Connect with us

Districts

ಲಾರಿ-ಬೈಕ್ ಮುಖಾಮುಖಿ- ಪರೀಕ್ಷೆ ಮುಗಿಸಿ ಹೊರಟಿದ್ದ ವಿದ್ಯಾರ್ಥಿ ಸಾವು

Published

on

– ಮತ್ತಿಬ್ಬರು ವಿದ್ಯಾರ್ಥಿಗಳ ಸ್ಥಿತಿ ಗಂಭೀರ

ಗದಗ: ಲಾರಿ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್‍ನಲ್ಲಿ ತೆರಳುತ್ತಿದ್ದ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಬಾಗೇವಾಡಿ ಬಳಿ ನಡೆದಿದೆ.

ಎಸ್‍ಎಸ್‍ಎಲ್‍ಸಿ ಪರೀಕ್ಷೆ ಮುಗಿಸಿ ಒಂದೇ ಬೈಕ್‍ನಲ್ಲಿ ಹೊರಟಿದ್ದ 3 ವಿದ್ಯಾರ್ಥಿಗಳ ಬೈಕ್ ಮತ್ತು ಲಾರಿ ನಡುವೇ ಅಪಘಾತ ನಡೆದಿದೆ. ಘಟನೆಯಲ್ಲಿ ವಿದ್ಯಾರ್ಥಿ ಸಿದ್ದಪ್ಪ ತಳವಾರ ಸಾವನ್ನಪ್ಪಿದ್ದು, ಮತ್ತಿಬ್ಬರು ವಿದ್ಯಾರ್ಥಿಗಳಾದ ಈರಣ್ಣ ಬಡಿಗೇರ ಹಾಗೂ ಮೈಲಾರಿ ಯಳವತ್ತಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ.

ಮುಂಡರಗಿ ತಾಲೂಕಿನ ಕಲಕೇರಿ ಪರೀಕ್ಷಾ ಕೇಂದ್ರದಿಂದ ಪರೀಕ್ಷೆ ಮುಗಿಸಿ ಬೈಕ್‍ನಲ್ಲಿ ಮೂವರು ವಿದ್ಯಾರ್ಥಿಗಳು ಬಾಗೇವಾಡಿ ಗ್ರಾಮಕ್ಕೆ ಹೊರಟಿದ್ದರು. ಈ ವೇಳೆ ದಾರಿ ನಡುವೆ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದೆ. ಸದ್ಯ ಗಾಯಾಳುಗಳನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇತ್ತ ವಿದ್ಯಾರ್ಥಿಗಳ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ಕುರಿತು ಜಿಲ್ಲೆಯ ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.