SSLC ಫಲಿತಾಂಶ ಪ್ರಕಟ – ಚಿತ್ರದುರ್ಗ ಪ್ರಥಮ, ಮಂಡ್ಯ ದ್ವಿತೀಯ

Public TV
2 Min Read
sslc result
ಸಾಂದರ್ಭಿಕ ಚಿತ್ರ

– ಈ ಬಾರಿಯೂ ಬಾಲಕಿಯರದ್ದೇ ಮೇಲುಗೈ
– 4 ವಿದ್ಯಾರ್ಥಿಗಳು ಔಟ್‌ ಆಫ್‌ ಔಟ್‌
– ಯಾದಗಿರಿ ಕೊನೆಯ ಸ್ಥಾನ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ (SSLC) ಫಲಿತಾಂಶ (Result) ಪ್ರಕಟಗೊಳಿಸಿದ್ದು ಈ ಬಾರಿ 83.89 % ಫಲಿತಾಂಶ ಸಾಧಿಸಿದೆ.

2023ರ ಮಾರ್ಚ್ 31 ರಿಂದ ಏಪ್ರಿಲ್ 15ರವರೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ನಡೆದಿದ್ದವು. ಒಟ್ಟು ರಾಜ್ಯದ 15,498 ಪ್ರೌಢಶಾಲೆಗಳ 8.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದರು. ಇವರಲ್ಲಿ 7,00,619 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಸರ್ಕಾರಿ ಶಾಲೆ- 86.74%, ಅನುದಾನ ಶಾಲೆ- 85.64%, ಖಾಸಗಿ – 90.89% ಫಲಿತಾಂಶ ಸಾಧಿಸಿದೆ. 4 ಜನ ವಿದ್ಯಾರ್ಥಿಗಳು 625 ಅಂಕಗಳಿಸಿದ್ದಾರೆ.

sslc result e1683522465491

ಗ್ರಾಮೀಣ ಮತ್ತು ಸರ್ಕಾರ ಶಾಲಾ ಮಕ್ಕಳ ಉತ್ತನ ಸಾಧನೆ ಮಾಡಿದ್ದು, ಬಾಲಕರು – 3,41,108( 80.08%) ಹಾಗೂ ಬಾಲಕಿಯರು – 3,59,511( 87.98%) ಪಾಸ್ ಆಗಿದ್ದಾರೆ. ಈ ಬಾರಿ ಮೊದಲ ಸ್ಥಾನವನ್ನು ಚಿತ್ರದುರ್ಗ (96.80%) ಹಾಗೂ ದ್ವಿತೀಯ ಸ್ಥಾನವನ್ನು ಮಂಡ್ಯ (96.74%), ತೃತೀಯ ಸ್ಥಾನವನ್ನು ಹಾಸನ (96.68%) ಜಿಲ್ಲೆ ಪಡೆದುಕೊಂಡಿದೆ. ಇನ್ನೂ ಕೊನೆ ಸ್ಥಾ‌ನದಲ್ಲಿ ಯಾದಗಿರಿ (75.49%) ಜಿಲ್ಲೆಯಿದೆ. ಇದನ್ನೂ ಓದಿ: ಬ್ರಿಜ್‌ಭೂಷಣ್‌ ಬಂಧನಕ್ಕೆ ಮೇ 21 ಗಡುವು ನೀಡಿದ ಕುಸ್ತಿಪಟುಗಳು

ಬೆಂಗಳೂರಿನ ನ್ಯೂ ಮೆಕಾಲೆ ಇಂಗ್ಲಿಷ್ ಹೈಸ್ಕೂಲ್ ವಿದ್ಯಾರ್ಥಿನಿ ಭೂಮಿಕ ಪೈ, ಚಿಕ್ಕಬಳ್ಳಾಪುರದ ಬಾಲಗಂಗಾಧರನಾಥ ಹೈಸ್ಕೂಲ್‌ನ ಯಶಸ್ ಗೌಡ , ಸವದತ್ತಿಯ ಕುಮಾರೇಶ್ವರ್ ಹೈಸ್ಕೂಲ್‌ನ ಅನುಪಮ ಶ್ರೀಶೈಲ್ ಹಿರೇಹೋಳಿ, ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದ ಆಕ್ಸ್ ಫರ್ಡ್ ಇಂಗ್ಲಿಷ್ ಹೈಸ್ಕೂಲ್‌ನ ಭೀಮನಗೌಡ ಹನುಮಂತ ಗೌಡ ಬೀರಾದರ್ ಪಾಟೀಲ್ ಮೊದಲ ಸ್ಥಾನವನ್ನು ಪಡೆದಿದ್ದಾರೆ.

ಫೋಟೋ ‌ಕಾಪಿ ಪಡೆಯಲು ಮೇ 14 ಕೊನೆ ದಿನವಾಗಿದ್ದು, ಮರು ಮೌಲ್ಯಮಾಪನ, ಮರು ಎಣಿಕೆಗೆ ಮೇ 21 ಕೊನೆ ದಿನವಾಗಿದೆ. ಇನ್ನೂ ಪೂರಕ ಪರೀಕ್ಷೆಗೆ ನೋಂದಣಿಗೆ ಮೇ 15 ಕೊನೆ ದಿನವಾಗಿದೆ. ಕರ್ನಾಟಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‍ಸೈಟ್‍  karresults.nic.in  ನಲ್ಲಿ ಎಸ್‍ಎಸ್‍ಎಲ್‍ಸಿ ಫಲಿತಾಂಶ ವೀಕ್ಷಿಸಬಹುದು. ಇದನ್ನೂ ಓದಿ: ಸಾಮಾನ್ಯ ನಾಗರಿಕನಂತೆ BMTC ಬಸ್‍ನಲ್ಲಿ ರಾಹುಲ್ ಗಾಂಧಿ ಸಂಚಾರ

Share This Article