ರಾಯಚೂರು: ಜಿಲ್ಲಾ ಪ್ರವಾಸದಲ್ಲಿರುವ ಸಾರಿಗೆ ಇಲಾಖೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಶ್ರೀರಾಮುಲು ಸಿಂಧನೂರಿನಲ್ಲಿ ಬೆಳಗ್ಗೆ ವಾಯುವಿಹಾರದ ವೇಳೆ ರಸ್ತೆಯಲ್ಲಿ ಸಾರಿಗೆ ಇಲಾಖೆ ಚಾಲಕ, ನಿರ್ವಾಹಕರ ಸಮಸ್ಯೆ ಆಲಿಸಿದರು.
ಈ ಕುರಿತಂತೆ ಚಾಲಕ ಹಾಗೂ ನಿರ್ವಾಹಕರೊಂದಿಗೆ ಮಾತನಾಡಿದ್ದು ಖುಷಿಯಾಗಿದೆ ಅಂತ ಫೇಸ್ ಬುಕ್ ನಲ್ಲಿ ತಮ್ಮ ಅನುಭವವನ್ನು ಶ್ರೀರಾಮುಲು ಹಂಚಿಕೊಂಡಿದ್ದಾರೆ. ಶ್ರೀರಾಮುಲು ಪೋಸ್ಟ್ಗೆ ಸಾರ್ವಜನಿಕರು ಹಾಗೂ ಸಾರಿಗೆ ಇಲಾಖೆ ಸಿಬ್ಬಂದಿ ಉತ್ತಮವಾಗಿ ಪ್ರತಿಕ್ರಿಯಿಸಿದ್ದಾರೆ. ಅಲ್ಲದೇ ಫೇಸ್ ಬುಕ್‍ನಲ್ಲೂ ಸಮಸ್ಯೆಗಳನ್ನು ತೋಡಿಕೊಂಡಿರುವ ಸಾರಿಗೆ ಇಲಾಖೆ ಸಿಬ್ಬಂದಿ ಶ್ರೀರಾಮುಲು ಗಮನ ಸೆಳೆದಿದ್ದಾರೆ. ಇದನ್ನೂ ಓದಿ: ಫ್ಯಾಬ್ರಿಕ್ ಗೋಡೌನ್‍ನಲ್ಲಿ ಬೆಂಕಿ – ಸ್ಥಳಕ್ಕೆ ಆಗಮಿಸಿದ 18 ಅಗ್ನಿ ಶಾಮಕ ವಾಹನ
ಪರಿಶಿಷ್ಟ ಪಂಗಡದ ವಿದ್ಯಾರ್ಥಿನಿಯರ ವಸತಿಗಳ ಉದ್ಘಾಟನೆಗೆ ಆಗಮಿಸಿರುವ ಶ್ರೀ ರಾಮುಲು ಸಿಂಧನೂರು ಪಟ್ಟಣದಲ್ಲಿ ವಿದ್ಯಾರ್ಥಿನಿಯರ ಮೆಟ್ರಿಕ್ ನಂತರದ ವಸತಿ ನಿಲಯ ಉದ್ಘಾಟನೆ ಮಾಡಿದರು. ವಸತಿ ನಿಲಯ ಉದ್ಘಾಟನೆ ಬಳಿಕ ವಿದ್ಯಾರ್ಥಿನಿಯರ ಜೊತೆಗೆ ಸಂವಾದ ನಡೆಸಿದರು. ಬಸ್, ಕುಡಿಯುವ ನೀರು, ರಸ್ತೆ ಸಮಸ್ಯೆ ಸರಿಪಡಿಸಲು ವಿದ್ಯಾರ್ಥಿನಿಯರು ಮನವಿ ಮಾಡಿದರು. ಸಂವಾದ ಬಳಿಕ ವಿದ್ಯಾರ್ಥಿನಿಯರ ಜೊತೆಗೆ ಶ್ರೀರಾಮುಲು ಸೆಲ್ಫಿ ತೆಗೆದುಕೊಂಡರು. ಇದನ್ನೂ ಓದಿ: ಉಚಿತವಾಗಿ 120 ದಿನಗಳಲ್ಲಿ 25 ಸಾವಿರ ಮಂದಿಗೆ ಕೋವಿಡ್ ಲಸಿಕೆ- ಶ್ರೀರಾಮ ಸೇವಾ ಮಂಡಳಿ