ಬಾಗಲಕೋಟೆ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ (SSLC) ಆರು ವಿಷಯದಲ್ಲಿ ಫೇಲ್ ಆದ ಪುತ್ರನಿಗೆ (Son) ಪೋಷಕರು ಕೇಕ್ (Cake) ತಿನ್ನಿಸಿ ಆತ್ಮಸ್ಥೈರ್ಯ ತುಂಬಿದ್ದಾರೆ.
ಪರೀಕ್ಷೆಯಲ್ಲಿ ಫೇಲ್ ಆದರೂ ಆತ್ಮಸ್ಥೈರ್ಯ ಕುಗ್ಗಬಾರದು ಎಂಬ ಎಂಬ ಕಾರಣಕ್ಕೆ ತಂದೆ, ತಾಯಿ ಸಹೋದರ, ಸಹೋದರಿ, ಅಜ್ಜಿ ಹಾಗೂ ಕುಟುಂಬವರು ಕೇಕ್ ತಿನ್ನಿಸಿದ್ದಾರೆ.
ಬಸವೇಶ್ವರ ಹೈಸ್ಕೂಲ್‌ನಲ್ಲಿ ಆಂಗ್ಲ ಮಾಧ್ಯಮದಲ್ಲಿ 10ನೇ ತರಗತಿ ಓದಿದ್ದ ಅಭಿಷೇಕ್ ಯಲ್ಲಪ್ಪ ಚೊಳಚಗುಡ್ಡ 625ಕ್ಕೆ 200 ಅಂಕ ಪಡೆದು ಫೇಲ್ ಆಗಿದ್ದ. ಇದನ್ನೂ ಓದಿ: SSLC Results – ದಕ್ಷಿಣ ಕನ್ನಡ ಫಸ್ಟ್, ಕಲಬುರಗಿ ಲಾಸ್ಟ್ : ನಿಮ್ಮ ಜಿಲ್ಲೆಗೆ ಎಷ್ಟನೇ ಸ್ಥಾನ?
6ಕ್ಕೆ 6 ವಿಷಯಗಳಲ್ಲಿ ಫೇಲ್ ಆದ ಹಿನ್ನೆಲೆಯಲ್ಲಿ ನವನಗರದಲ್ಲಿರುವ ನಿವಾಸದಲ್ಲಿ ಅಭಿಷೇಕ್ ಬೇಸರದಲ್ಲಿದ್ದ. ಬೇಸರದಲ್ಲಿದ್ದ ಅಭಿಷೇಕ್‌ಗೆ ಆತ್ಮಸ್ಥೈರ್ಯ ತುಂಬಲು ಅಚ್ಚರಿ ಎಂಬಂತೆ ಪೋಷಕರು (Parents) ಕೇಕ್ ತಿನ್ನಿಸಿ ಸಿಹಿ ಮುತ್ತು ನೀಡಿ ಸಮಾಧಾನ ಮಾಡಿದ್ದಾರೆ. ಪರೀಕ್ಷೆ ಒಂದೇ ಜೀವನವಲ್ಲ ಮರಳಿ ಪ್ರಯತ್ನ ಮಾಡು ಎಂದು ಹೆಗಲ ಮೇಲೆ ಕೈ ಇಟ್ಟು ತಂದೆ ಧೈರ್ಯ ತುಂಬಿದ್ದಾರೆ. ಇದನ್ನೂ ಓದಿ: SSLC ಫಲಿತಾಂಶ ಪ್ರಕಟ; ಶೇ.62.34 ರಿಸಲ್ಟ್ – ಈ ಬಾರಿಯೂ ಬಾಲಕಿಯರೇ ಮೇಲುಗೈ
15 ತಿಂಗಳ ಮಗುವಾಗಿದ್ದಾಗ ಎರಡು ಪಾದ ಸುಟ್ಟು ಹೋಗಿದ್ದರಿಂದ ಅಭಿಷೇಕ್ ನೆನಪಿನ ಶಕ್ತಿಯನ್ನು ಕಳೆದುಕೊಂಡಿದ್ದಾನೆ. ಇದರಿಂದಾಗಿ ಉತ್ತರ ನೆನಪಿಟ್ಟುಕೊಂಡು ಬರೆಯಲು ಅಭಿಷೇಕ್‌ಗೆ ಸಾಧ್ಯವಾಗಿಲ್ಲ.
ಫೇಲ್ ಆಗಿದ್ದರಿಂದ ಬಹಳ ಬೇಸರವಾಗಿತ್ತು. ತಂದೆ, ತಾಯಿ ಎಲ್ಲರೂ ಈಗ ಧೈರ್ಯ ತುಂಬಿದ್ದಾರೆ. ಫೇಲ್ ಆದರೂ ಧೈರ್ಯ ತುಂಬಿ ಕೇಕ್ ತಿನ್ನಿಸಿ ಸಂಭ್ರಮಿಸಿದ್ದಾರೆ. ನಾನು ಪರೀಕ್ಷೆಯಲ್ಲಿ ಫೇಲ್ ಆಗಿರಬಹುದು, ಜೀವನದಲ್ಲಿ ಫೇಲ್ ಆಗಲ್ಲ. ಮತ್ತೆ ಪ್ರಯತ್ನ ಮಾಡಿ ಪಾಸ್ ಆಗುತ್ತೇನೆ. ಪರೀಕ್ಷೆಯಲ್ಲಿ ಫೇಲ್ ಆದರೂ ಜೀವನದಲ್ಲಿ ಸಾಧಿಸಿ ತೋರಿಸುತ್ತೇನೆ ಎಂದು ಅಭಿಷೇಕ್ ಹೇಳಿದ್ದಾನೆ.