ಮಂಡ್ಯ: ಆರ್‌ಎಸ್‌ಎಸ್ (RSS) ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್‌ಗೆ (Kalladka Prabhakar Bhat) ಶ್ರೀರಂಗಪಟ್ಟಣ (Srirangapatna) ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಮುಸ್ಲಿಂ ಮಹಿಳೆಯರ ಅವಹೇಳನ ಆರೋಪದಡಿ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.
ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಹೋರಾಟಗಾರ್ತಿ ನಜ್ಮಾ ನಜೀರ್ ನೀಡಿದ ದೂರಿನ ಅನ್ವಯ ಐಪಿಸಿ ಸೆಕ್ಷನ್ 354, 294, 509, 506, 153ಂ, 295, 295ಂ, 298 ಅಡಿ ಪ್ರಕರಣ ದಾಖಲಾಗಿತ್ತು. ಶ್ರೀರಂಗಪಟ್ಟಣ ಸಂಕೀರ್ತನಾ ಯಾತ್ರೆ ಭಾಷಣ ವೇಳೆ ಮುಸ್ಲಿಂ ಸಮುದಾಯದ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಆರೋಪ ಪ್ರಭಾಕರ್ ಭಟ್ ಮೇಲೆ ಇತ್ತು. ಶ್ರೀರಂಗಪಟ್ಟಣ ಟೌನ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿ ಕೋರ್ಟ್‌ಗೆ ಚಾರ್ಜ್ ಶೀಟ್ ಸಹ ಸಲ್ಲಿಕೆಯಾಗಿತ್ತು. ಇದನ್ನೂ ಓದಿ: ಯತೀಂದ್ರ ಜವಾಬ್ದಾರಿಯುತ ನಾಯಕ, ಅವರ ಮಾತನ್ನು ತಿರುಚುವ ಅಗತ್ಯವಿಲ್ಲ: ಡಿ.ಕೆ.ಶಿವಕುಮಾರ್
Advertisement
Advertisement
ಇಂದು ಈ ಪ್ರಕರಣ ಸಂಬಧ ವಿಚಾರಣೆ ನಡೆದು ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದ್ದು, ಇಬ್ಬರ ಶ್ಯೂರಿಟಿ ಜೊತೆಗೆ 2 ಲಕ್ಷ ರೂ. ಬಾಂಡ್ ಮೇಲೆ ನಿರೀಕ್ಷಣಾ ಜಾಮೀನು ನೀಡಲಾಗಿದೆ. ವಕೀಲ ಚಂದ್ರೇಗೌಡ ಕಲ್ಲಡ್ಕ ಪ್ರಭಾಕರ್ ಪರ ವಾದ ಮಂಡನೆ ಮಾಡಿದರು. ಇದನ್ನೂ ಓದಿ: ದೇವರನ್ನು ಗೊಂಬೆ ಎನ್ನುವ ಕಾಂಗ್ರೆಸ್ ಪಕ್ಷದ ಅವನತಿಗೆ ಈ ಹೇಳಿಕೆಯೇ ಅಡಿಗಲ್ಲು: ಆರ್.ಅಶೋಕ್
Advertisement