ರಾಯಚೂರು: ಇಂದು ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಸಮಾಜ ವಿಜ್ಞಾನ ಪ್ರಶ್ನೆ ಪತ್ರಿಕೆ ಪರೀಕ್ಷೆ ನಡೆಯುತ್ತಿರುವಾಗಲೇ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದಗಲ್‍ನಲ್ಲಿ ವಾಟ್ಸಪ್, ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ ಪತ್ರಿಕೆ ಹರಿದಾಡುತ್ತಿದೆ. ಆದರೆ ಯಾರಿಂದ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬುದು ತಿಳಿದುಬಂದಿಲ್ಲ. ಹೀಗಾಗಿ ಈ ಕುರಿತು ಪೊಲೀಸರಿಗೆ ದೂರು ನೀಡುವುದಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ವೃಷಭೇಂದ್ರಯ್ಯ ಸ್ವಾಮಿ ಹೇಳಿದ್ದಾರೆ. ಇದನ್ನೂ ಓದಿ: ಚಂದ್ರು ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಕೊಟ್ಟ ಜಮೀರ್
Advertisement
Advertisement
ಪ್ರಶ್ನೆ ಪತ್ರಿಕೆಗಳು ಪರೀಕ್ಷೆಗೂ ಮೊದಲೇ ಲೀಕ್ ಆಗಿಲ್ಲ. ಆದರೆ ಪರೀಕ್ಷೆಯ ಆರಂಭವಾದ ಬಳಿಕ ಯಾರೋ ಫೋಟೋ ತೆಗೆದಿರುವ ಸಾಧ್ಯತೆಯಿದೆ. ಇದನ್ನೂ ಓದಿ: ಗರ್ಲ್‍ಫ್ರೆಂಡ್, ಮಾಜಿ ಪತ್ನಿ ಜೊತೆ ಗೋವಾದಲ್ಲಿ ಪಾರ್ಟಿ ಮಾಡಿದ ಹೃತಿಕ್ ರೋಷನ್
Advertisement
ಭರ್ಜರಿ ನಕಲು: ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳ ಪರೀಕ್ಷೆಯಲ್ಲಿ ಭರ್ಜರಿ ನಕಲು ಸಹ ನಡೆದಿದೆ. ರಾಯಚೂರು ನಗರದ ಆಶಾಪೂರ ರಸ್ತೆಯ ಮೊರಾರ್ಜಿ ವಸತಿ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಎಲ್ಲಾ ರಿಪೀಟರ್ಸ್ ಪರೀಕ್ಷೆ ಬರೆಯುತ್ತಿದ್ದು ಎಗ್ಗಿಲ್ಲದೆ ನಕಲು ನಡೆದಿದೆ. ವಿದ್ಯಾರ್ಥಿಗಳ ಪೋಷಕರೇ ಹೊರಗಿನಿಂದ ನಕಲು ಮಾಡಿ ಒಳಗಡೆ ಹೋಗಿ ಚೀಟಿ ಕೊಟ್ಟು ಬರುತ್ತಿದ್ದಾರೆ.
Advertisement
ಪರೀಕ್ಷಾ ಕೇಂದ್ರದಲ್ಲಿದ್ದವರೇ ಬಂದು ಚೀಟಿ ತೆಗೆದುಕೊಂಡು ಹೋಗುತ್ತಿದ್ದರು ಕೇಳುವವರಿಲ್ಲದಂತಾಗಿದೆ. ಕಣ್ಮುಂದೆ ಪರೀಕ್ಷಾ ಅಕ್ರಮ ನಡೆಯುತ್ತಿದ್ದರೂ ಅಧಿಕಾರಿಗಳು ಸುಮ್ಮನಿದ್ದಾರೆ. ಡಿಡಿಪಿಐ ವೃಷಭೇಂದ್ರಯ್ಯ ಸ್ವಾಮಿ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.