ಗಾಂಧೀಜಿ ತತ್ವಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು: ಎಸ್.ಟಿ.ಸೋಮಶೇಖರ್

Public TV
1 Min Read
SOMASHEKAR MYSURU 2

ಮೈಸೂರು: ಮಹಾತ್ಮ ಗಾಂಧೀಜಿ ಅವರ ತತ್ವಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು ಹಾಗೂ ಅವರು ಹಾಕಿಕೊಟ್ಟ ಮಾರ್ಗದಲ್ಲಿ ಎಲ್ಲರೂ ಸಾಗಬೇಕು ಎಂದು ಸಹಕಾರ ಸಚಿವ ಹಾಗೂ ಮೈಸೂರು, ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ಮಹಾತ್ಮ ಗಾಂಧೀಜಿಯವರ ಜನ್ಮ ದಿನಾಚರಣೆ ಅಂಗವಾಗಿ ನಗರದ ಗಾಂಧಿ ಸ್ಕ್ವೇರ್ ನಲ್ಲಿನ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ಕೋವಿಡ್ ಹಿನ್ನೆಲೆಯಲ್ಲಿ ಸರಳವಾಗಿ ಗಾಂಧಿ ಜಯಂತಿ ಆಚರಿಸಲಾಗುತ್ತಿದೆ. ಅಹಿಂಸೆ ಮತ್ತು ಸತ್ಯದ ಹಾದಿಯಲ್ಲಿ ಹೋರಾಟ ಮಾಡಬಹುದು ಎಂದು ಜಗತ್ತಿಗೆ ತೋರಿಸಿಕೊಟ್ಟ ಮಹಾತ್ಮನನ್ನು ನೆನೆಯುವುದು ಮಾತ್ರವಲ್ಲ, ಅವರ ವಿಚಾರಧಾರೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆಕೊಟ್ಟರು. ಇದನ್ನೂ ಓದಿ: ಗಾಂಧಿ ಜಯಂತಿ ವಿಶೇಷ – ವಿಜಯಪುರದ ಗ್ರಾಮ ಸಭೆ ವೀಕ್ಷಣೆ ಮಾಡಲಿದ್ದಾರೆ ಮೋದಿ

SOMASHEKAR MYSURU 1

ಈ ಸಂದರ್ಭದಲ್ಲಿ ಸಂಸದ ಪ್ರತಾಪ್ ಸಿಂಹ, ಶಾಸಕ ತನ್ವೀರ್ ಸೇಠ್, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಜಿಲ್ಲಾ ಪಂಚಾಯತ್ ಸಿಇಒ ಎ.ಎಂ.ಯೋಗೀಶ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ದಿನೇಶ್ ಗೂಳಿಗೌಡ ಸೇರಿದಂತೆ ನಾನಾ ಮುಖಂಡರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ: ಕೊಪ್ಪಳದಲ್ಲಿ ಮಧುಗಿರಿ ಮೋದಿ ಹುಚ್ಚಾಟ, ಎಫ್‍ಐಆರ್ ದಾಖಲು

ಪ್ರಾರ್ಥನಾ ಸಭೆಯಲ್ಲಿ ಭಾಗಿ

ಗಾಂಧಿ ಜಯಂತಿ ಅಂಗವಾಗಿ ಟೌನ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ಸರ್ವಧರ್ಮ ಪ್ರಾರ್ಥನಾ ಸಭೆಯಲ್ಲಿ ಎಸ್.ಟಿ.ಸೋಮಶೇಖರ್ ಅವರು ಭಾಗವಹಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *