ನವದೆಹಲಿ: ಜಮೀರ್ (Zameer Ahmed) ಅವರು ಮಾತನಾಡಿದ ಆಡಿಯೋ ಈಗ ಹೊರಬಂದಿದೆ. ಬಿಜೆಪಿಗೆ ಸಹಾಯ ಮಾಡಲು ಅವರು ಹೀಗೆ ಮಾಡಿದ್ದಾರೆ. ಅವರಿಗೆ ಮಾಡಿದ್ದುಣ್ಣೋ ಮಾರಾಯ ಅನ್ನೋ ಹಾಗೆ ಆಗಿದೆ ಎಂದು ಕಾಂಗ್ರೆಸ್ ನಾಯಕ ಎಸ್.ಎಸ್ ಮಲ್ಲಿಕಾರ್ಜುನ್ (S.S Mallikarjun) ಕಿಡಿಕಾರಿದ್ದಾರೆ.
ದೆಹಲಿಯಲ್ಲಿ ʻಪಬ್ಲಿಕ್ ಟಿವಿʼ ಜೊತೆ ಅವರು ಮಾತನಾಡಿದರು. ಈ ವೇಳೆ, ದಾವಣಗೆರೆ ಉಪಚುನಾವಣೆಯ (Davanagere Byelection) ವಿಚಾರವಾಗಿ ಜಮೀರ್ ಹಾಗೂ ಸಿರಾಜ್ ಮಾತನಾಡಿದ್ದ ಆಡಿಯೋ ವೈರಲ್ ಆದ ಬಗ್ಗೆ ಪ್ರತಿಕ್ರಿಯಿಸಿದರು. ಜಮೀರ್ ಅಹಮದ್ ಮಾತನಾಡಿದ್ದು ಆಡಿಯೋ ಮೂಲಕ ಹೊರ ಬಂದಿದೆ. ಹೈಕಮಾಂಡ್ ನಾಯಕರು ಎಲ್ಲವನ್ನೂ ನೋಡಿದ್ದಾರೆ. ಈ ಬಗ್ಗೆ ಅವರು ತೀರ್ಮಾನ ಮಾಡುತ್ತಾರೆ ಎಂದರು. ಇದನ್ನೂ ಓದಿ: ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ರಾ ಜಮೀರ್? – ಕಾಂಗ್ರೆಸ್‌ನಲ್ಲಿ ಆಡಿಯೋ ಸಂಚಲನ
ನಾನು ಅವರನ್ನು ಉಚ್ಛಾಟನೆ ಮಾಡಿ ಎನ್ನುವಂತ ಕೆಳಮಟ್ಟದ ರಾಜಕೀಯ ಮಾಡಲ್ಲ. ಹೈಕಮಾಂಡ್ ನಾಯಕರು ಈ ಬಗ್ಗೆ ತಿರ್ಮಾನ ಮಾಡ್ತಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಜಮೀರ್ ಅವರನ್ನು ನಂಬಿದ್ದೆ ಆದ್ರೆ ಈ ರೀತಿ ಮಾಡ್ತಾರೆ ಅಂತ ಗೊತ್ತಿರಲಿಲ್ಲ: ಸಮರ್ಥ್ ಶಾಮನೂರು ಬೇಸರ
