ಕೊಡಗು: ಬಾಲಕಿಯ ಭೀಕರ ಹತ್ಯೆ ಮಾಡಿದ್ದ ಆರೋಪಿ ಅರೆಸ್ಟ್‌ – ಇನ್ನೂ ಪತ್ತೆಯಾಗದ ರುಂಡ

Public TV
1 Min Read
kodagu student murder accused

ಕೊಡಗು: ಬಾಲಕಿಯ ರುಂಡ ಕತ್ತರಿಸಿ ಭೀಕರವಾಗಿ ಹತ್ಯೆ ಮಾಡಿದ್ದ ಆರೋಪಿ ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯ ಹತ್ಯೆ ಮಾಡಿದ್ದ ಆರೋಪಿ ಪ್ರಕಾಶ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ಮಾಡಿ ರುಂಡ ಹಾಗೂ ಕೋವಿಯೊಂದಿಗೆ ಆರೋಪಿ ಪರಾರಿಯಾಗಿದ್ದ. ಕಾಡಿನಲ್ಲಿದ್ದ ಆತನನ್ನು ಸೋಮವಾರಪೇಟೆ ಪೊಲೀಸ್‌ ಠಾಣೆಗೆ ಪೊಲೀಸರು ಕರೆತಂದಿದ್ದಾರೆ. ಇದನ್ನೂ ಓದಿ: ಇಂದು ನ್ಯಾಯಾಧೀಶರ ಮುಂದೆ ದೇವರಾಜೇಗೌಡ

KODAGU

ಅರೋಪಿ ಸೆರೆಯಾದರೂ ಬಾಲಕಿಯ ರುಂಡ ಮಾತ್ರ ಪತ್ತೆಯಾಗಿಲ್ಲ. ಹೆಚ್ಚಿನ ವಿಚಾರಣೆ ನಡೆಸಿ ನಂತರ ಮಾಹಿತಿ ನೀಡುವುದಾಗಿ ಎಸ್‌ಪಿ ರಾಮರಾಜನ್ ತಿಳಿಸಿದ್ದಾರೆ.

ಕೊಡಗಿನಲ್ಲಿ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿಯ ಭೀಕರ ಹತ್ಯೆಯಾಗಿತ್ತು. ಸೂರ್ಲಬ್ಬಿ ಸರ್ಕಾರಿ ‌ಪ್ರೌಢಶಾಲೆಯಲ್ಲಿ ಹತ್ತನೇ ತರಗತಿಯಲ್ಲಿ ಏಕೈಕ ವಿದ್ಯಾರ್ಥಿನಿಯಾಗಿದ್ದ ಮೀನಾ, ಪರೀಕ್ಷೆಯಲ್ಲಿ ಪಾಸಾಗುವ ಮೂಲಕ ತನ್ನ ಶಾಲೆಗೆ 100% ಫಲಿತಾಂಶ ತಂದು ಕೊಟ್ಟಿದ್ದಳು. ಬೆಳಗ್ಗೆಯಿಂದಲೂ ತಾನು ಪಾಸಾದ ಖುಷಿಯಲ್ಲಿ ಇದ್ದ ಮೀನಾ, ಶಾಲೆಯತ್ತ ಬಂದು ತೇರ್ಗಡೆಯಾದ ಖುಷಿಯಲ್ಲಿ ಮನೆಗೆ ಹೋಗುತ್ತಿದ್ದಳು. ಇದೇ ಸಂದರ್ಭದಲ್ಲಿ ಆಕೆಯನ್ನು ಅಡ್ಡಗಟ್ಟಿ ಪ್ರಕಾಶ್‌ ಹತ್ಯೆ ಮಾಡಿದ್ದ. ಇದನ್ನೂ ಓದಿ: ಬೆಂಗಳೂರಲ್ಲಿ ಮಳೆ ಅಬ್ಬರ; ಮನೆಗಳಿಗೆ ನುಗ್ಗಿದ ನೀರು

ಹತ್ಯೆ ಮಾಡಿ ರುಂಡ-ಮುಂಡ ಬೇರ್ಪಡಿಸಿ ಆರೋಪಿ ಪರಾರಿಯಾಗಿದ್ದ. ರುಂಡದೊಂದಿಗೆ ಎಸ್ಕೇಪ್‌ ಆಗಿದ್ದ. ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದರು. ಕೊನೆಗೂ ಪೊಲೀಸರ ಕೈಗೆ ಪ್ರಕಾಶ್‌ ಸಿಕ್ಕಿಬಿದ್ದಿದ್ದಾನೆ.

Share This Article