ನವದೆಹಲಿ: ಜಮೀರ್ (Zameer Ahmed) ಅವರು ಮಾತಾಡಿದ ಆಡಿಯೋ ಈಗ ಹೊರಬಂದಿದೆ. ಅವರಿಗೆ ಮಾಡಿದ್ದುಣ್ಣೋ ಮಾರಾಯ ಅನ್ನೋ ಹಾಗೆ ಆಗಿದೆ ಎಂದು ಕಾಂಗ್ರೆಸ್ ನಾಯಕ ಎಸ್.ಎಸ್ ಮಲ್ಲಿಕಾರ್ಜುನ್ (S.S Mallikarjun) ಕಿಡಿಕಾರಿದ್ದಾರೆ.
ದೆಹಲಿಯಲ್ಲಿ ʻಪಬ್ಲಿಕ್ ಟಿವಿʼ ಜೊತೆ ಅವರು ಮಾತನಾಡಿದರು. ಈ ವೇಳೆ, ದಾವಣಗೆರೆ ಉಪಚುನಾವಣೆಯ (Davanagere Byelection) ವಿಚಾರವಾಗಿ ಜಮೀರ್ ಹಾಗೂ ಸಿರಾಜ್ ಮಾತನಾಡಿದ್ದ ಆಡಿಯೋ ವೈರಲ್ ಬಗ್ಗೆ ಮಾತನಾಡಿದರು. ಈ ವೇಳೆ, ಜಮೀರ್ ಅಹ್ಮದ್ ಮಾಡಿದ್ದು ಈಗ ಆಡಿಯೋ ಮೂಲಕ ಹೊರ ಬಂದಿದೆ. ಹೈಕಮಾಂಡ್ ನಾಯಕರು ಎಲ್ಲವನ್ನೂ ನೋಡಿದ್ದಾರೆ. ಇದನ್ನೂ ಓದಿ: ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ರಾ ಜಮೀರ್? – ಕಾಂಗ್ರೆಸ್‌ನಲ್ಲಿ ಆಡಿಯೋ ಸಂಚಲನ
ಬಿಜೆಪಿಗೆ ಸಹಾಯ ಮಾಡಲು ಜಮೀರ್ ಈ ರೀತಿ ಮಾಡಿದ್ದಾರೆ. ನಾನು ಅವರನ್ನು ಉಚ್ಛಾಟನೆ ಮಾಡಿ ಎನ್ನುವಂತ ಕೆಳಮಟ್ಟದ ರಾಜಕೀಯ ಮಾಡಲ್ಲ. ಹೈಕಮಾಂಡ್ ನಾಯಕರು ಈ ಬಗ್ಗೆ ತಿರ್ಮಾನ ಮಾಡ್ತಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಜಮೀರ್ ಅವರನ್ನು ನಂಬಿದ್ದೆ ಆದ್ರೆ ಈ ರೀತಿ ಮಾಡ್ತಾರೆ ಅಂತ ಗೊತ್ತಿರಲಿಲ್ಲ: ಸಮರ್ಥ್ ಶಾಮನೂರು ಬೇಸರ
