ಬೆಂಗಳೂರು: ಎಸ್‌ಟಿ ನಿಗಮ ಹಗರಣ ಪ್ರಕರಣದ ತನಿಖೆಗೆ ಎಸ್‌ಐಟಿ (SIT) ರಚನೆ ಬಳಿಕ ಇಬ್ಬರು ಅಧಿಕಾರಿಗಳನ್ನು ಬಂಧಿಸಲಾಗಿದೆ. ವಾಲ್ಮೀಕಿ ನಿಗಮದ (Valmiki Development Corporation) ಎಂಡಿ ಪದ್ಮನಾಭ್ ಹಾಗೂ ಲೆಕ್ಕಾಧಿಕಾರಿ ಪರಶುರಾಮ್ ಅವರನ್ನು ಎಸ್‌ಐಟಿ ಬಂಧಿಸಿದೆ.
ವಾಲ್ಮೀಕಿ ನಿಗಮದ ಹಗರಣದ ಕುರಿತು ನಿಮ್ಮ ‘ಪಬ್ಲಿಕ್ ಟಿವಿ’ ವಿಸ್ತೃತ ವರದಿ ಬಿತ್ತರಿಸಿತ್ತು. ಶುಕ್ರವಾರ ರಾತ್ರಿ ಪದ್ಮನಾಭ್ ಮತ್ತು ಪರಶುರಾಮ್‌ನನ್ನು ಎಸ್‌ಐಟಿ ಬಂಧಿಸಿದ್ದು, ಇಂದು ಮಧ್ಯಾಹ್ನದ ಬಳಿಕ ನ್ಯಾಯಾಲಯದ ಮುಂದೆ ಹಾಜರುಪಡಿಸಲಿದೆ. ಇದನ್ನೂ ಓದಿ: ವಾಲ್ಮೀಕಿ ನಿಗಮದ ಹಣ ಹೋಗಿದ್ದು ಎಲ್ಲಿಗೆ? – ಬೆಂಗಳೂರು ಕಂಪನಿಗಳೇ ಅಧಿಕ
Advertisement
Advertisement
ಹಗರಣ ಬೆಳಕಿಗೆ ಬಂದ ಬಳಿಕ ಎಂಡಿ ಪದ್ಮನಾಭ್ ಹಾಗೂ ಲೆಕ್ಕಾಧಿಕಾರಿ ಪರಶುರಾಮ್ ಎಸ್ಕೇಪ್ ಆಗಿದ್ದರು. ಬೆಂಗಳೂರು ಹೊರವಲಯದಲ್ಲಿ ಅವರನ್ನು ಬಂಧಿಸಲಾಗಿದೆ. ಇಂದು ಬಂಧಿತರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ ಬಳಿಕ ಎಸ್‌ಐಟಿ ತನ್ನ ಕಸ್ಟಡಿಗೆ ಪಡೆಯಲಿದೆ. ಇದನ್ನೂ ಓದಿ: ಎಸ್‌ಐಟಿ ಅಧಿಕಾರಿಗಳ ಪ್ರಶ್ನೆಗಳಿಗೆ ಪ್ರಜ್ವಲ್ ಉತ್ತರ ನೀಡದೇ ಅಸಹಕಾರ
Advertisement