ಕೆ ಸೋತೆ ಅಂತ ನಾನು ಯಾರನ್ನೂ ದೂರುವುದಿಲ್ಲ ಎಂದು ಶಾಸಕ ಶ್ರೀರಾಮುಲು ಹೇಳಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸೋಲು ಅನಾಥ, ಸಹೋದರಿ ಶಾಂತ ಸೋಲಿನ ಹೊಣೆಯನ್ನು ನಾನೇ ಹೊರುತ್ತೇನೆ. ಬಿ.ಎಸ್.ಯಡಿಯೂರಪ್ಪ ಅವರು ಪ್ರಚಾರಕ್ಕೆ ಬಂದಿದ್ದರು. ಶಾಸಕರಾದ ಸೋಮಣ್ಣ, ಸಿ.ಟಿ.ರವಿ ಸೇರಿದಂತೆ ಅನೇಕ ನಾಯಕರು ಪ್ರಚಾರದಲ್ಲಿ ಭಾಗಿಯಾಗಿದ್ದರು. ಆದರೆ ಜಿಲ್ಲೆಯ ಜನರು ನಮ್ಮನ್ನು ತಿರಸ್ಕಾರ ಮಾಡಿದ್ದಾರೆ ಎಂದು ಹೇಳಿದರು.
Advertisement
ನಮ್ಮ ಕಾರ್ಯಕರ್ತರು ಹರಸಾಹಸ ಪಟ್ಟಿದ್ದರು. ಆದರೆ ಭಗವಂತ ನಮಗೆ ಫಲ ಕೊಟ್ಟಿಲ್ಲ. ಆದರೆ ಸರ್ಕಾರವನ್ನು ದುರುಪಯೋಗ ಪಡೆಸಿಕೊಂಡು ವಿ.ಎಸ್.ಉಗ್ರಪ್ಪ ಅವರನ್ನು ಗೆಲ್ಲಿಸಲಾಗಿದೆ. ಜಿಲ್ಲೆಯ ಜನರು ನನಗೆ ಸಹಕಾರ ನೀಡುತ್ತಾ ಬಂದಿದ್ದಾರೆ. ಈಗ ಕೈಬಿಟ್ಟರು ಅಂತಾ ನಾನು ಅವರನ್ನು ದ್ವೇಷಿಸುವುದಿಲ್ಲ ಎಂದು ಶ್ರೀರಾಮುಲು ಹೇಳಿದರು.
Advertisement
Advertisement
ಬಳ್ಳಾರಿಯ ಉಪಚುನಾವಣೆ ಸೋತಿದ್ದಕ್ಕೆ ಯಾರನ್ನೂ ದ್ವೇಷಿಸಲ್ಲ. ಜನಾದೇಶಕ್ಕೆ ನಾವು ತಲೆಬಾಗುತ್ತೇವೆ. ಈ ಜಯ 2019ರ ಲೋಕಸಭಾ ಚುನಾವಣೆ ಮೇಲೆ ಪರಿಣಾಮ ಬೀರುವುದಿಲ್ಲ. ಮತದಾರರಿಗೆ ಹಣಕೊಟ್ಟು ಕಾಂಗ್ರೆಸ್‍ನವರು ಗೆದ್ದಿದ್ದಾರೆ. ಜೊತೆಗೆ ಇತರ ಕ್ಷೇತ್ರಗಳಲ್ಲಿ ಮೈತ್ರಿ ಪಕ್ಷದ ಪ್ರಾಬಲ್ಯವಿತ್ತು. ಹೀಗಾಗಿ ಜಯ ಗಳಿಸಿದ್ದಾರೆ. ಬಳ್ಳಾರಿ ಕ್ಷೇತ್ರದ ಸೋಲು ನಮಗಾದ ಹಿನ್ನಡೆ. ಈ ಕುರಿತು ಆತ್ಮಾವಲೋಕನ ಮಾಡುತ್ತೇವೆ ಎಂದು ತಿಳಿಸಿದರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv