Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸೃಜನ್ ಲೋಕೇಶ್ ನಿರ್ದೇಶಿಸಿ, ನಟಿಸಿದ ಜಿಎಸ್‌ಟಿ ಚಿತ್ರದ ಟ್ರೈಲರ್ ರಿಲೀಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಸೃಜನ್ ಲೋಕೇಶ್ ನಿರ್ದೇಶಿಸಿ, ನಟಿಸಿದ ಜಿಎಸ್‌ಟಿ ಚಿತ್ರದ ಟ್ರೈಲರ್ ರಿಲೀಸ್

Cinema

ಸೃಜನ್ ಲೋಕೇಶ್ ನಿರ್ದೇಶಿಸಿ, ನಟಿಸಿದ ಜಿಎಸ್‌ಟಿ ಚಿತ್ರದ ಟ್ರೈಲರ್ ರಿಲೀಸ್

Public TV
Last updated: November 12, 2025 4:27 pm
Public TV
Share
3 Min Read
Srujan Lokesh GST Movie
SHARE

ಖ್ಯಾತ ನಟ ಸೃಜನ್ ಲೋಕೇಶ್ (Srujan Lokesh) ನಟನಾಗಿ, ನಿರ್ಮಾಪಕನಾಗಿ ಜನಪ್ರಿಯ. ಈಗ ‘GST’ ಚಿತ್ರದ ಮೂಲಕ ನಿರ್ದೇಶಕನ ಕ್ಯಾಪ್ ತೊಟ್ಟಿದ್ದಾರೆ. ಈ ಚಿತ್ರವನ್ನು ಪ್ರತಿಷ್ಠಿತ ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ಲಾಂಛನದಲ್ಲಿ ಸಂದೇಶ್ ಎನ್ ನಿರ್ಮಾಣ ಮಾಡಿದ್ದಾರೆ. ಹಿರಿಯ ನಿರ್ಮಾಪಕ ಸಂದೇಶ್ ನಾಗರಾಜ್ ಅವರು ಅರ್ಪಿಸುತ್ತಿದ್ದಾರೆ. ಚಿತ್ರ ಇದೇ ತಿಂಗಳ 28ರಂದು ತೆರೆಗೆ ಬರುತ್ತಿದೆ. ಅದಕ್ಕೆ ಪೂರ್ವಭಾವಿಯಾಗಿ ಟ್ರೇಲರ್ ಬಿಡುಗಡೆಯಾಗಿದೆ. ರಿಯಲ್ ಸ್ಟಾರ್ ಉಪೇಂದ್ರ ಟ್ರೇಲರ್ ತಮ್ಮದೇ ಆದ ರೀತಿಯಲ್ಲಿ ಆಕ್ಷನ್ ಹೇಳುವ ಮೂಲಕ ಟ್ರೇಲರ್ ಅನಾವರಣ ಮಾಡಿದರು. ಪ್ರಿಯಾಂಕಾ ಉಪೇಂದ್ರ ನವೆಂಬರ್ 14 ರಂದು ಬಿಡುಗಡೆಯಾಗಲಿರುವ ಚಿತ್ರದ ಹಾಡಿನ ಪ್ರೋಮೊ ರಿಲೀಸ್ ಮಾಡಿದರು. ಉಪೇಂದ್ರ ದಂಪತಿ ಹಾಗೂ ನಟಿ ತಾರಾ ಅನುರಾಧ ಮುಖ್ಯ ಅತಿಥಿಗಳಾಗಿ ಆಗಮಿಸಿ, ‘GST’ಗೆ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

‘GST’ ಎಂದರೆ ‘ಘೋಸ್ಟ್ ಇನ್ ಟ್ರಬಲ್’ ಎಂದು. ಅದನ್ನು ಈಗ ಸ್ವಲ್ಪ ಬದಲಾವಣೆ ಮಾಡಿ ‘Go see in theater’ ಅಂತ ಹೇಳಬಹುದು. ‘GST’ ನಾನು ಕಂಡ ಕನಸು. ಅದನ್ನು ನನಸು ಮಾಡಿದವರು ನಿರ್ಮಾಪಕ ಸಂದೇಶ್. ನಾನು ಈ ಚಿತ್ರದ ಮೂಲಕ ನಿರ್ದೇಶಕನಾಗಿ ಅಡಿ ಇಟ್ಟಿದ್ದೇನೆ. ಚಿತ್ರದ ಮತ್ತೊಂದು ವಿಶೇಷ ಅಂದರೆ ನಮ್ಮ ತಾತಾ ಸುಬ್ವಯ್ಯ ನಾಯ್ಡು ಅವರು ‘ಭಕ್ತ ಪ್ರಹ್ಲಾದ’ ಚಿತ್ರದಲ್ಲಿ ನಮ್ಮ ತಂದೆ ಲೋಕೇಶ್ ಅವರನ್ನು ಬಾಲನಟನಾಗಿ ತೆರೆಗೆ ತಂದರು. ಆನಂತರ ನಮ್ಮ ತಂದೆ ನಿರ್ದೇಶನದ ‘ಬುಜಂಗಯ್ಯನ ದಶಾವತಾರ’ದ ಮೂಲಕ ಬಾಲನಟನಾಗಿ ನಾನು ಚಿತ್ರರಂಗಕ್ಕೆ ಬಂದೆ. ಈಗ ನನ್ನ ಮಗ ಸುಕೃತ್ ನನ್ನ ಮೊದಲ ನಿರ್ದೇಶನದಲ್ಲಿ ಬೆಳ್ಳಿತೆರೆ ಪ್ರವೇಶಿಸಿದ್ದಾನೆ. ಇದು ಭಾರತೀಯ ಚಿತ್ರರಂಗದಲ್ಲೇ ಪ್ರಥಮ ಎನ್ನಬಹುದು. ಇನ್ನು, ಇದರಲ್ಲಿ ನಮ್ಮ ತಾಯಿ, ನಾನು ಹಾಗೂ ನನ್ನ ಮಗ ಮೂರು ಜನ ನಟಿಸಿದ್ದೇವೆ. ಇದು ಹಾರಾರ್ ಚಿತ್ರವಾಗಿದರೂ, ನಗುವೇ ಪ್ರಧಾನ. ಯಾವುದೇ ಸಂದೇಶ ನೀಡದೆ ನಗುವಿನ ಮೂಲಕ ಜನರ ಮನಸ್ಸನ್ನು ಗೆಲ್ಲಲ್ಲಿದ್ದೇನೆ. ಲೋಕೇಶ್ ಮ್ಯೂಸಿಕ್ ಎಂಬ ಮ್ಯೂಸಿಕ್ ಸಂಸ್ಥೆ ಕೂಡ ಆರಂಭಿಸಿದ್ದೇನೆ. ಅದರಲ್ಲಿ ನಮ್ಮ ಚಿತ್ರದ ಹಾಡುಗಳು ಬಿಡುಗಡೆಯಾಗಲಿದೆ. ಚಿತ್ರದಲ್ಲಿ ಯಾರು ಊಹಿಸಲಾಗದ 4O ನಿಮಿಷಗಳ ಕ್ಲೈಮ್ಯಾಕ್ಸ್ ಇದೆ ನಮ್ಮ ಚಿತ್ರದಲ್ಲಿ ಅನುಭವಿ ಕಲಾವಿದರು ಅಭಿನಯಿಸಿದ್ದಾರೆ. ನುರಿತ ತಂತ್ರಜ್ಞರು ಕಾರ್ಯ ನಿರ್ವಹಿಸಿದ್ದಾರೆ. ಎಲ್ಲರ ಶ್ರಮದಿಂದ ನವೆಂಬರ್ 28 ರಂದು ಚಿತ್ರ ತೆರೆಗೆ ಬರಲಿದೆ. ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ಉಪೇಂದ್ರ ಹಾಗೂ ಪ್ರಿಯಾಂಕಾ ಅವರಿಗೆ ಧನ್ಯವಾದ. ಮತ್ತೊಂದು ವಿಶೇಷವೆಂದರೆ, ನನ್ನ ಮೊದಲ ಚಿತ್ರದ ನಿರ್ದೇಶನಕ್ಕೆ ಲೆಜೆಂಡ್ ಕ್ರಿಕೆಟ್ ಆಟಗಾರ ಸಚಿನ್ ತೆಂಡೂಲ್ಕರ್, ಚಿತ್ರ ಯಶಸ್ವಿಯಾಗಲೆಂದು ಹಾರೈಸಿ ತಮ್ಮ ರುಜು ಹಾಕಿದ ಬ್ಯಾಟ್ ಅನ್ನು ಉಡುಗೊರೆಯಾಗಿ ನೀಡಿದ್ದಾರೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಾಯಕ ಹಾಗೂ ನಿರ್ದೇಶಕ ಸೃಜನ್ ಲೋಕೇಶ್. ಇದನ್ನೂ ಓದಿ: ಇಂದು ರಶ್ಮಿಕಾ, ವಿಜಯ್ ದೇವರಕೊಂಡ ಮದುವೆ ಅಧಿಕೃತ ಘೋಷಣೆ?

srujan lokesh gst movie

ನಾನು ಈ ಚಿತ್ರದ ಕಥೆ ಕೇಳಿಲ್ಲ. ಸೃಜನ್ ನನ್ನ ಆತ್ಮೀಯ ಸ್ನೇಹಿತ. ಅವರು ಒಳ್ಳೆಯ ಚಿತ್ರ ಮಾಡಿರುತ್ತಾರೆ ಎಂಬ ನಂಬಿಕೆ ಇದೆ. ಇದು ನಮ್ಮ ಸಂಸ್ಥೆ ನಿರ್ಮಾಣದ 34ನೇ ಚಿತ್ರ. ಎಂದಿನಂತೆ ಈ ಚಿತ್ರಕ್ಕೂ ನಿಮ್ಮೆಲ್ಲರ ಬೆಂಬಲವಿರಲಿ ಎಂದು ನಿರ್ಮಾಪಕ ಸಂದೇಶ್ ತಿಳಿಸಿದರು.

ಕನ್ನಡ ಚಿತ್ರರಂಗದ ಹಲವು ಪ್ರಥಮಗಳು ಸುಬ್ಬಯ್ಯ ನಾಯ್ಡು ಅವರ ಕುಟುಂಬದ್ದೇ ಆಗಿರುವುದು ನಮಗೆ ಹೆಮ್ಮೆ ಇದೆ. ಇದೇ ಮೊದಲ ಬಾರಿಗೆ ನನ್ನ ಮಗ ಸೃಜನ್ ಲೋಕೇಶ್ ನಿರ್ದೇಶನ ಮಾಡಿದ್ದಾನೆ. ನಾನು ಹಾಗೂ ನನ್ನ ಮೊಮ್ಮಗ ಸುಕೃತ್ ಈ ಚಿತ್ರದಲ್ಲಿ ನಟಿಸಿದ್ದೇವೆ. ನಮ್ಮ ಕುಟುಂಬಕ್ಕೆ ನೀವು ನೀಡುತ್ತಿರುವ ಪ್ರೋತ್ಸಾಹ ಈ ಚಿತ್ರದಲ್ಲೂ ಮುಂದುವರೆಯಲು ಎಂದರು ನಟಿ ಗಿರಿಜಾ ಲೋಕೇಶ್. ಇದನ್ನೂ ಓದಿ: ನಟಿ ಪ್ರಿಯಾಂಕಾ ಉಪೇಂದ್ರ ಮೊಬೈಲ್ ಹ್ಯಾಕ್ ಮಾಡಿದ್ದ ಆರೋಪಿ ಅರೆಸ್ಟ್

srujan lokesh gst

ಚಿತ್ರೀಕರಣದ ಅನುಭವಗಳ ಬಗ್ಗೆ ಮಾತನಾಡಿದ ನಾಯಕಿ ರಜನಿ ಭಾರದ್ವಾಜ್, ತಮ್ಮ ಪಾತ್ರದ ಕುರಿತು ಮಾತನಾಡಿದರು. ಹಿರಿಯ ನಟ ಅಶೋಕ್ ಅವರು ಸಹ ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿ ಚಿತ್ರಕ್ಕೆ ಶುಭ ಕೋರಿದರು. ಚಿತ್ರದಲ್ಲಿ ಅಭಿನಯಿಸಿರುವ ಕಲಾವಿದರು ಹಾಗೂ ತಂತ್ರಜ್ಞರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು. ಸೃಜನ್ ಲೋಕೇಶ್ ಪುತ್ರ ಸುಕೃತ್ ನಿರೂಪಣೆ ಮಾಡುವ ಮೂಲಕ ಸಮಾರಂಭಕ್ಕೆ ಚಾಲನೆ ನೀಡಿದ್ದು ವಿಶೇಷವಾಗಿತ್ತು.

TAGGED:GST MoviesandalwoodSrujan Lokeshtrailerಜಿಎಸ್‌ಟಿ ಟ್ರೈಲರ್ಸೃಜನ್ ಲೋಕೇಶ್ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Jai Lalitha Serial
ಹೊಸ ಧಾರಾವಾಹಿ: ರಾಕಿಂಗ್ ಸ್ಟಾರ್ ಯಶ್ ಅಭಿಮಾನಿ ಜೈ ಲಲಿತಾ
Cinema Latest Top Stories TV Shows
Arjun Janya
ಅರ್ಜುನ್ ಜನ್ಯ ಸಂಯೋಜನೆಯಲ್ಲಿ ʻಮಹಾಗುರು ಮಹಾದೇವʼ ಆಲ್ಬಂ
Cinema Latest Sandalwood
Sanvi Sudeep
ಅರಿಶಿಣ ಶಾಸ್ತ್ರದಲ್ಲಿ ಸುದೀಪ್ ಪುತ್ರಿ – ಫೋಟೋ ವೈರಲ್
Cinema Latest Sandalwood Top Stories
Ratha Saptami Jeevan Moulya
ರಥಸಪ್ತಮಿ: ವಿಭಿನ್ನ ಧಾರಾವಾಹಿಗೆ ಸಾಕ್ಷಿಯಾದ ಉದಯ ಟಿವಿ
Cinema Latest TV Shows

You Might Also Like

Bengaluru airport 1
Bengaluru City

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಇಂದು ಕೂಡ 60ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು

Public TV
By Public TV
31 minutes ago
MB Patil
Bengaluru City

ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ವಿಜಯಪುರ ರೈಲು ಸಂಚಾರಕ್ಕೆ ಅಸ್ತು; 3-4 ತಿಂಗಳಲ್ಲಿ ಹೊಸ ರೈಲು ಸೇವೆಗೆ ಪ್ರಯತ್ನ: ಎಂ.ಬಿ.ಪಾಟೀಲ್

Public TV
By Public TV
37 minutes ago
Shubman Gill 2
Cricket

ಗಿಲ್‌, ಪಾಂಡ್ಯ ಈಸ್‌ ಬ್ಯಾಕ್‌ – ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಸರಣಿಗೆ ಬಲಿಷ್ಠ ತಂಡ ರೆಡಿ

Public TV
By Public TV
1 hour ago
panipat women
Crime

ತನಗಿಂತ ಯಾರೂ ಸುಂದರವಾಗಿ ಕಾಣಬಾರದು ಅಂತ 6 ವರ್ಷದ ಹುಡುಗಿ ಕೊಂದ ಮಹಿಳೆ

Public TV
By Public TV
2 hours ago
chalavadi narayanaswamy 1
Bengaluru City

ಕಾಂಗ್ರೆಸ್ ಹೈಕಮಾಂಡ್ ಮಲ್ಲಿಕಾರ್ಜುನ ಖರ್ಗೆ ಅಲ್ಲ, ವೇಣುಗೋಪಾಲ್: ಛಲವಾದಿ ನಾರಾಯಣಸ್ವಾಮಿ

Public TV
By Public TV
3 hours ago
BY Vijayendra MP Renukacharya
Bengaluru City

ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಮುಂದುವರಿಯೋದು ಸೂರ್ಯ-ಚಂದ್ರ ಇರುವಷ್ಟೇ ಸತ್ಯ: ರೇಣುಕಾಚಾರ್ಯ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?