ಬೆಂಬಲಿಗರೇ ಬರುತ್ತೇವೆ ಎಂದ ಮೇಲೆ ಸೋಮಶೇಖರ್‌ ಕಾಂಗ್ರೆಸ್‌ನಲ್ಲಿರಲು ಸಾಧ್ಯವೇ : ಕೈ ಶಾಸಕ ಶ್ರೀನಿವಾಸ್‌

Public TV
1 Min Read
Nelamangala Congress Mla Srinivas

ಬೆಂಗಳೂರು: ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್ (ST Somashekar) ಅವರನ್ನು ಕಾಂಗ್ರೆಸ್‍ಗೆ ಸೇರ್ಪಡೆ ಆಗುತ್ತಾರಾ ಎಂಬ ಪ್ರಶ್ನೆ ಈಗಾಗಲೇ ಹರಿದಾಡಲು ಆರಂಭವಾಗಿದ್ದು, ಕೈ ಪಕ್ಷ ಸೇರ್ಪಡೆಯ  ಹೊಣೆಯನ್ನು ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಆಪ್ತ ನೆಲಮಂಗಲದ ಕಾಂಗ್ರೆಸ್ ಶಾಸಕ ಎನ್ ಶ್ರೀನಿವಾಸ್ (N Srinivas) ಹೊತ್ತಿದ್ದಾರೆ ಎನ್ನಲಾಗುತ್ತಿದೆ.

ಗುರುವಾರ ಯಶವಂತಪುರ ಕ್ಷೇತ್ರದ ಹೇರೋಹಳ್ಳಿಯಲ್ಲಿರುವ ಶಾಸಕರ ಕಚೇರಿಯಲ್ಲಿ ನಡೆದ ಬೆಂಬಲಿಗರ ಸಭೆಯಲ್ಲಿ ಶ್ರೀನಿವಾಸ್ ಕೂಡ ಭಾಗಿಯಾಗಿದ್ದರು. ಇದನ್ನೂ ಓದಿ: ಕಾಂಗ್ರೆಸ್‍ಗೆ ಜಂಪ್ ಆಗ್ತಾರಾ ಬಾಂಬೆ ಫ್ರೆಂಡ್ಸ್? – ಬಿಜೆಪಿ ಸ್ಥಳೀಯ ನಾಯಕರ ವಿರುದ್ಧ ಎಸ್‍ಟಿಎಸ್ ಕೆಂಡ

 

ಸೋಮಶೇಖರ್ ಬೆಂಬಲಿಗರು ಕಾಂಗ್ರೆಸ್ ಸೇರುವುದಾಗಿ ಹೇಳಿದ್ದಾರೆ. ಬೆಂಬಲಿಗರೇ ಬರುತ್ತೇವೆ ಎಂದು ಹೇಳಿದ ಮೇಲೆ ಸೋಮಶೇಖರ್ ಬಿಜೆಪಿಯಲ್ಲಿ (BJP) ಇರಲು ಸಾಧ್ಯವೇ? ಸೋಮಶೇಖರ್ ಸಹ ಕಾಂಗ್ರೆಸ್‍ಗೆ ಬರುವ ನಿರೀಕ್ಷೆ ಇದೆ. ಸಿಎಂ ಸಿದ್ದರಾಮಯ್ಯ ಕೂಡ ಒಪ್ಪಿಕೊಳ್ಳುತ್ತಾರೆ ಎಂದು ಶಾಸಕ ಶ್ರೀನಿವಾಸ್ ಹೇಳಿದ್ದಾರೆ.

ಸಭೆಯಲ್ಲಿ ಭಾಗಿಯಾಗಿದ್ದ ಮಾಜಿ ಕಾರ್ಪೊರೇಟರ್ ಚಿಕ್ಕರಾಜು ಮಾತನಾಡಿ, ನಮಗೆ ಇಲ್ಲಿ ಉಳಿಗಾಲವಿಲ್ಲ. ಇಲ್ಲಿ ನಮ್ಮ ವಿರುದ್ಧ ಪಿತೂರಿ ನಡೆಯುತ್ತಿದೆ. ಕಾಂಗ್ರೆಸ್‍ಗೆ ವಾಪಸ್ ಹೋಗೋಣ ಎಂದು ಒತ್ತಾಯಿಸಿದ್ದೇವೆ. ನಿರ್ಧಾರ ಕೈಗೊಳ್ಳಲು ಸೋಮಶೇಖರ್ ಸಮಯ ಕೇಳಿದ್ದಾರೆ. ಬಿಜೆಪಿ ಪಕ್ಷದ ವರಿಷ್ಠರ ಜೊತೆ ಮಾತಾಡಿ ಸರಿಪಡಿಸುತ್ತೇನೆ ಎಂದಿದ್ದಾರೆ. 3-4 ದಿನದಲ್ಲಿ ಸೋಮಶೇಖರ್ ತೀರ್ಮಾನ ತಿಳಿಸದಿದ್ದರೆ ನಮ್ಮ ದಾರಿ ನಾವು ನೋಡಿಕೊಳ್ಳುತ್ತೇವೆ ಎಂದು ತಿಳಿಸಿದರು.

 
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article