Dharwad
SSLC ವಿದ್ಯಾರ್ಥಿನಿ ನೇಣಿಗೆ ಶರಣು

ಧಾರವಾಡ: ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ನಗರದಲ್ಲಿ ನಡೆದಿದೆ.
ನಗರದ ಪವನ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ವರ್ಷಾ ಬಳೋಡಿ (15) ನೇಣಿಗೆ ಶರಣಾದ ವಿದ್ಯಾರ್ಥಿ. ಶ್ರೀರಾಮನಗರದ ಮನೆಯಲ್ಲಿ ರವಿವಾರ ರಾತ್ರಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾಳೆ.
ಮೃತ ವಿದ್ಯಾರ್ಥಿನಿ ಯಾವ ಕಾರಣಕ್ಕೆ ನೇಣು ಬಿಗಿದುಕೊಂಡಿದ್ದಾಳೆ ಎಂದು ತಿಳಿದು ಬಂದಿಲ್ಲ. ಸದ್ಯ ಸ್ಥಳಕ್ಕೆ ವಿದ್ಯಾಗಿರಿ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಾರೆ.
