Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕಾಂಗ್ರೆಸ್ ಆಡಳಿತದಲ್ಲಿ ಶೈಕ್ಷಣಿಕ ದುರಾಡಳಿತ – SSLC ವೆಬ್‌ಕಾಸ್ಟಿಂಗ್ ಬಗ್ಗೆ ತನಿಖೆ ಆಗಬೇಕು: ಅರುಣ್ ಶಹಾಪೂರ

Public TV
Last updated: May 14, 2024 7:04 pm
Public TV
Share
4 Min Read
arun shahapur
SHARE

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದು ಒಂದು ವರ್ಷ ಪೂರೈಸುತ್ತಿದೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರವು ತನ್ನ ದುರಾಡಳಿತದ ಮೂಲಕ ಶಿಕ್ಷಣ ಕ್ಷೇತ್ರವನ್ನು ಹಾಳುಗಡೆವಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ್ ಶಹಾಪೂರ ಅವರು ಆಕ್ಷೇಪಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು (ಮಂಗಳವಾರ) ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಲಾ ಶಿಕ್ಷಣ ವ್ಯವಸ್ಥೆಯಡಿ ರಾಜ್ಯ ಪಠ್ಯಕ್ರಮದಲ್ಲಿ 1 ಕೋಟಿಗೂ ಹೆಚ್ಚು ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ. 9 ಲಕ್ಷದಷ್ಟು ವಿದ್ಯಾರ್ಥಿಗಳು 10ನೇ ತರಗತಿ ಪರೀಕ್ಷೆ ಬರೆದಿದ್ದಾರೆ. ಕರ್ನಾಟಕ ಸರ್ಕಾರ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಈ ಇಲಾಖೆಯನ್ನು ನಿರ್ವಹಿಸುವಲ್ಲಿ ವಿಫಲವಾಗಿದ್ದಾರೆ. 1 ಕೋಟಿ ಮಕ್ಕಳ ಭವಿಷ್ಯವನ್ನು ಅತಂತ್ರಕ್ಕೆ ತಳ್ಳುವ ಕೆಲಸ ಮಾಡಿದ್ದಾರೆ ಎಂದು ದೂರಿದರು.

10 ನೇ ತರಗತಿ ಪರೀಕ್ಷೆ ಬರೆದ 9 ಲಕ್ಷದಷ್ಟು ವಿದ್ಯಾರ್ಥಿಗಳು ಮತ್ತು ಪಾಲಕರು ಆತಂಕದಲ್ಲಿದ್ದಾರೆ. ಕೆಎಸ್‍ಇಎಪಿ ಮೂಲಕ ಪರೀಕ್ಷೆ ನಡೆಸಿದ್ದಾರೆ. ಯಶಸ್ವಿ ಪರೀಕ್ಷೆ ನಡೆಸಿದ್ದಾಗಿ ಹೇಳಿದ್ದಾರೆ. ಸ್ವಾತಂತ್ರ್ಯ ಬಂದ ಬಳಿಕ ಅತ್ಯಂತ ಕೆಟ್ಟ ಪರೀಕ್ಷೆ ನಡೆದಿದ್ದರೆ ಅದು ಮಧು ಬಂಗಾರಪ್ಪ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಎಂದು ಅವರು ವಿಷಾದದಿಂದ ತಿಳಿಸಿದರು. ದಿಕ್ಕು ದೆಸೆಯಿಲ್ಲದ ಶಿಕ್ಷಣವನ್ನು ನಿರ್ಮಿಸಿದ್ದಾರೆ ಎಂದು ಟೀಕಿಸಿದರು.

ಪಠ್ಯಪುಸ್ತಕದಲ್ಲಿನ ಪಾಠಗಳನ್ನು ಕಿತ್ತು ಹಾಕುವುದಾಗಿ ಹೇಳುವ ಮೂಲಕ ಈ ಸರ್ಕಾರ ಕಾರ್ಯಾರಂಭ ಮಾಡಿದೆ. ಶಿಕ್ಷಣ, ಪಠ್ಯದ ವಿಚಾರ ಶಿಕ್ಷಣ ತಜ್ಞರ ಮಟ್ಟದಲ್ಲಿ, ಇಲಾಖೆ ಮಟ್ಟದಲ್ಲಿ ನಿರ್ಧಾರವಾಗುತ್ತಿತ್ತು. ಆದರೆ ಕಳೆದ ವರ್ಷ ಅದು ಕ್ಯಾಬಿನೆಟ್‍ನಲ್ಲಿ ನಿರ್ಧಾರವಾಗಿದೆ. ಇವರು ಕನ್ನಡದ 10 ಪಾಠ, ಸಮಾಜ ವಿಜ್ಞಾನದ 10 ಪಾಠಗಳನ್ನು ತೆಗೆದುಹಾಕಿ ಮೊಟ್ಟ ಮೊದಲ ಬಾರಿಗೆ ರಾಜಕೀಯಕರಣಗೊಳಿಸುವ ಕಾರ್ಯಕ್ಕೆ ಈಗಿನ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಕೈ ಹಾಕಿದ್ದರು. ಶಿಕ್ಷಣ ಸಚಿವರು ಸೂತ್ರದ ಗೊಂಬೆಯಾಗಿದ್ದರು ಎಂದು ವಿವರಿಸಿದರು.

ಕಾಂಗ್ರೆಸ್ ಪಕ್ಷ ಇವತ್ತು ಇಡೀ ಕರ್ನಾಟಕದಲ್ಲಿ ಚುನಾವಣಾ ಚಾಣಕ್ಯರ ಕಪಿಮುಷ್ಟಿಗೆ ಸಿಲುಕಿದೆ. ಚುನಾವಣಾ ಚಾಣಕ್ಯರೇ ಕಾಂಗ್ರೆಸ್ಸಿನ ನೀತಿ ನಿರೂಪಿಸುತ್ತಿದ್ದಾರೆ. ಪಾಠಗಳು ಯಾವುದೇ ಶಾಲೆಯಲ್ಲಿ ಮಕ್ಕಳ ವರೆಗೆ ತಲುಪಲಿಲ್ಲ. ಎನ್‍ಇಪಿ ಜಾರಿ ಇಲ್ಲ ಎಂಬ ಗೊಂದಲಗಳಿಗೆ ಕೈಹಾಕಿದ್ದರು. ಕೊನೆಗೆ ಪರೀಕ್ಷೆಯು ಪ್ರಹಸನ ಎಂಬಂತೆ ನಡೆದಿದೆ. 5 ನೇ ತರಗತಿ, 8 ನೇ ತರಗತಿ, 9 ನೇ ತರಗತಿ, 11ನೇ ತರಗತಿ ಪರೀಕ್ಷೆ ನಡೆಯುತ್ತದೆಯೋ ಇಲ್ಲವೋ ಎಂಬ ವಿಚಾರ ದಿನವೂ ಬೆಳಗ್ಗೆ ಪಾಲಕರಿಗೆ ತಲೆನೋವಾಗಿ ಪರಿಗಣಮಿಸಿತ್ತು ಎಂದು ತಿಳಿಸಿದರು.

ಹೈಕೋರ್ಟ್, ಸುಪ್ರೀಂ ಕೋರ್ಟ್, ವಿಭಾಗೀಯ ಪೀಠ- ಹೀಗೆ ಸಮಸ್ಯೆಯನ್ನು ಪ್ರಶ್ನಿಸಲಾಯಿತು. ಆಡಳಿತ ನಡೆಸುವವರಿಗೆ ಈ ರೀತಿಯ ದೃಢ ನಿರ್ಣಯ ತೆಗೆದುಕೊಳ್ಳುವ ಮೊದಲು ಕೋರ್ಟಿನಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳ ಸಾಮಾನ್ಯ ಜ್ಞಾನ ಈ ಸರ್ಕಾರಕ್ಕೆ ಇದೆಯೇ? ಅವರು ಅಲ್ಲಿ ಎಡವಿದರು ಎಂಬ ಕಾರಣಕ್ಕೆ 1 ಕೋಟಿ ಮಕ್ಕಳು ಮತ್ತು ಅವರ ಪಾಲಕರಿಗೆ ಒತ್ತಡ ಕೊಡುವ ಕೆಲಸವನ್ನು ಈ ಸರ್ಕಾರ ಮಾಡಿತ್ತು ಎಂದು ಟೀಕಿಸಿದರು.

ಈ ಪರೀಕ್ಷೆಗಳ ಬಗ್ಗೆ ಈಗಲೂ ದೃಢ ನಿಲುವನ್ನು ಈ ಸರ್ಕಾರ ತೆಗೆದುಕೊಂಡಿಲ್ಲ. 10 ನೇ ತರಗತಿ ಹಾಗೂ ಪಿಯುಸಿಗೆ 3 ಪರೀಕ್ಷೆ (10- 1,2,3), (ಪಿಯು- 1,2,3) ಮಾಡಲು ಹೊರಟವರು ಮಕ್ಕಳ, ಪಾಲಕರ ಒತ್ತಡ, ಗೊಂದಲವನ್ನು ಯೋಚಿಸಿಲ್ಲ. ಯಾವ ಪರೀಕ್ಷೆ, ಪರೀಕ್ಷೆ ಬರೆದವರು ಯಾರು, ಯಾರಿಂದ ಮೌಲ್ಯಮಾಪನ ಎಂಬ ದೊಡ್ಡ ಗೊಂದಲಕ್ಕೆ ಇದು ಕಾರಣವಾಗಿದೆ. ಇಲಾಖೆಗೂ ಈ ಕುರಿತು ಸ್ಪಷ್ಟತೆ ಇಲ್ಲ. 3 ಪರೀಕ್ಷೆ ಇವರೇನು ಪುಕ್ಕಟೆ ಮಾಡುತ್ತಾರಾ ಎಂದು ಕೇಳಿದರು.

ಪರೀಕ್ಷೆ ಎಂದರೆ ಸರ್ಕಾರಕ್ಕೆ ಒಂದು ಉದ್ಯಮವೇ?
ಒಂದು ಪರೀಕ್ಷೆಗೆ 410 ರೂ., 2 ಪರೀಕ್ಷೆಗೆ 510 ರೂ., 3 ಆದರೆ 710 ರೂ. ಪಾವತಿಸಬೇಕು. ಪರೀಕ್ಷೆ ಎಂದರೆ ಸರ್ಕಾರಕ್ಕೆ ಒಂದು ಉದ್ಯಮವೇ? ಪ್ರತಿಯೊಂದು 10ನೇ ಪರೀಕ್ಷೆ ನಡೆಯುವ ಕೇಂದ್ರಕ್ಕೆ ವೆಬ್ ಕಾಸ್ಟಿಂಗ್ ಅಳವಡಿಸಲು ಆದೇಶ ಮಾಡಿ ಒತ್ತಡ ಹೇರುವ ಹಾಗೂ ಯಾಕಾದರೂ ಪರೀಕ್ಷಾ ಕೇಂದ್ರ ಮಾಡಿದ್ದೇವೋ ಎಂದು ಯೋಚಿಸುವ ಪರಿಸ್ಥಿತಿಯನ್ನು ಸರ್ಕಾರ ನಿರ್ಮಿಸಿತ್ತು. ಪರೀಕ್ಷೆ ಸಂದರ್ಭದಲ್ಲಿ ಎಲ್ಲಿ ತಮ್ಮ ನೌಕರಿಗೆ ಕುತ್ತಾಗುವುದೋ ಎಂಬ ಆತಂಕ ಶಿಕ್ಷಕರಲ್ಲಿತ್ತು. ವೆಬ್ ಕಾಸ್ಟಿಂಗ್ ಬಗ್ಗೆ ಯಾವುದೇ ಶಿಕ್ಷಕರಿಗೆ ಪರಿಕಲ್ಪನೆ ಇರಲಿಲ್ಲ. ತರಬೇತಿ, ಮಾಹಿತಿಯೂ ಇರಲಿಲ್ಲ ಎಂದು ನುಡಿದರು.

ಬಿಇಒ, ಡಿಡಿಪಿಐ, ಕಮೀಷನರ್‌ಗಳ ಮೂಲಕ ಒತ್ತಡ ಹೇರಿ ಶಿಕ್ಷಕರ ದಮನ ಮಾಡಿ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮೂಲಕ ಪರೀಕ್ಷಾ ಕೇಂದ್ರಗಳನ್ನು ನಡೆಸುವ ಕೆಲಸ ಮಾಡಿದ್ದರು. ಇದರ ಪರಿಣಾಮವಾಗಿ ಕ್ಯಾಮೆರಾ ಹಾಕಿ ಪರೀಕ್ಷೆ ಬರೆದ ಮಕ್ಕಳಿಗೆ ಗೊಂದಲ ಉಂಟಾಗಿದೆ. ಸಿಟ್ಟಿಂಗ್ ಸ್ಕ್ವಾಡ್, ಫ್ಲೈಯಿಂಗ್ ಸ್ಕ್ವಾಡ್, ವೆಬ್ ಕಾಸ್ಟಿಂಗ್ ಉಳ್ಳ 10 ನೇ ಪರೀಕ್ಷೆ ಎಂದರೆ ಅದು ಯುಪಿಎಸ್‍ಸಿ ಪರೀಕ್ಷೆಗಿಂತ ದೊಡ್ಡದೇ ಎಂದು ಅವರು ಪ್ರಶ್ನೆ ಮುಂದಿಟ್ಟರು.

10 ನೇ ತರಗತಿ ಪರೀಕ್ಷೆ ಎಂದರೆ ಮಕ್ಕಳನ್ನು ಭಯದ ವಾತಾವರಣದಲ್ಲಿ ಇಡಲಾಯಿತು. 10 ನೇ ತರಗತಿ ಪರೀಕ್ಷೆಯಲ್ಲಿ ನೈಜ ಮೌಲ್ಯಮಾಪನ ಮಾಡಿದ್ದರೆ ಫಲಿತಾಂಶ ಪಾತಾಳಕ್ಕೆ ಕುಸಿಯಲಿದೆ ಎಂಬುದು ಅವರಿಗೆ ಅರ್ಥವಾಯಿತು. ಇಡೀ ರಾಜ್ಯದ ಶಿಕ್ಷಕರು, ಶಿಕ್ಷಣ ತಜ್ಞರು ಮತ್ತು ಡಯಟ್ ಮತ್ತು ಇಲಾಖೆಯನ್ನು ಕತ್ತಲಲ್ಲಿ ಇಡಲಾಯಿತು. ಇವರು ಸ್ಥಾಪಿಸಿದ ಕೆಎಸ್‍ಇಇ ಮೂಲಕ ಉತ್ತೀರ್ಣ ಅಂಕವನ್ನು 35ರಿಂದ 25ಕ್ಕೆ ಇಳಿಸಿದ್ದಾರೆ. ಇದು ಶಿಕ್ಷಣ ಕ್ಷೇತ್ರ ಹಾಳು ಮಾಡಿದ ಈ ಸರ್ಕಾರದ ಸಾಧನೆ ಎಂದು ಟೀಕಿಸಿದರು.

TAGGED:Arun ShahapurkarnatakaSSLCಅರುಣ್‌ ಶಹಾಪೂರಎಸ್‍ಎಸ್‍ಎಲ್‍ಸಿಕರ್ನಾಟಕ
Share This Article
Facebook Whatsapp Whatsapp Telegram

You Might Also Like

Madikeri 1
Districts

ಗಯಾನಾದಲ್ಲಿ ಸಿಲುಕಿದ ಕೊಡಗಿನ ವ್ಯಕ್ತಿ – ಅನಾರೋಗ್ಯಕ್ಕೆ ತುತ್ತಾಗಿ ಸಾವು-ಬದುಕಿನ ಮಧ್ಯೆ ಹೋರಾಟ

Public TV
By Public TV
3 minutes ago
PSI NAGARAJAPPA
Crime

ತುಮಕೂರು | ಹೋಟೆಲ್‌ನಲ್ಲಿ ದಾವಣಗೆರೆ ಪಿಎಸ್‍ಐ ನೇಣಿಗೆ ಶರಣು

Public TV
By Public TV
27 minutes ago
Elon Musk
Latest

ಅಮೆರಿಕ ಪಾರ್ಟಿ; ಹೊಸ ರಾಜಕೀಯ ಪಕ್ಷ ಸ್ಥಾಪಿಸಿದ ಎಲಾನ್‌ ಮಸ್ಕ್‌

Public TV
By Public TV
30 minutes ago
BASAVARAJ RAYAREDDY
Districts

ಗ್ಯಾರಂಟಿ ಬೇಡ ಅಂತ ಹೇಳಿ, ಅದೇ ದುಡ್ಡಲ್ಲಿ ರಸ್ತೆ ಮಾಡಿಸ್ತೀವಿ: ರಾಯರೆಡ್ಡಿ

Public TV
By Public TV
52 minutes ago
Texas Flood
Latest

ಟೆಕ್ಸಾಸ್‌ನಲ್ಲಿ ಹಠಾತ್ ಪ್ರವಾಹ – 43 ಮಂದಿ ಸಾವು, 27 ಬಾಲಕಿಯರು ಕಣ್ಮರೆ

Public TV
By Public TV
1 hour ago
Man seriously injured after falling into fire during Muharram celebrations in Raichur
Crime

ಮೊಹರಂ ಆಚರಣೆ ವೇಳೆ ದುರಂತ – ಬೆಂಕಿಗೆ ಬಿದ್ದು ವ್ಯಕ್ತಿಗೆ ಗಂಭೀರ ಗಾಯ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?