ಮೈಸೂರು:ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗವಹಿಸುವ ಸ್ತಬ್ಧಚಿತ್ರಗಳ ನಿರ್ಮಾಣದ ಸಿದ್ಧತಾ ಕಾರ್ಯವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಪರಿಶೀಲಿಸಿದ್ದಾರೆ.
ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ರಂಗಮಂದಿರ ಮಂಟಪದ ಎದುರಿನ ಮಳಿಗೆಯಲ್ಲಿ ನಿರ್ಮಿಸುತ್ತಿರುವ ಸ್ತಬ್ಧಚಿತ್ರ ಪರಿಶೀಲನೆ ಮಾಡಿದ್ದಾರೆ. ನಿರ್ಮಾಣದ ಕಾರ್ಯದಲ್ಲಿ ತೊಡಗಿದ್ದ ಕಲಾವಿದರ ಜೊತೆಗೆ ಸಮಾಲೋಚಿಸಿ ಮಾಹಿತಿ ಪಡೆದರು. ಇದನ್ನೂ ಓದಿ: ಹಣವೇ ಇಲ್ಲ ಲಾಕ್ ಮಾಡುವ ಅವಶ್ಯಕತೆ ಇತ್ತಾ?- ಮಾಲೀಕನಿಗೆ ಪತ್ರ ಬರೆದ ಕಳ್ಳರು
Advertisement
Advertisement
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಅಧ್ಯಕ್ಷತೆಯ ಉನ್ನತಮಟ್ಟದ ಸಮಿತಿ ತೀರ್ಮಾನದಂತೆ ಸ್ತಬ್ಧಚಿತ್ರಗಳನ್ನು ಕಡಿಮೆ ಮಾಡಬೇಕು ಎನ್ನುವ ಕಾರಣಕ್ಕಾಗಿ ಈ ಬಾರಿ 6 ಸ್ತಬ್ಧಚಿತ್ರ ಪಾಲ್ಗೊಳ್ಳಲಿವೆ. ಅ.13ರ ಸಂಜೆ ಹೊತ್ತಿಗೆ ಸಂಪೂರ್ಣ ಸಿದ್ಧವಾಗಲಿದೆ. ಕಲಾತಂಡ ಭಾಗವಹಿಸಲಿವೆ. ದಸರಾ ಮಹೋತ್ಸವದ ಎಲ್ಲ ಸಿದ್ಧತೆ ಮುಗಿಯುತ್ತಿವೆ. ತಾಲೀಮಿಗೆ ಆನೆಗಳು ಸಜ್ಜಾಗಿವೆ ಎಂದರು. ಇದನ್ನೂ ಓದಿ: ಮದುವೆಗಾಗಿ ಮತಾಂತರ ತಪ್ಪು: ಮೋಹನ್ ಭಾಗವತ್
Advertisement
Advertisement
ಸರಳ ದಸರಾ ಮಹೋತ್ಸವ ಆಚರಣೆಯಾಗಿದ್ದರಿಂದ ಅಧಿಕಾರೇತರ ಸದಸ್ಯರನ್ನು ರಚನೆ ಮಾಡದೆ ಅಧಿಕಾರಿಗಳು ನಿರ್ವಹಣೆ ಮಾಡಿದ್ದಾರೆ. ದಸರಾ ಕಾರ್ಯಕ್ರಮಗಳು ಸುಲಲಿತವಾಗಿ ಜರುಗುತ್ತಿವೆ ಎಂದು ಹೇಳಿದರು.