ಬೆಂಗಳೂರು: ಸಹಕಾರಿ ಬ್ಯಾಂಕ್‌ಗಳ ಅಕ್ರಮ ತನಿಖೆಯನ್ನು ಸಿಬಿಐಗೆ ಸರ್ಕಾರ ವಹಿಸಲಿದೆ. 2-3 ದಿನಗಳಲ್ಲಿ ಸಿಎಂ ಜೊತೆ ಚರ್ಚೆ ಮಾಡಿ ನಿರ್ಧಾರ ಮಾಡುತ್ತೇವೆ ಎಂದು ಸಹಕಾರಿ ಸಚಿವ ಎಸ್.ಟಿ. ಸೋಮಶೇಖರ್ (ST Somashekhar) ತಿಳಿಸಿದರು.
ವಿಧಾನ ಪರಿಷತ್ (Vidhan Parishad) ಕಲಾಪದ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‌ನ (Congress) ಯು.ಬಿ. ವೆಂಕಟೇಶ್ ಪ್ರಶ್ನೆ ಕೇಳಿದರು. ಈ ಸರ್ಕಾರ ಸಹಕಾರಿ ಬ್ಯಾಂಕ್‌ಗಳ (Co Operative Bank) ಅಕ್ರಮದ ಪ್ರಕರಣದಲ್ಲಿ ಸುಳ್ಳು ಹೇಳುತ್ತಿದೆ. ಸಿಬಿಐಗೆ ಕೇಸ್ ಕೊಡುವುದಕ್ಕೆ ಹಿಂದೇಟು ಹಾಕುತ್ತಿದೆ. ಕೂಡಲೇ ಸಿಬಿಐ ತನಿಖೆಗೆ ಪ್ರಕರಣ ಕೊಡುವಂತೆ ಆಗ್ರಹ ಮಾಡಿದರು. ಇದನ್ನೂ ಓದಿ: DCC Bankನಲ್ಲಿ ಅಕ್ರಮ ಮಾಡಿರುವವರ ಮೇಲೆ ಕ್ರಮ ಗ್ಯಾರಂಟಿ: ಎಸ್.ಟಿ ಸೋಮಶೇಖರ್
Advertisement
Advertisement
ಇದಕ್ಕೆ ಉತ್ತರ ನೀಡಿದ ಸಚಿವ ಎಸ್.ಟಿ. ಸೋಮಶೇಖರ್, ಗುರು ರಾಘವೇಂದ್ರ ಬ್ಯಾಂಕ್, ಗುರುಸಾರ್ವಭೌಮ ಸಹಕಾರಿ ಬ್ಯಾಂಕ್, ವಶಿಷ್ಠ ಕ್ರೆಡಿಟ್ ಸಹಕಾರ ಬ್ಯಾಂಕ್ ಅಕ್ರಮ ಸಿಬಿಐಗೆ ವಹಿಸಲು ಸಹಕಾರ ಸಂಘಗಳ ನಿಬಂಧಕರು ಶಿಫಾರಸು ಮಾಡಿದ್ದಾರೆ. ಈ ಮೂರು ಬ್ಯಾಂಕ್‌ನಲ್ಲಿ ದೊಡ್ಡ ಅಕ್ರಮ ಆಗಿದೆ. ಈಗಾಗಲೇ ನಾವು ಸಾಕಷ್ಟು ಮಾಹಿತಿ ಕಲೆ ಹಾಕಿದ್ದೇವೆ. ಶಿಫಾರಸನ್ನು ಈಗ ಗೃಹ ಇಲಾಖೆಗೆ ಮತ್ತು ಸಿಎಂಗೆ ಕಳಿಸುತ್ತೇವೆ. 2-3 ದಿನಗಳಲ್ಲಿ ಸಿಎಂಗೆ ಶಿಫಾರಸು ಕಳಿಸುತ್ತೇವೆ. ಸಿಎಂ ಜೊತೆ ಚರ್ಚೆ ಮಾಡಿ ಸಿಬಿಐಗೆ ತನಿಖೆ ಕೊಡುವ ಬಗ್ಗೆ ತೀರ್ಮಾನ ಮಾಡುತ್ತೇವೆ. ಸಿಬಿಐಗೆ ಪ್ರಕರಣ ಕೊಡಲು ನಿರ್ಧಾರ ಮಾಡಲಾಗಿದೆ. ಶೀಘ್ರವಾಗಿ ಈ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದರು. ಇದನ್ನೂ ಓದಿ: ಇದು ನನ್ನ ಕೊನೆಯ ಚುನಾವಣೆ: ರಮೇಶ್ ಜಾರಕಿಹೊಳಿ
Advertisement
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k