ಬೆಂಗಳೂರು: 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಶುಕ್ರವಾರ ಪ್ರಕಟವಾಗಲಿದೆ.
ಇಂದು ಬೆಳಗ್ಗೆ 11:30 ಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಫಲಿತಾಂಶ ಪ್ರಕಟಿಸಲಿದ್ದಾರೆ. karresults.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ.
ಇದೇ ಮಾರ್ಚ್-ಏಪ್ರಿಲ್ ತಿಂಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ನಡೆದಿತ್ತು. ಮಾ.21ರಿಂದ ಏ.4 ರ ವರೆಗೆ ರಾಜ್ಯಾದ್ಯಂತ 2,818 ಕೇಂದ್ರಗಳಲ್ಲಿ 8.40 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
ಪರೀಕ್ಷಾ ಅಕ್ರಮ ತಡೆಗೆ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಜಾರಿಗೊಳಿಸಿದ್ದರಿಂದ ಕಳೆದ ಸಾಲಿನಲ್ಲಿ ನೀಡಿದ್ದ ಶೇ.10 ರಷ್ಟು ಹೆಚ್ಚುವರಿ ಗ್ರೇಸ್ ಅಂಕ ವ್ಯವಸ್ಥೆಯನ್ನು ಈ ಬಾರಿ ಕೈಬಿಡಲಾಗಿದೆ. ಕಳೆದ ಬಾರಿ ಹೆಚ್ಚು ಗ್ರೇಸ್ ಅಂಕ ನೀಡಿದ್ದರೂ ಶೇ.10 ಫಲಿತಾಂಶ ಕುಸಿದಿತ್ತು. ಈ ಬಾರಿ ಫಲಿತಾಂಶದ ಬಗ್ಗೆ ಕುತೂಹಲ ಮೂಡಿದೆ.