ಇಸ್ಲಾಮಾಬಾದ್: ಶಸ್ತ್ರಚಿಕಿತ್ಸೆ ವೇಳೆ ನವಜಾತ ಶಿಶುವಿನ ತಲೆಯನ್ನು ಕತ್ತರಿಸಿ ತಾಯಿಯ ಹೊಟ್ಟೆಯಲ್ಲಿಯೇ ಬಿಟ್ಟಿರುವ ಘಟನೆ ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಗ್ರಾಮೀಣ ಆರೋಗ್ಯ ಕೇಂದ್ರದಲ್ಲಿ ನಡೆದಿದೆ. ಇದರಿಂದ ಮಹಿಳೆ ಸಾವು-ಬದುಕಿನ ಮಧ್ಯೆ ಹೋರಾಟ ನಡೆಸಿದ್ದಾರೆ.
Advertisement
ತಾರ್ಪಾರ್ಕರ್ ಜಿಲ್ಲೆಯ ಹಳ್ಳಿಯೊಂದಕ್ಕೆ ಸೇರಿದ 32 ವರ್ಷದ ಹಿಂದೂ ಮಹಿಳೆ, ಭಾನುವಾರ ಸಮೀಪದ ಗ್ರಾಮೀಣ ಆರೋಗ್ಯ ಕೇಂದ್ರಕ್ಕೆ ಹೋಗಿದ್ದರು. ಈ ವೇಳೆ ಮಹಿಳಾ ಡಾಕ್ಟರ್ ಇಲ್ಲದೇ ಇರುವ ಕಾರಣ ಅನುಭವಿ ಸಿಬ್ಬಂದಿ ತಾನೇ ಶಸ್ತ್ರ ಚಿಕಿತ್ಸೆ ನಡೆಸಲು ಮುಂದಾದಾಗ ಈ ಘಟನೆ ನಡೆದಿದೆ ಎಂದು ಜಮ್ಶೊರೊದಲ್ಲಿರುವ ಲಿಯಾಕತ್ ಯೂನಿವರ್ಸಿಟಿ ಆಫ್ ಮೆಡಿಕಲ್ ಅಂಡ್ ಹೆಲ್ತ್ ಸೈನ್ಸಸ್ನ ಸ್ತ್ರೀ ರೋಗ ಶಾಸ್ತ್ರ ಘಟಕದ ಮುಖ್ಯಸ್ಥರಾದ ರಾಹೀಲ್ ಸಿಕಂದರ್ ತಿಳಿಸಿದ್ದಾರೆ. ಇದನ್ನೂ ಓದಿ: ಸಿಗಂಧೂರು ಚೌಡೇಶ್ವರಿ ದೇವಿಯ ದರ್ಶನ ಪಡೆದ ಸುಪ್ರೀಂಕೋರ್ಟ್ ನ್ಯಾ.ಬಿ.ವಿ.ನಾಗರತ್ನ ದಂಪತಿ
Advertisement
Advertisement
ನಂತರ ಮಹಿಳೆ ಸ್ಥಿತಿ ಗಂಭೀರವಾದಾಗ ಆಕೆಯನ್ನು ಮಿಥಿಯ ಹತ್ತಿರದ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಯಿತು. ಕೊನೆಗೆ ಆಸ್ಪತ್ರೆಗೆ ಭೇಟಿ ನೀಡಿದ ಮಹಿಳೆಯ ಕುಟುಂಬಸ್ಥರು ನವಜಾತ ಶಿಶುವಿನ ಉಳಿದ ದೇಹವನ್ನು ಗರ್ಭದಿಂದ ಹೊರತೆಗೆದು ಆಕೆಯ ಜೀವವನ್ನು ಉಳಿಸುವಂತೆ ತಿಳಿಸಿದರು.
Advertisement
ಮಗುವಿನ ತಲೆ ಒಳಗೆ ಸಿಕ್ಕಿಹಾಕಿಕೊಂಡಿದ್ದರಿಂದ ತಾಯಿಯ ಗರ್ಭಕೋಶ ನಾಶವಾಗಿತ್ತು. ಹೀಗಾಗಿ ಶಸ್ತ್ರಚಿಕಿತ್ಸೆಯ ಮೂಲಕ ಮಗುವಿನ ತಲೆಯನ್ನು ಹೊರತೆಗೆದು ಆಕೆಯ ಜೀವವನ್ನು ಉಳಿಸಲಾಯಿತು ಎಂದು ವೈದ್ಯರು ಹೇಳಿದ್ದಾರೆ. ಇದನ್ನೂ ಓದಿ: ನಾಡದೇವತೆ ಚಾಮುಂಡೇಶ್ವರಿಗೆ ಭಕ್ತಿಭಾವದ ಪೂಜೆ ಸಲ್ಲಿಸಿದ ಪ್ರಧಾನಿ – ಬೆಟ್ಟದಲ್ಲಿ ಹಬ್ಬದ ಸಡಗರ
ಇದೀಗ ವೈದ್ಯರ ನಿರ್ಲಕ್ಷ್ಯದಿಂದಲೇ ಈ ಘಟನೆ ಸಂಭವಿಸಿದೆ ಎಂದು ಮಹಿಳೆಯ ಕುಟುಂಬಸ್ಥರು ಆರೋಪಿಸಿ ಆಕ್ರೋಶ ಹೊರಹಾಕುತ್ತಿದ್ದಾರೆ.