SSLC ಪ್ರಶ್ನೆ ಪತ್ರಿಕೆ ಸೋರಿಕೆ: ಖಾಸಗಿ ಶಾಲೆಯ ಕ್ಲರ್ಕ್ ಬಂಧನ

Public TV
1 Min Read
sslc

ರಾಮನಗರ: ಎಸ್ಸೆಸ್ಸೆಲ್ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಮಾಗಡಿಯ ಖಾಸಗಿ ಶಾಲೆಯ ಕ್ಲರ್ಕ್‌ನನ್ನು ಬಂಧಿಸಿದ್ದಾರೆ.

ಮಾಗಡಿಯ ಕೆಂಪೇಗೌಡ ಪ್ರೌಢಶಾಲೆಯ ಕ್ಲರ್ಕ್‌ ರಂಗೇಗೌಡ ಬಂಧಿತ ಆರೋಪಿ. ಇತ್ತೀಚೆಗೆ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ವಿಜ್ಞಾನ ಪತ್ರಿಕೆಯು ವಾಟ್ಸಪ್‌ ಮೂಲಕ ಸೋರಿಕೆ ಆಗಿತ್ತು. ಬೆಳಗ್ಗೆ 10.30ಕ್ಕೆ ಪರೀಕ್ಷೆ ಆರಂಭವಾಗಿತ್ತು. ಅದೇ ಸಮಯದಲ್ಲಿ ಪ್ರಶ್ನೆ ಪತ್ರಿಕೆಯನ್ನು ಹೆಡ್ ಮಾಸ್ಟರ್ ಹಾಗೂ ಶಿಕ್ಷಕರಿರುವ ಗ್ರೂಪ್‌ನಲ್ಲೇ ಶೇರ್ ಮಾಡಲಾಗಿತ್ತು.

exam paper

ಇದಲ್ಲದೇ ಕೆಂಪೇಗೌಡ ಶಾಲೆ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಉತ್ತಮ ಸಾಧನೆಗಳಿಸಿದ್ದು, ಇದೀಗ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರದಲ್ಲಿ ಚರ್ಚೆಗೆ ಗ್ರಾಸವಾಗುತ್ತಿದೆ. ರಂಗೇಗೌಡ ವಾಟ್ಸಪ್‌ನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದು, ಅಲ್ಲಿನ ಒಬ್ಬ ಟೀಚರ್ ಹಾಗೂ ಸ್ಥಳೀಯ ವರದಿಗಾರರೊಬ್ಬರಿಗೆ ತಿಳಿದಿತ್ತು ಎಂಬ ಮಾಹಿತಿ ದೊರೆತಿದೆ. ಇದನ್ನೂ ಓದಿ: ಮಂಗಳೂರು ದರ್ಗಾ ವಿವಾದ – ಇಂದು ತಾಂಬೂಲ ಪ್ರಶ್ನೆ, ಪೊಲೀಸ್‌ ಬಂದೋಬಸ್ತ್‌

TET EXAM 2

ಆದರೆ ಈ ಇಬ್ಬರಿಗೂ ಕ್ಲರ್ಕ್ ರಂಗೇಗೌಡ ಹಣ ನೀಡಿ ಯಾರಿಗೂ ಹೇಳದಂತೆ ತಿಳಿಸಿದ್ದ. ಆದರೆ ಈ ಆರೋಪ ಪರೀಕ್ಷೆ ಮುಗಿದು ತಿಂಗಳು ಕಳೆದ ಬಳಿಕ ಬೆಳಕಿಗೆ ಬಂದಿದೆ. ಈ ಬಗ್ಗೆ ಮಾಗಡಿ ಇನ್ಸ್‌ಪೆಕ್ಟರ್ ಕಿವಿಗೆ ಗಾಳಿ ಮಾತು ಬಿದ್ದಿತ್ತು. ಈ ಹಿನ್ನೆಲೆಯಲ್ಲಿ ಸಂದೇಹ ವ್ಯಕ್ತವಾಗಿ ರಂಗೇಗೌಡನನ್ನು ಸೋಮವಾರ ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಮನಗರ ಡಿಡಿಪಿಐ ಮಾಗಡಿಯಲ್ಲಿ ದೂರು ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಅಮೆರಿಕಾದ ಶಾಲೆಯಲ್ಲಿ ಶೂಟೌಟ್-18 ವಿದ್ಯಾರ್ಥಿಗಳು ಸೇರಿ 21 ಮಂದಿ ದುರ್ಮರಣ

Share This Article