Districts
ರಾಯಚೂರಿನ SSLC ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ವಿತರಣೆ

ರಾಯಚೂರು: ಪಬ್ಲಿಕ್ ಟಿವಿ, ರೋಟರಿ ಕ್ಲಬ್ ಸಹಯೋಗದ ಅಡಿ ನಡೆಯುತ್ತಿರುವ ಜ್ಞಾನದೀವಿಗೆ ಅಡಿ ಇಂದು ನಗರದ ಎಸ್ಎಸ್ಎಲ್ಸಿ ಮಕ್ಕಳಿಗೆ ಉಚಿತ ಟ್ಯಾಬ್ಗಳನ್ನು ವಿತರಿಸಲಾಯಿತು.
ಶಾಸಕ ಡಾ.ಶಿವರಾಜ್ ಪಾಟೀಲ್ ನೀಡಿರುವ ಟ್ಯಾಬ್ಗಳ ನೀಡಿದ್ದು, ಹಿಂದುಳಿದ ಪ್ರದೇಶಗಳಲ್ಲಿರುವ ಸಿಯತಲಾಬ್ ಸರ್ಕಾರಿ ಪ್ರೌಢಶಾಲೆ, ಎಲ್ಬಿಎಸ್ ನಗರ ಸರ್ಕಾರಿ ಪ್ರೌಢಶಾಲೆ ಹಾಗೂ ಗಾಜಗಾರಪೇಟೆ ಸರ್ಕಾರಿ ಪ್ರೌಢಶಾಲೆ ಸೇರಿ ಒಟ್ಟು ಮೂರು ಶಾಲೆಯ 185 ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ 93 ಉಚಿತ ಟ್ಯಾಬ್ಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ರಾಯಚೂರು ಕ್ಷೇತ್ರದ ಶಿಕ್ಷಣಾಧಿಕಾರಿ ಚಂದ್ರಶೇಖರ್ ದೊಡ್ಡಮನಿ, ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗೋಪಾಲ ರೆಡ್ಡಿ, ರೋಟರಿ ಕ್ಲಬ್ ರಾಯಚೂರು ಸೆಂಟ್ರಲ್ ಅಧ್ಯಕ್ಷ ವಿಜಯ ಮಹಾಂತೇಶ್, ರೋಟರಿ ಇನ್ನರ್ವೀಲ್ನ ಅರುಣಾ ಹಿರೇಮಠ್, ಎಪಿಎಂಸಿ ಸದಸ್ಯ ಜನಾರ್ದನರೆಡ್ಡಿ ಸೇರಿದಂತೆ ಹಲವರು ಭಾಗವಹಿಸಿದ್ದರು.
