– ಮೈಸೂರು ಮೇಯರ್ ಪಟ್ಟಕ್ಕೆ ಜೆಡಿಎಸ್ ಜೊತೆ ಬಿಜೆಪಿ ‘ಷರತ್ತು’ ಒಪ್ಪಂದ!
ಚಾಮರಾಜನಗರ: ಮೇಯರ್ ಸ್ಥಾನವನ್ನು ಬಿಜೆಪಿಗೆ ಬಿಟ್ಟುಕೊಡುವಂತೆ ಜೆಡಿಎಸ್ ನ ಮಾಜಿ ಸಚಿವ ಸಾ.ರಾ.ಮಹೇಶ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದೇನೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.
Advertisement
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮೂಲೆಹೊಳೆ ಚೆಕ್ ಪೋಸ್ಟ್ ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೇಯರ್ ಸ್ಥಾನವನ್ನು ಜೆಡಿಎಸ್ ಗೆ ಬಿಟ್ಟು ಕೊಡುವಂತೆ ಸಾ.ರಾ.ಮಹೇಶ್ ಅವರು ಕೇಳಿದ್ದಾರೆ. ನಾನು 3 ಷರತ್ತು ಹಾಕಿದ್ದೇನೆ, ಅವರು ಸಹ ಷರತ್ತು ಹಾಕಿದ್ದಾರೆ. ಸಾ.ರಾ. ಮಹೇಶ್ ಅವರು ಅವರ ಹೈಕಮಾಂಡ್ ಜೊತೆ ಮಾತನಾಡಲಿದ್ದಾರೆ. ಈ ವಿಚಾರವಾಗಿ ನಾನು ಹೆಚ್.ಡಿ.ಕುಮಾರಸ್ವಾಮಿ ಅವರ ಜೊತೆ ಮಾತನಾಡುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ:ಪಿಕ್ಚರ್ ಅಭೀ ಬಾಕಿ ಹೈ ಎಂದ ಆನಂದ್ ಸಿಂಗ್‍ಗೆ ಥಿಯೇಟರ್ ಬಂದ್ ಹೈ ಎಂದ ರಾಜೂ ಗೌಡ
Advertisement
Advertisement
ಸಂಸದ ಪ್ರತಾಪ್ ಸಿಂಹ, ಶಾಸಕ ನಾಗೇಂದ್ರ, ಹಾಗೂ ಮೈಸೂರು ಬಿಜೆಪಿ ನಗರಾಧ್ಯಕ್ಷ ಅವರು ಸಹ ಹೆಚ್.ಡಿ.ಕುಮಾರಸ್ವಾಮಿ ಜೊತೆ ಮಾತನಾಡಲಿದ್ದಾರೆ. ನಾಳೆ ಸಂಜೆ ಅಥವಾ ನಾಳಿದ್ದು ಮೈಸೂರು ಮೇಯರ್ ಯಾರೆಂದು ತಿಳಿಯಲಿದೆ ಎಂದಿದ್ದಾರೆ. ಅಲ್ಲದೇ ಸಚಿವ ಆನಂದ್ ಸಿಂಗ್ ವಿಚಾರವಾಗಿ, ಅವರಿಗೆ ಸಿಎಂ ಅವರು ಏನೆಲ್ಲಾ ಹೇಳಬೇಕೊ ಅದೆಲ್ಲವನ್ನೂ ಎರಡು ದಿನಗಳ ಹಿಂದೆಯೇ ಹೇಳಿದ್ದಾರೆ. ಇನ್ನೊಂದು ವಾರದ ಒಳಗೆ ಎಲ್ಲವೂ ಸರಿಹೋಗಲಿದೆ ಎಂದು ಹೇಳಿದ್ದಾರೆ.
Advertisement
ಮತ್ತೊಂದೆಡೆ ಕೇರಳ ರಾಜ್ಯದಿಂದ ಇತ್ತೀಚಿನ ದಿನಗಳಲ್ಲಿ ಕೆಲವು ಮಂದಿ ಕರ್ನಾಟಕ ರಾಜ್ಯದೊಳಗೆ ಪ್ರವೇಶಿಸಲು ನಕಲಿ ಆರ್‌ಟಿಪಿಸಿಆರ್ ವರದಿಗಳನ್ನು ತರುತ್ತಿರುವುದು ಚೆಕ್ ಪೋಸ್ಟ್ ಅಧಿಕಾರಿಗಳ ಗಮನಕ್ಕೆ ಬಂದಿದ್ದು, ಅವರನ್ನು ಹಿಂತಿರುಗಿಸಿ ಕಳುಹಿಸುತ್ತಿದ್ದಾರೆ. ಇದನ್ನು ರಾಜ್ಯ ಸರ್ಕಾರವು ಬಹಳ ಗಂಭೀರವಾಗಿ ಪರಿಗಣಿಸಿದ್ದು, ಇಂತಹ ನಕಲಿ ಆರ್‌ಟಿಪಿಸಿಆರ್ ವರದಿ ಹೊಂದಿರುವವರ ವಿರುದ್ಧ ಕೂಡಲೇ ಕ್ರಮ ಕೂಡಲೇ ಕ್ರಿಮಿನಲ್ ಮೊಕದ್ದಮೆಯನ್ನು ದಾಖಲಿಸುವ ಜೊತೆಗೆ ಸ್ಥಳದಲ್ಲೇ ಜಪ್ತಿ ಮಾಡುವಂತೆ ಸ್ಥಳದಲ್ಲಿದ್ದ ಚೆಕ್ ಪೋಸ್ಟ್ ಅಧಿಕಾರಿಗಳು ಹಾಗೂ ಪೊಲೀಸರಿಗೆ ಖಡಕ್ ಸೂಚನೆ ನೀಡಿದ್ದಾರೆ. ಇದನ್ನೂ ಓದಿ:ಅಕ್ಕೈ ಪದ್ಮಶಾಲಿ ಆಸೆ ನೆರವೇರಿಸಿದ ನಟ ಧನಂಜಯ್