ಬೆಂಗಳೂರು: ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಹಾಸನಕ್ಕೆ ಮೊದಲ ಸ್ಥಾನ ಬಂದಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾರಣ ಯಾರೆಂಬುವುದಕ್ಕೆ ಸಚಿವ ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರು ಪ್ರತಿಕ್ರಿಯಿಸಿದ್ದಾರೆ.
ಹಾಸನ ಮೊದಲ ಸ್ಥಾನ ಬರಲು ನಾನೇ ಕಾರಣ ಎಂದು ಸ್ವತಃ ಭವಾನಿ ರೇವಣ್ಣ ಅವರೇ ಹೇಳಿಕೊಂಡಿದ್ದು, ಈ ಮೂಲಕ ಪತಿ ಮಾತು ನಿಜ ಎಂದು ಸಮರ್ಥಿಸಿಕೊಂಡಿದ್ದಾರೆ. ಸಾಧನೆಗೆ ಪತಿಯೇ ಸ್ಫೂರ್ತಿ, ರೋಹಿಣಿ ಸಿಂಧೂರಿ ಸಾಧನೆ ಏನೂ ಇಲ್ಲ. ರೇವಣ್ಣ ಹೇಳಿದ್ದರಲ್ಲಿ ಸತ್ಯ ಇದೆ. ನಾನು ಜಿಲ್ಲಾ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಆಗಿದ್ದಾಗ ಹಾಸನ 31ನೇ ಸ್ಥಾನದಲ್ಲಿತ್ತು. ಪ್ರತಿ ತಿಂಗಳು ಸಭೆ ನಡೆಸಿ ಫಲಿತಾಂಶ ಸುಧಾರಣೆಗೆ ಕಾರ್ಯಕ್ರಮ ರೂಪಿಸಿದ್ದೆನು. ಶಿಕ್ಷಣಕ್ಕೆ ಒತ್ತು ನೀಡುತ್ತಿದ್ದ ರೇವಣ್ಣ ಅವರೇ ಸಾಧನೆಗೆ ಸ್ಫೂರ್ತಿ ಎಂದು ಭವಾನಿ ರೇವಣ್ಣ ಹೇಳಿದ್ದಾರೆ. ಇದನ್ನೂ ಓದಿ: SSLCಯಲ್ಲಿ ಹಾಸನಕ್ಕೆ ಉತ್ತಮ ಫಲಿತಾಂಶ ಬರಲು ಪತ್ನಿ ಭವಾನಿ ಕಾರಣ- ರೇವಣ್ಣ
Advertisement
Advertisement
ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಸಾಧನೆ ಏನೂ ಇಲ್ಲ. ಒಂದೂವರೆ ವರ್ಷದಲ್ಲಿ ಡಿಸಿ ಮೇಡಂ ಯಾವುದೇ ಮೀಟಿಂಗ್ ಮಾಡಿಲ್ಲ. ಸುಮ್ಮನೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ ಎಂಬ ಪತಿ ರೇವಣ್ಣ ವಾದವನ್ನ ಭವಾನಿ ರೇವಣ್ಣ ಅವರು ಸಮರ್ಥನೆ ಮಾಡಿಕೊಂಡಿದ್ದಾರೆ.
Advertisement
ರೇವಣ್ಣ ಹೇಳಿದ್ದೇನು?
ಎಸ್‍ಎಸ್‍ಎಲ್‍ಸಿ ಫಲಿತಾಂಶದಲ್ಲಿ ಉತ್ತಮ ಸ್ಥಿತಿಗೆ ಸರ್ಕಾರದ ನೀತಿಗಳು ಕಾರಣವಾಗಿದೆ. ಹಾಗೆಯೇ ನನ್ನ ಪತ್ನಿ ಜಿಲ್ಲಾ ಪಂಚಾಯಿತಿ ಶಿಕ್ಷಣಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ಪ್ರಯತ್ನ ಕೂಡ ಸಫಲವಾಗಿದೆ. ಪ್ರತಿ ಹಂತದಲ್ಲೂ ಸಭೆ ನಡೆಸಿ 2006 ರಿಂದ ಕುಮಾರಸ್ವಾಮಿ ಸರ್ಕಾರ ಶಿಕ್ಷಣಕ್ಕೆ ಒತ್ತು ನೀಡಿದೆ. ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ಅವರು ಎರಡು ತಿಂಗಳಿಗೊಮ್ಮೆ ಸಭೆ ನಡೆಸುತ್ತಿದ್ದರು. ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ನೀಡಿ ಎಂದು ಬಿಇಓಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ಸರ್ಕಾರಿ ಶಾಲೆಗಳ ಮೂಲಭೂತ ಸೌಕರ್ಯಕ್ಕೆ ಕುಮಾರಸ್ವಾಮಿ 1,600 ಕೋಟಿ ಅನುದಾನ ನೀಡಿದ್ದರು ಎಂದು ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ಇತ್ತೀಚೆಗೆ ಹೇಳಿದ್ದರು.