ಬೆಂಗಳೂರು: ಬಯಸಿದ ಖಾತೆ ಸಿಗದಿದ್ದಕ್ಕೆ ಬಿಜೆಪಿಯಲ್ಲಿ ಭಿನ್ನಮತ ಭುಗಿಲೆದ್ದಿದೆ. ಬೆಳ್ಳಂಬೆಳಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿವಾಸಕ್ಕೆ ಸಚಿವ ಶ್ರೀರಾಮುಲು ಭೇಟಿ ನೀಡಿದ್ದಾರೆ.
ಲಕ್ಷ್ಮಣ್ ಸವದಿಗೆ ಡಿಸಿಎಂ ಖಾತೆ ನೀಡಿರುವುದಕ್ಕೆ ಶ್ರೀರಾಮುಲು ಬೇಸರಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಜೊತೆ ಸುಮಾರು ಅರ್ಧಗಂಟೆಯಿಂದ ಡಿಸಿಎಂ ವಿಚಾರವಾಗಿ ಶ್ರೀ ರಾಮುಲು ಚರ್ಚಿಸುತ್ತಿದ್ದಾರೆ. ಇತ್ತ ಸಿಎಂ ಕೂಡ ಹೈಕಮಾಂಡ್ ತೀರ್ಮಾನದ ಬಗ್ಗೆ ಸ್ಪಷ್ಟನೆ ಕೊಡುತ್ತಿದ್ದಾರೆ ಎಂದು ತಿಳಿದು ಬಂದಿದೆ.
Advertisement
Advertisement
ಅಷ್ಟೇ ಅಲ್ಲದೆ ವಾಲ್ಮೀಕಿ ಸಮುದಾಯದಲ್ಲಿ ಭುಗಿಲೆದ್ದ ಆಕ್ರೋಶದ ಬಗ್ಗೆ ಮತ್ತು ಸಚಿವ ಸಿ.ಟಿ ರವಿ ಹಾಗೂ ಮತ್ತು ಆರ್. ಅಶೋಕ್ ಅಸಮಾಧಾನದ ಬಗ್ಗೆಯೂ ಮಾತುಕತೆ ನಡೆಸುತ್ತಿದ್ದಾರೆ. ಶ್ರೀರಾಮುಲು ಅಭಿಮಾನಿಗಳು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಆಕ್ರೋಶ ಹೊರಹಾಕಿದ್ದಾರೆ.
Advertisement
ಶ್ರೀರಾಮುಲು ಒಬ್ಬರೇ ಡಿಸಿಎಂ ಹುದ್ದೆ ಬೇಡಿದ್ದರು. ಆದರೆ ಡಿಸಿಎಂ ಪಟ್ಟ ಕೇಳದವರಿಗೆ ನೀಡಲಾಗಿದೆ. 80ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಶ್ರೀರಾಮುಲು ಪ್ರಚಾರ ಮಾಡಿದ್ದಾರೆ. ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ್ದಾರೆ. ಶ್ರೀರಾಮುಲು ಅವರೇ ದಯಮಾಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಕೇವಲ ಶಾಸಕರಾಗಿರಿ. ಇಡೀ ವಾಲ್ಮೀಕಿ, ಎಸ್‍ಸಿ, ಎಸ್‍ಟಿ, ಓಬಿಸಿ ಸಮುದಾಯ ನಿಮ್ಮ ಬೆಂಬಲಕ್ಕಿದೆ ಎಂದು ಹೈಕಮಾಂಡ್ ವಿರುದ್ಧ ಕಿಡಿಕಾರಿದ್ದಾರೆ.