Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇನ್ನೊಬ್ಬರನ್ನು ಮುಗಿಸಿಯೇ ಮೇಲಕ್ಕೆ ಬಂದ ಮಹಾಪುರುಷ ನೀವಲ್ಲವೇ? – ಸಿದ್ದು ವಿರುದ್ಧ ಶ್ರೀರಾಮುಲು ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಇನ್ನೊಬ್ಬರನ್ನು ಮುಗಿಸಿಯೇ ಮೇಲಕ್ಕೆ ಬಂದ ಮಹಾಪುರುಷ ನೀವಲ್ಲವೇ? – ಸಿದ್ದು ವಿರುದ್ಧ ಶ್ರೀರಾಮುಲು ಕಿಡಿ

Bengaluru City

ಇನ್ನೊಬ್ಬರನ್ನು ಮುಗಿಸಿಯೇ ಮೇಲಕ್ಕೆ ಬಂದ ಮಹಾಪುರುಷ ನೀವಲ್ಲವೇ? – ಸಿದ್ದು ವಿರುದ್ಧ ಶ್ರೀರಾಮುಲು ಕಿಡಿ

Public TV
Last updated: August 30, 2022 2:09 pm
Public TV
Share
4 Min Read
SIDDARAMAIAH SRIRAMULU
SHARE

ಬೆಂಗಳೂರು: ಜೀವನದಲ್ಲಿ ಇನ್ನೊಬ್ಬರನ್ನು ಮುಗಿಸಿಯೇ ಮೇಲಕ್ಕೆ ಬಂದ ಮಹಾಪುರುಷ ತಾವಲ್ಲವೇ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಚಿವ ಶ್ರೀರಾಮುಲು ವಾಗ್ದಾಳಿ ನಡೆಸಿದ್ದಾರೆ.

Sriramulu

ಸಿದ್ದರಾಮಯ್ಯ ಅವರ ವಿರುದ್ಧ ಸರಣಿ ಟ್ವೀಟ್ ಮಾಡಿರುವ ಶ್ರೀರಾಮುಲು ಅವರು, ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಬುದ್ಧಿಯ ಬಿಡು. ದಾಸಶ್ರೇಷ್ಠ ಶ್ರೀ ಪುರಂದರದಾಸರು ಮಾಜಿ ಸಿ.ಎಂ. ಸಿದ್ದರಾಮಯ್ಯನಂತವರನ್ನು ನೋಡಿಯೇ ಈ ಪದವನ್ನು ಬರೆದಿದ್ದರೆ ಅಚ್ಚರಿಯಿಲ್ಲ. ಏಕೆಂದರೆ ನೀವು ಜೀವನದಲ್ಲಿ ಇನ್ನೊಬ್ಬರನ್ನು ಮುಗಿಸಿಯೇ ಮೇಲಕ್ಕೆ ಬಂದ ಮಹಾಪುರುಷ ತಾವಲ್ಲವೇ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಬಾಡಿಗೆ ಮನೆಯಲ್ಲಿ ಸುರಂಗ ನೋಡಿ ದಂಗಾದ ಮಾಲೀಕ – ಮಾದಕ ವಸ್ತು, ಮಾರಕಾಸ್ತ್ರ ಪತ್ತೆ

ಸುಳ್ಳೇ ನಮ್ಮ ಮನೆದೇವರು ಎಂಬುದನ್ನು ನಿಮ್ಮನ್ನು ನೋಡಿ ಕಲಿಯಬೇಕು. ಏಕೆಂದರೆ ನೀವು ಹೇಳುವುದು ಒಂದು, ಮಾಡುವುದು ಇನ್ನೊಂದು ಎಂಬುದು ‌ಎಲ್ಲರಿಗೂ ಗೊತ್ತಿರುವ ವಿಷಯ.! ಇಂತಹ ಕಲೆ ನಿಮಗಲ್ಲದೆ ಬೇರೆಯವರಿಗೆ ಬರಲು ಹೇಗೆ ಸಾಧ್ಯ? ಸುಳ್ಳಿನ ರಾಮಯ್ಯನವರೇ? 2/16

— B Sriramulu (@sriramulubjp) August 30, 2022

ಸುಳ್ಳೇ ನಮ್ಮ ಮನೆದೇವರು ಎಂಬುದನ್ನು ನಿಮ್ಮನ್ನು ನೋಡಿ ಕಲಿಯಬೇಕು. ಏಕೆಂದರೆ ನೀವು ಹೇಳುವುದು ಒಂದು, ಮಾಡುವುದು ಇನ್ನೊಂದು ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ.! ಇಂತಹ ಕಲೆ ನಿಮಗಲ್ಲದೆ ಬೇರೆಯವರಿಗೆ ಬರಲು ಹೇಗೆ ಸಾಧ್ಯ? ಸುಳ್ಳಿನ ರಾಮಯ್ಯನವರೇ? ಮಾತೆತ್ತಿದರೆ ಅಹಿಂದ ಬಗ್ಗೆ ಮೊಸಳೆ ಕಣ್ಣೀರು ಸುರಿಸುವ ನೀವು 2018 ರ ವಿಧಾನಸಭೆ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಾ.ಜಿ.ಪರಮೇಶ್ವರ್ ಅವರಿಗೆ ಕೊರಟಗೆರೆಯಲ್ಲಿ ಬೆನ್ನಿಗೆ ಚೂರಿ ಹಾಕಿದ್ದು ಯಾರು? ಯಾವ ಯಾವ ಸಂಧರ್ಭದಲ್ಲಿ ಯಾರ ಕುತ್ತಿಗೆ ಕೊಯ್ದಿರಿ ಎಂಬುದನ್ನು ಬಹಿರಂಗ ಪಡಿಸಲೇ ಚೂರಿ ರಾಮಯ್ಯನವರೇ ಎಂದಿದ್ದಾರೆ.

ಮಾತೆತ್ತಿದರೆ ಅಹಿಂದ ಬಗ್ಗೆ ಮೊಸಳೆ ಕಣ್ಣೀರು ಸುರಿಸುವ ನೀವು 2018 ರ ವಿಧಾನಸಭೆ ಚುನಾವಣೆಯಲ್ಲಿ
ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಾ.ಜಿ.ಪರಮೇಶ್ವರ್ ಅವರಿಗೆ ಕೊರಟಗೆರೆಯಲ್ಲಿ ಬೆನ್ನಿಗೆ ಚೂರಿ ಹಾಕಿದ್ದು ಯಾರು? ಯಾವ ಯಾವ ಸಂಧರ್ಭದಲ್ಲಿ ಯಾರ ಕುತ್ತಿಗೆ ಕೊಯ್ದಿರಿ ಎಂಬುದನ್ನು ಬಹಿರಂಗ ಪಡಿಸಲೇ ಚೂರಿ ರಾಮಯ್ಯನವರೇ? 3/16

— B Sriramulu (@sriramulubjp) August 30, 2022

ಯಾರೋ ಕಟ್ಟಿದ ಹುತ್ತಕ್ಕೆ ಕರಿ ನಾಗನಂತೆ ಸೇರಿಕೊಂಡ ನೀವು ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್, ಕೆ.ಹೆಚ್. ಮುನಿಯಪ್ಪ, ಅಲ್ಪಸಂಖ್ಯಾತ ಸಮುದಾಯದ ಜಾಫರ್ ಷರೀಪ್, ಸೇರಿದಂತೆ ಹಲವರನ್ನು ಮುಗಿಸಿಯೇ ಮೇಲಕ್ಕೆ ಬಂದ ನಿಮ್ಮದು ಯಾವ ಸೀಮೆಯ ಅಹಿಂದ? ಬಿಡಿಸಿ ಹೇಳುತ್ತೀರಾ? ಅಹಿಂದ ನಾಯಕರನ್ನು ಮುಗಿಸಿರುವ ನಿಮ್ಮ ಮುಂದಿನ ಗುರಿ ಒಕ್ಕಲಿಗರಾ? ಅದರಲ್ಲೂ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಇರಬಹುದೇ? ಎಲ್ಲಿ ನನಗೆ ಸ್ಪರ್ಧೆಯೊಡ್ಡಬಹುದು ಎಂಬ ಆತಂಕದಿಂದ ಅವರನ್ನೂ ಮೂಲೆಗುಂಪು ಮಾಡುವ ನಿಮ್ಮ ಯತ್ನ ಮುಗಿದಿಯೇ ಇಲ್ಲವೇ ಮುಂದುವರೆಯುವುದೋ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಯಾವುದೇ ಕಾರಣಕ್ಕೂ ಅನ್ನಭಾಗ್ಯ ಯೋಜನೆ ನಿಲ್ಲಿಸಲ್ಲ: ಉಮೆಶ್ ಕತ್ತಿ

ಅಹಿಂದ ನಾಯಕರನ್ನು ಮುಗಿಸಿರುವ ನಿಮ್ಮ ಮುಂದಿನ ಗುರಿ ಒಕ್ಕಲಿಗರಾ? ಅದರಲ್ಲೂ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಇರಬಹುದೇ? ಎಲ್ಲಿ ನನಗೆ ಸ್ಪರ್ಧೆಯೊಡ್ಡಬಹುದು ಎಂಬ ಆತಂಕದಿಂದ ಅವರನ್ನೂ ಮೂಲೆಗುಂಪು ಮಾಡುವ ನಿಮ್ಮ ಯತ್ನ ಮುಗಿದಿಯೇ ಇಲ್ಲವೇ ಮುಂದುವರೆಯುವುದೋ? 5/16

— B Sriramulu (@sriramulubjp) August 30, 2022

ಒಬ್ಬ ನಾಯಕನನ್ನು ಸೃಷ್ಟಿಸುವ ಯೋಗ್ಯತೆ ಇಲ್ಲ. ಇರುವ ಪಕ್ಷದ ಮೇಲೆ ವಿಶ್ವಾಸವಿಲ್ಲ. ‘ಬ್ರೂಟಸ್ ಮನಃಸ್ಥಿತಿ’, ಸಂದರ್ಭಕ್ಕೆ ತಕ್ಕಂತೆ ಬಣ್ಣ ಬದಲಿಸುವ ಊಸರವಳ್ಳಿ ದುಸ್ಥಿತಿ. ಅಧಿಕಾರ ಕೊಟ್ಟ ಪಕ್ಷಕ್ಕೆ ಬ್ಲಾಕ್ ಮೇಲ್ ಮಾಡುವ ಸ್ವಯಂಘೋಷಿತ ಮಹಾನಾಯರು ನೀವಲ್ಲವೇ? ಹೆಸರಿನಲ್ಲಿ ‘ರಾಮ’! ಉಂಡ ಮನೆಗೆ ಪಂಗನಾಮ! ಸ್ವಯಂ ಘೋಷಿತ ಸತ್ಯಹರಿಶ್ಚಂದ್ರ ಎಷ್ಟೇ ಆದರೂ, ಸತ್ಯ ನಿಮಗೆ ಅಪಥ್ಯ ಅಲ್ಲವೇ? ಕಳ್ಳಬೆಕ್ಕು ಕದ್ದು ಹಾಲು ಕುಡಿದರೆ ಗೊತ್ತಾಗುವುದಿಲ್ಲ ಎಂಬ ಹುಂಬುತನವೇ? ಸುಳ್ಳೇ ನಿಮ್ಮ ರಾಜಕೀಯ ಅಸ್ತಿತ್ವದ ಪ್ರತೀಕ. ಸುಳ್ಳು ಸುಳ್ಳೇ ನಿಮ್ಮ ನರಿಬುದ್ಧಿ ಅವಕಾಶವಾದಿ ರಾಜಕಾರಣ ನಿಜಸ್ವರೂಪ ಎಂದು ಕಿಡಿಕಾರಿದ್ದಾರೆ.

ಹೆಸರಿನಲ್ಲಿ ʼರಾಮʼ! ಉಂಡ ಮನೆಗೆ ಪಂಗನಾಮ! ಸ್ವಯಂ ಘೋಷಿತ ಸತ್ಯಹರಿಶ್ಚಂದ್ರ ಎಷ್ಟೇ ಆದರೂ, ಸತ್ಯ ನಿಮಗೆ ಅಪಥ್ಯ ಅಲ್ಲವೇ? ಕಳ್ಳಬೆಕ್ಕು ಕದ್ದು ಹಾಲು ಕುಡಿದರೆ ಗೊತ್ತಾಗುವುದಿಲ್ಲ ಎಂಬ ಹುಂಬುತನವೇ? ಸುಳ್ಳೇ ನಿಮ್ಮ ರಾಜಕೀಯ ಅಸ್ತಿತ್ವದ ಪ್ರತೀಕ. ಸುಳ್ಳು ಸುಳ್ಳೇ ನಿಮ್ಮ ನರಿಬುದ್ಧಿ ಅವಕಾಶವಾದಿ ರಾಜಕಾರಣ ನಿಜಸ್ವರೂಪ.
7/16

— B Sriramulu (@sriramulubjp) August 30, 2022

ದೇವರಾಜ್ ಅರಸ್ ನಂತರ ನಾನೇ ಅತ್ಯಂತ ಯಶಸ್ವಿ ಮುಖ್ಯಮಂತ್ರಿ ಎಂದು ಹಿಂಬಾಲಕರಿಂದ ಜೈಕಾರ ಹಾಕಿಸಿಕೊಳ್ಳುವ ಬುರಡೆರಾಮಯ್ಯವರೇ, 5 ವರ್ಷದ ಅವಧಿಯಲ್ಲಿ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತ ಸಮುದಾಯಕ್ಕೆ ನಿಮ್ಮಷ್ಟು ಚೂರಿ ಹಾಕಿದ ಸಿ.ಎಂ. ಮತ್ತೊಬ್ಬರಿಲ್ಲ ಎಂಬುದನ್ನು ಬಿಡಿಸಿ ಹೇಳಬೇಕೇ? ನೀವು ಆಡಳಿತದಲ್ಲಿ ಇದ್ದಾಗ ಈ ಸಮಸ್ಯೆಯನ್ನು ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದರೆ ಇಂದು ನಮ್ಮ ಸರ್ಕಾರದ ಬಗ್ಗೆ ಮಾತನಾಡುವ ಪ್ರಮೇಯವೇ ಬರುತ್ತಿರಲಿಲ್ಲ. ಜನರ ಕಣ್ಣಿಗೆ ಮಂಕುಬೂದಿ ಎರಚುವ ಕಲೆ ನಿಮಗಲ್ಲದೆ ಬೇರೆಯವರಗೆ ಹೇಗೆ ಬರಲು ಸಾಧ್ಯ ಎಂದು ಹರಿಹಾಯ್ದಿದ್ದಾರೆ.

ನೀವು ಆಡಳಿತದಲ್ಲಿ ಇದ್ದಾಗ ಈ ಸಮಸ್ಯೆಯನ್ನು ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದರೆ ಇಂದು ನಮ್ಮ ಸರ್ಕಾರದ ಬಗ್ಗೆ ಮಾತನಾಡುವ ಪ್ರಮೇಯವೇ ಬರುತ್ತಿರಲಿಲ್ಲ. ಜನರ ಕಣ್ಣಿಗೆ ಮಂಕುಬೂದಿ ಎರಚುವ ಕಲೆ ನಿಮಗಲ್ಲದೆ ಬೇರೆಯವರಗೆ ಹೇಗೆ ಬರಲು‌
ಸಾಧ್ಯ? 9/16

— B Sriramulu (@sriramulubjp) August 30, 2022

ನಿಮ್ಮ ಅಧಿಕಾರದ ಅವಧಿಯಲ್ಲಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮೂಲಕ 160 ಕೋಟಿ ಖರ್ಚು ಮಾಡಿ ನಡೆಸಿದ್ದ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯ ವರದಿ ಪೂರ್ಣಗೊಂಡಿದ್ದರೂ ಅದನ್ನು ಬಹಿರಂಗಗೊಳಿಸದೇ ಕಸದ ಬುಟ್ಟಿಗೆ ಹಾಕಿದ್ದು ಯಾವ ವಚನಭ್ರಷ್ಟತೆ? ಉತ್ತರ ಕೊಡುತ್ತೀರಾ ಸಿದ್ದರಾಮಯ್ಯನವರೇ. ವರದಿ ಬಿಡುಗಡೆ ಮಾಡದಂತೆ ನಿಮ್ಮ ಸಂಪುಟದ ಸಹೋದ್ಯೋಗಿಗಳೇ ಒತ್ತಡ ಹಾಕಿ ಕಾಂತರಾಜು ಅವರ ವರದಿಯನ್ನು ಶೈತ್ಯಗಾರಕ್ಕೆ ಹಾಕಿದ್ದು ವಚನಭ್ರಷ್ಟತೆ ಅಲ್ಲದೆ ಮತ್ತೇನು? ಇದನ್ನು ಮಾಧ್ಯಮಗಳಲ್ಲಿ ವ್ಯವಸ್ಥಿತ ಸೋರಿಕೆ ಮಾಡಿ, ಕೊನೆಗೆ ನಮಗೆಯೇ ತಿರುಗಬಾಣವಾದೀತು ಎಂದು ಮುಚ್ಚಿಹಾಕಿದ ಪ್ರಖರ ಪಂಡಿತರು ನೀವಲ್ಲವೇ ಎಂದಿದ್ದಾರೆ.

ವರದಿ ಬಿಡುಗಡೆ ಮಾಡದಂತೆ ನಿಮ್ಮ ಸಂಪುಟದ ಸಹೋದ್ಯೋಗಿಗಳೇ ಒತ್ತಡ ಹಾಕಿ ಕಾಂತರಾಜು ಅವರ ವರದಿಯನ್ನು ಶೈತ್ಯಗಾರಕ್ಕೆ ಹಾಕಿದ್ದು ವಚನಭ್ರಷ್ಟತೆ ಅಲ್ಲದೆ ಮತ್ತೇನು? ಇದನ್ನು ಮಾಧ್ಯಮಗಳಲ್ಲಿ ವ್ಯವಸ್ಥಿತ ಸೋರಿಕೆ ಮಾಡಿ, ಕೊನೆಗೆ ನಮಗೆಯೇ ತಿರುಗಬಾಣವಾದೀತು ಎಂದು ಮುಚ್ಚಿಹಾಕಿದ ಪ್ರಖರ ಪಂಡಿತರು ನೀವಲ್ಲವೇ? 11/16

— B Sriramulu (@sriramulubjp) August 30, 2022

ಈಗಲೂ ನನ್ನ ಮಾತಿಗೆ ನಾನು ಬದ್ದವಾಗಿದ್ದೇನೆ. ನನ್ನ ಸಮುದಾಯಕ್ಕೆ ಮೀಸಲಾತಿ ಪ್ರಮಾಣವನ್ನು ಶೇ. 3 ರಿಂದ 7.5ಕ್ಕೆ ಹೆಚ್ಚಿಸಲು ಸರ್ಕಾರದ ಮೇಲೆ ಎಲ್ಲಾ ರೀತಿಯ ಪ್ರಯತ್ನ ನಡೆಸಿದ್ದೇನೆ. ಅಧಿಕಾರಕ್ಕೀಂತ ಸಮುದಾಯದ ಹಿತ ಮುಖ್ಯ ಎಂಬುದು ನನಗೂ ಗೊತ್ತಿದೆ. ಪರಿಶಿಷ್ಟ ಪಂಗಡದ ಜನಾಂಗದವರಿಗೆ ಮೀಸಲಾತಿ ಪ್ರಮಾಣವನ್ನು 3% ರಿಂದ 7.5% ಹೆಚ್ಚಿಸುವ ಸಂಬಂಧ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿಯನ್ನು ಜಾರಿಗೊಳಿಸುಂತೆ ನಮ್ಮ ಜನಪ್ರಿಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿಕೊಳ್ಳಲಾಗಿದೆ. ಅವರಿಂದಲೂ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಹೇಳಿದ್ದಾರೆ.

ಪರಿಶಿಷ್ಟ ಪಂಗಡದ ಜನಾಂಗದವರಿಗೆ ಮೀಸಲಾತಿ ಪ್ರಮಾಣವನ್ನು 3% ರಿಂದ 7.5% ಹೆಚ್ಚಿಸುವ ಸಂಬಂಧ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿಯನ್ನು ಜಾರಿಗೊಳಿಸುಂತೆ ನಮ್ಮ ಜನಪ್ರಿಯ ಮುಖ್ಯಮಂತ್ರಿಗಳಾದ @BSBommai ಅವರಿಗೆ ಮನವಿ ಮಾಡಿಕೊಳ್ಳಲಾಗಿದೆ.ಅವರಿಂದಲೂ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದೆ‌. 13/16

— B Sriramulu (@sriramulubjp) August 30, 2022

ಮೀಸಲಾತಿ ಸಂಬಂಧ ನಾಗಮೋಹನ್ ದಾಸ್ ವರದಿ ನೀಡಿದ್ದಾರೆ. ಸುಭಾಷ್ ಆಡಿಯ ನೇತೃತ್ವದ ತ್ರಿಸದಸ್ಯ ಸಮಿತಿ ನೀಡಿರುವ ವರದಿ ಪರಿಶೀಲನಾ ಹಂತದಲ್ಲಿದೆ. ಅದಷ್ಟು ಶೀಘ್ರ ನಮ್ಮ ಸಮುದಾಯಕ್ಕೆ ಸಿಹಿ ಸುದ್ದಿಯನ್ನು ನಮ್ಮ ಸರ್ಕಾರವೇ ಕೊಡಲಿದೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಯಾರಿಗೂ ಸಂಶಯವೇ ಬೇಡ. ಮೀಸಲಾತಿ ಸಂಬಂಧ ನಾನು ಹೇಳಿರುವ ಮಾತಿನಿಂದ ಒಂದು ಇಂಚು ಹಿಂದೆ ಸರಿಯಲ್ಲ. ನಾನು ಅದಕ್ಕೆ ಬದ್ಧನಾಗಿದ್ದೇನೆ. ಇದು ಕಾನೂನಿನ ವಿಷಯವಾಗಿದ್ದು, ಸ್ವತಃ ವಕೀಲರಾಗಿರುವ ನಿಮಗೆ ಅರ್ಥವಾಗದಿರುವುದಕ್ಕೆ
ನನಗೆ ವಿಷಾದವಿದೆ.! 15/16

— B Sriramulu (@sriramulubjp) August 30, 2022

ಈ ಬಗ್ಗೆ ಯಾರಿಗೂ ಸಂಶಯವೇ ಬೇಡ. ಮೀಸಲಾತಿ ಸಂಬಂಧ ನಾನು ಹೇಳಿರುವ ಮಾತಿನಿಂದ ಒಂದು ಇಂಚು ಹಿಂದೆ ಸರಿಯಲ್ಲ. ನಾನು ಅದಕ್ಕೆ ಬದ್ಧನಾಗಿದ್ದೇನೆ. ಇದು ಕಾನೂನಿನ ವಿಷಯವಾಗಿದ್ದು, ಸ್ವತಃ ವಕೀಲರಾಗಿರುವ ನಿಮಗೆ ಅರ್ಥವಾಗದಿರುವುದಕ್ಕೆ ನನಗೆ ವಿಷಾದವಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಚುನಾವಣೆ ಸಮೀಪಿಸುತ್ತಿರುವಾಗ
ಇದನ್ನು ರಾಜಕೀಯ ಅಸ್ತ್ರ ಮಾಡಿಕೊಳ್ಳುತ್ತಿರುವುದು ನಿಮ್ಮ ರಾಜಕೀಯ ದಿವಾಳಿತನಕ್ಕೆ ಹಿಡಿದ ಕೈಗನ್ನಡಿ. ಕಡೆ ಪಕ್ಷ 5 ವರ್ಷ ಮುಖ್ಯಮಂತ್ರಿ ಆಗಿದ್ದಾಗ ನಮ್ಮ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡುವ ಬಗ್ಗೆ ಒಂದು ಸಣ್ಣ ಆಲೋಚನೆ ನಿಮ್ಮ ತಲೆಯಲ್ಲಿ ಹೊಳೆದಿತ್ತೇ? 16/16

— B Sriramulu (@sriramulubjp) August 30, 2022

ಚುನಾವಣೆ ಸಮೀಪಿಸುತ್ತಿರುವಾಗ ಇದನ್ನು ರಾಜಕೀಯ ಅಸ್ತ್ರ ಮಾಡಿಕೊಳ್ಳುತ್ತಿರುವುದು ನಿಮ್ಮ ರಾಜಕೀಯ ದಿವಾಳಿತನಕ್ಕೆ ಹಿಡಿದ ಕೈಗನ್ನಡಿ. ಕಡೆ ಪಕ್ಷ 5 ವರ್ಷ ಮುಖ್ಯಮಂತ್ರಿ ಆಗಿದ್ದಾಗ ನಮ್ಮ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡುವ ಬಗ್ಗೆ ಒಂದು ಸಣ್ಣ ಆಲೋಚನೆ ನಿಮ್ಮ ತಲೆಯಲ್ಲಿ ಹೊಳೆದಿತ್ತೇ ಎಂದಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:bengalurubjpcongresssiddaramaiahsriramulutweetಕಾಂಗ್ರೆಸ್ಟ್ವೀಟ್ಬಿಜೆಪಿಬೆಂಗಳೂರುಶ್ರೀರಾಮುಲುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

IPL 2026 1
Bengaluru City

IPL 2026 | ಇಂದಿನಿಂದ ಚುಟುಕು ಕ್ರಿಕೆಟ್ ಹಬ್ಬ – 18 ವರ್ಷಗಳ ಬಳಿಕ ಬೆಂಗಳೂರಲ್ಲಿ ಐಪಿಎಲ್ ಉದ್ಘಾಟನೆ

Public TV
By Public TV
9 minutes ago
KP Sharma Oli
Latest

ನೇಪಾಳದ ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಓಲಿ, ಮಾಜಿ ಗೃಹಸಚಿವ ಅರೆಸ್ಟ್‌

Public TV
By Public TV
11 minutes ago
container ship
Latest

ಈಗ ಚೀನಾ ಹಡಗುಗಳಿಗೂ ಶಾಕ್‌ – ಅನುಮತಿ ನೀಡದ ಇರಾನ್‌

Public TV
By Public TV
9 hours ago
davanagere south by election local youth express anger against sadiq pailwan
Davanagere

ಕಾಂಗ್ರೆಸ್ ಜೊತೆ ಪೈಲ್ವಾನ್‌ಗೂ ಮಣ್ಣು ಮುಕ್ಕಿಸುತ್ತೇವೆ – ಬೀದಿಗಿಳಿದು ಆಕ್ರೋಶ ಹೊರಹಾಕಿದ ಮುಸ್ಲಿಂ ಯುವಕರು

Public TV
By Public TV
9 hours ago
PM Modi virtual meeting chief ministers and lieutenant governors
Latest

ಕೋವಿಡ್‌ ರೀತಿ ರಾಜ್ಯ, ಕೇಂದ್ರ ಒಗ್ಗಟ್ಟಾಗಿ ಇಂಧನ ಬಿಕ್ಕಟ್ಟನ್ನು ಎದುರಿಸೋಣ: ಮೋದಿ ಕರೆ

Public TV
By Public TV
9 hours ago
karwar demand for firewood increases due to cylinder shortage forest department grants permission to cut 3 lakh trees
Latest

ಸಿಲಿಂಡರ್ ಅಭಾವದಿಂದ ಕಟ್ಟಿಗೆಗೆ ಹೆಚ್ಚಿದ ಬೇಡಿಕೆ – ಅರಣ್ಯ ಇಲಾಖೆಯಿಂದ 3ಲಕ್ಷ ಮರಗಳ ಕಟಾವಿಗೆ ಅನುಮತಿ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?