ಬೆಂಗಳೂರು: ನಾಳೆ ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟವಾಗುತ್ತದೆ ಎಂದು ಶಿಕ್ಷಣ ಸಚಿವ ನಾಗೇಶ್ ಸ್ಪಷ್ಟಪಡಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ನಾಳೆ ಮಧ್ಯಾಹ್ನ 12.30ಕ್ಕೆ SSಐಅ ಫಲಿತಾಂಶ ಪ್ರಕಟಿಸಲಾಗುತ್ತದೆ. ಮಧ್ಯಾಹ್ನ 1 ಗಂಟೆ ಬಳಿಕ ಇಲಾಖೆಯ ವೆಬ್ಸೈಟ್ನಲ್ಲಿ, ಶಾಲೆಗಳಲ್ಲಿ ಫಲಿತಾಂಶ ಲಭ್ಯ karresults.nic.in ಎಂದು ಸಚಿವರು ತಿಳಿಸಿದ್ದಾರೆ.
Advertisement
ನಾಳೆ ಮಧ್ಯಾಹ್ನ 12.30ಕ್ಕೆ SSLC ಫಲಿತಾಂಶ ಪ್ರಕಟಿಸಲಾಗುತ್ತದೆ.
ಮಧ್ಯಾಹ್ನ 1 ಗಂಟೆ ಬಳಿಕ ಇಲಾಖೆಯ ವೆಬ್ಸೈಟ್ನಲ್ಲಿ, ಶಾಲೆಗಳಲ್ಲಿ ಫಲಿತಾಂಶ ಲಭ್ಯ.https://t.co/qP2v5VxzQI
ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್‌ಗಳಿಗೆ SMS ಮೂಲಕ ಫಲಿತಾಂಶ ಕಳುಹಿಸಲಾಗುತ್ತದೆ.
ಎಲ್ಲ ವಿದ್ಯಾರ್ಥಿಗಳಿಗೆ ಶುಭವಾಗಲಿ.#sslcresults
— B.C Nagesh (@BCNagesh_bjp) May 18, 2022
Advertisement
ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್‍ಗಳಿಗೆ SಒS ಮೂಲಕ ಫಲಿತಾಂಶ ಕಳುಹಿಸಲಾಗುತ್ತದೆ. ಎಲ್ಲ ವಿದ್ಯಾರ್ಥಿಗಳಿಗೆ ಸಚಿವರು ಶುಭ ಹಾರೈಸಿದ್ದಾರೆ. ಇದನ್ನೂ ಓದಿ: ಪಿಯು ಕಾಲೇಜುಗಳಲ್ಲಿ ಸಮವಸ್ತ್ರ ನಿಯಮ ಪಾಲನೆ ಕಡ್ಡಾಯ
Advertisement
ಮಾರ್ಚ್ 28 ರಿಂದ ಏಪ್ರಿಲ್ 11 ರವರಗೆ 2022 ನೇ ಸಾಲಿನ ಎಸ್‍ಎಸ್‍ಎಲ್‌ಸಿ ವಾರ್ಷಿಕ ಪರೀಕ್ಷೆ ನಡೆದಿತ್ತು. ಈ ಬಾರಿ ರಾಜ್ಯದಲ್ಲಿ ಎಸ್‍ಎಸ್‍ಎಲ್‍ಸಿ ಮುಖ್ಯ ಪರೀಕ್ಷೆಗೆ 15,387 ಶಾಲೆಗಳಿಂದ 8,73,884 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಅದರಲ್ಲಿ 4,52,732 ವಿದ್ಯಾರ್ಥಿಗಳು, 4,21,110 ವಿದ್ಯಾರ್ಥಿನಿಯರು ಮತ್ತು 4 ತೃತೀಯ ಲಿಂಗಿ ವಿದ್ಯಾರ್ಥಿಗಳು. ಅಲ್ಲದೆ ವಿಭಿನ್ನ ಸಾಮರ್ಥ್ಯವುಳ್ಳ 5,307 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.