ಇಂದಿನಿಂದ SSLC ಪೂರಕ ಪರೀಕ್ಷೆ ಆರಂಭ

Public TV
1 Min Read
SSLC
ಸಾಂದರ್ಭಿಕ ಚಿತ್ರ

ಬೆಂಗಳೂರು: ಜೂನ್ 12ರಿಂದ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗಳು (SSLC Supplementary Exams) ಪ್ರಾರಂಭವಾಗುತ್ತಿದ್ದು, ಶಿಕ್ಷಣ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ.

ಇಂದಿನಿಂದ ಜೂನ್ 19ರ ವರೆಗೆ ಪೂರಕ ಪರೀಕ್ಷೆಗಳು ನಡೆಯಲಿದ್ದು, ರಾಜ್ಯಾದ್ಯಂತ 458 ಕೇಂದ್ರಗಳಲ್ಲಿ ಪರೀಕ್ಷೆ (Exam Center) ನಡೆಯಲಿವೆ. 1,11,689 ವಿದ್ಯಾರ್ಥಿಗಳು (Students) ಪರೀಕ್ಷೆಗೆ ನೋಂದಣಿಯಾಗಿದ್ದಾರೆ. ಇದನ್ನೂ ಓದಿ: `ಶಕ್ತಿ’ಗೆ ನಮನ – ಮೆಟ್ಟಿಲಿಗೆ ಶಿರವಿಟ್ಟು ನಮಸ್ಕರಿಸಿ ಬಸ್ ಏರಿದ ಅಜ್ಜಿ

SSLC EXAM
ಸಾಂದರ್ಭಿಕ ಚಿತ್ರ

ಪರೀಕ್ಷಾ ಕೇಂದ್ರಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಮೊದಲ ದಿನವಾದ ಸೋಮವಾರ ಪ್ರಥಮ ಭಾಷೆಯ ವಿಷಯಗಳ ಪರೀಕ್ಷೆ ನಡೆಯಲಿದೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: KERC ದರ ಏರಿಸಿದ್ದಕ್ಕೆ ವಿದ್ಯುತ್‌ ಬಿಲ್‌ ಹೆಚ್ಚಾಗಿದೆ: ಬೆಸ್ಕಾಂ ಸ್ಪಷ್ಟನೆ

Share This Article