ಜಪಾನ್‌ನಲ್ಲಿ ಮಹೇಶ್ ಬಾಬು ಜೊತೆಗಿನ ಚಿತ್ರದ ಬಗ್ಗೆ ರಾಜಮೌಳಿ ಅಪ್‌ಡೇಟ್

Public TV
1 Min Read
mahesh babu

‘ಆರ್‌ಆರ್‌ಆರ್’ ಸಿನಿಮಾದ ಅಲೆ ಇನ್ನೂ ಕಮ್ಮಿಯಾಗಿಲ್ಲ. ಮಾ.18ರಂದು ಜಪಾನ್‌ನಲ್ಲಿ ‘ಆರ್‌ಆರ್‌ಆರ್’ (RRR) ಚಿತ್ರದ ಪ್ರದರ್ಶನ ಆಯೋಜಿಸಲಾಗಿತ್ತು. ಈ ವೇಳೆ ತಮ್ಮ ಮುಂಬರುವ ಸಿನಿಮಾ ಬಗ್ಗೆ ರಾಜಮೌಳಿ ಮಾಹಿತಿ ನೀಡಿದ್ದಾರೆ. ಮಹೇಶ್‌ ಬಾಬು ಜೊತೆಗಿನ ಚಿತ್ರದ ಬಗ್ಗೆ ಬಿಗ್‌ ಅಪ್‌ಡೇಟ್‌ ನೀಡಿದ್ದಾರೆ. ಇದನ್ನೂ ಓದಿ:ಹೆಸರಾಂತ ನಟ, ನಟಿಯರಿಗೆ ಗೇಟ್ ಪಾಸ್ ಕೊಟ್ಟ ನಿರ್ಮಾಪಕ

Rajamouli

ಜಪಾನ್‌ನಲ್ಲಿ ನಡೆದ ಸ್ಕ್ರೀನಿಂಗ್‌ನಲ್ಲಿ ಮಾತನಾಡಿದ ಎಸ್‌ಎಸ್ ರಾಜಮೌಳಿ, ನಮ್ಮ ಮುಂದಿನ ಚಿತ್ರದ ಸ್ಕ್ರೀಪ್ಟ್ ಕೆಲಸ ಮುಗಿಸಿದ್ದೇವೆ. ಚಿತ್ರ ಪ್ರಿ-ಪ್ರೊಡಕ್ಷನ್ ಪ್ರಕ್ರಿಯೆಯಲ್ಲಿದೆ. ಇನ್ನೂ ಕಾಸ್ಟಿಂಗ್ ಪೂರ್ಣಗೊಂಡಿಲ್ಲ. ಚಿತ್ರದ ಹೀರೋ ಅಂದರೆ ಮಹೇಶ್ ಬಾಬು (Mahesh Babu) ಅವರು ಮಾತ್ರ ಫೈನಲ್ ಆಗಿದ್ದಾರೆ. ಆತ ತುಂಬಾ ಒಳ್ಳೆಯ ನಟ. ಸುಂದರ ಕೂಡ. ಸಿನಿಮಾ ಬಿಡುಗಡೆ ಸಮಯದಲ್ಲಿ ಅವರನ್ನು ಇಲ್ಲಿಗೆ ಕರೆತಂದು ನಿಮಗೆ ಪರಿಚಯಿಸುತ್ತೇನೆ ಎಂದು ರಾಜಮೌಳಿ ಮಾಹಿತಿ ನೀಡಿದರು.

FotoJet 6 5

ಮೂಲಗಳ ಪ್ರಕಾರ, ಈ ಸಿನಿಮಾ ಹೆಚ್ಚು ಕಮ್ಮಿ ಇಪ್ಪತ್ತು ದೇಶಗಳಲ್ಲಿ ಇದರ ಶೂಟಿಂಗ್ ನಡೆಯಲಿದೆ. ಬಹುತೇಕ ಕಾಡಿನಲ್ಲಿ ಚಿತ್ರೀಕರಣಕ್ಕೆ ಪ್ಲ್ಯಾನ್ ಮಾಡಿಕೊಳ್ಳಲಾಗಿದೆ ಎನ್ನಲಾಗುತ್ತಿದೆ.  ಅದಷ್ಟೇ ಅಲ್ಲ, 8 ಗೆಟಪ್‌ನಲ್ಲಿ ಮಹೇಶ್ ಬಾಬು ಕಾಣಿಸಿಕೊಳ್ಳಲಿದ್ದಾರೆ. ಪಾತ್ರ ಹೀಗೆ ಬರಬೇಕು ಅದಕ್ಕೆ ಏನೆಲ್ಲಾ ಮಾಡಬೇಕೋ ಅದರ ತಯಾರಿಯಲ್ಲಿದ್ದಾರೆ. ಅದು ಎಲ್ಲೆಲ್ಲಿ ಎನ್ನುವುದು ನಿಗೂಢ. ಹೀಗಾಗಿ ಮಹೇಶ್ ಬಾಬು ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್ ಕತೆ ಬರೆದಿದ್ದಾರೆ. ಅದಕ್ಕೆ ಏನೇನು ಮಸಾಲೆ ಬೇಕು ರಾಜಮೌಳಿ ತುಂಬಿದ್ದಾರೆ. ಭರ್ತಿ ಸಾವಿರ ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿದೆ. ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಇಷ್ಟು ಕೋಟಿ ಖರ್ಚು ಮಾಡುತ್ತಿರುವುದು ಇದೇ ಮೊದಲು. ಗ್ಲೋಬಲ್ ಸಿನಿಮಾ ಎನ್ನುವ ಹೆಗ್ಗಳಿಕೆ ಕೂಡ ಇದೆ. ಇದರಲ್ಲಿ ಹೀರೋ ಬಿಟ್ಟರೆ ಇನ್ಯಾರ ಹೆಸರೂ ಗೊತ್ತಾಗಿಲ್ಲ. ಅದಕ್ಕೂ ಅಂತಿಮ ತೆರೆ ಬೀಳುವ ದಿನ ದೂರ ಇಲ್ಲ. ಪ್ರಿನ್ಸ್ ಈ ಸಿನಿಮಾದಿಂದ ಇನ್ನೆಲ್ಲಿಗೆ ಹೋಗಿ ಮುಟ್ಟುತ್ತಾರೊ? ಏನಾಗಲಿದೆಯೋ? ಎಲ್ಲವೂ ಸಿನಿಮಾ ತೆರೆ ಕಂಡ ನಂತರ ಗೊತ್ತಾಗಲಿದೆ.

Share This Article