ಖಾಸಗಿ ಬಸ್‍ಗಳ ಲೈಸನ್ಸ್ ರದ್ದು ಮಾಡುತ್ತೇವೆ: ಶ್ರೀರಾಮುಲು

Public TV
1 Min Read
SRIRAMULU

ತುಮಕುರು: ಜನರ ಜೀವವನ್ನು ಕಾಪಾಡುವುದು ನಮ್ಮ ಮೊದಲ ಆದ್ಯತೆಯಾಗಿದೆ. ಪಾವಗಡದಿಂದ ತುಮಕೂರು ಮಾರ್ಗವಾಗಿ ಸಂಚರಿಸುವ ಖಾಸಗಿ ಬಸ್‍ಗಳನ್ನು ರದ್ದು ಮಾಡುತ್ತೇವೆ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.

ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಅವರು, ಖಾಸಗಿ ಬಸ್ ಪಲ್ಟಿಯಾಗಿ 6 ಮಂದಿ ಸಾವನ್ನಪ್ಪಿದ್ದಾರೆ. ಈ ಸ್ಥಳಕ್ಕೆ ಉನ್ನತ ಮಟ್ಟದ ಅಧಿಕಾರಿಗಳನ್ನು ನಾನು ತನಿಖೆಗೆ ಕಳುಹಿಸಿಕೊಟ್ಟಿದ್ದೆ. ತನಿಖೆಯ ಪ್ರಾಥಮಿಕ ಹಂತದಲ್ಲಿ ನನಗೆ ಬಂದಿರುವ ವರದಿಯ ಪ್ರಕಾರ ಲೋಡ್ ಹೆಚ್ಚಾಗಿತ್ತು ಎನ್ನಲಾಗಿದೆ. ಬಸ್ ಟಾಪ್ ಮೇಲೆ ಕೂಡಾ ಜನರು ಕುಳಿತುಕೊಂಡಿದ್ದರು. ಈ ವೇಳೆ ಬಸ್ ಯಾವ ಸ್ಪೀಡ್‍ನಲ್ಲಿ ಓಡಿಸಬೇಕು ಎನ್ನುವ ಜ್ಞಾನ ಚಾಲಕನಿಗೆ ಇರಬೇಕಾಗಿತ್ತು. ಚಾಲಕನೊಬ್ಬನಿಗೆ ಶಿಕ್ಷೆ ಆಗಬೇಕಾದದ್ದು ಅಲ್ಲ, ಖಾಸಗಿ ಬಸ್ ಮಾಲೀಕರು ಇದಕ್ಕೆ ಹೊಣೆಯಾಗಿರುತ್ತಾರೆ. ಆ ಭಾಗದಲ್ಲಿ ಸಂಚರಿಸುವ ಖಾಸಗಿ ಬಸ್‍ಗಳ ಲೈಸನ್ಸ್ ರದ್ದು ಮಾಡಿದರೆ ಮಾತ್ರ ಅವರಿಗೆ ಬುದ್ದಿ ಬರುತ್ತದೆ ಎಂದಿದ್ದಾರೆ. ಇದನ್ನೂ ಓದಿ: ಮುಂದಿನ ಮೂರು ದಿನ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

SRI RAMULU 2

ಇಷ್ಟು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇದಕ್ಕೆಲ್ಲ ಹೊಣೆ ಯಾರು? ಬೇಜವಬ್ದಾರಿತನದಿಂದ ಕಾನೂನನ್ನು ಉಲ್ಲಂಘಿಸಲು ಅವರಿಗೆ ಯಾರು ಅಧಿಕಾರ ಕೊಟ್ಟಿದ್ದಾರೆ. ನಾನು ಆ ಭಾಗದಲ್ಲಿ ಸಂಚರಿಸುವ ಬಸ್‍ಗಳ ಲೈಸನ್ಸ್ ರದ್ದು ಮಾಡುತ್ತೇನೆ ಎಂದು ಹೇಳಿದ್ದಾರೆ.  ಇದನ್ನೂ ಓದಿ:  ವೈ.ಎನ್. ಹೊಸಕೋಟೆಯಿಂದ ಪಾವಗಡಕ್ಕೆ ಬರುತ್ತಿದ್ದ ಬಸ್ ಪಲ್ಟಿ:8 ಮಂದಿ ಸಾವು

ಖಾಸಗಿ ಅವರು ಬದುಕಬೇಕು. ಸರ್ಕಾರಿ ಬಸ್ ವ್ಯವಸ್ಥೆ ಇಲ್ಲದ ಭಾಗಗಳಿಗೆ ಸಂಚರಿಸಬೇಕು. ಅವರು ಸರ್ಕಾರದ ನಿಯಮಾನುಸಾರ ಸಂಚರ ಮಾಡಬೇಕು. ಆದರೆ ಕೇವಲ ಲಾಭದಾಯಕ ಕಾರಣದಿಂದ ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿ ಜನರ ಪ್ರಾಣಕ್ಕೆ ಕುತ್ತು ತರುವಂತೆ ಮಾಡಿದರೆ, ಕ್ಷಮಿಸುವ ಮಾತಿಲ್ಲ ಎಂದು ಖಾಸಗಿ ಬಸ್ ಮಾಲೀಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *