ಬೆಂಗಳೂರು: ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಕಾಣಿಸಿಕೊಂಡ ಬೆಂಕಿಯನ್ನು ನಂದಿಸುವ ವೇಳೆ ಅಗ್ನಿಶಾಮಕ ಸಿಬ್ಬಂದಿ ಆಯತಪ್ಪಿ ಬಿದ್ದ ಘಟನೆ ರಾಜ್ಯ ರಾಜಧಾನಿಯಲ್ಲಿ ನಡೆದಿದೆ.
ಮಹದೇವಪುರ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ವಿನಯ್ ಆಯತಪ್ಪಿ ಬಿದ್ದಿದ್ದಾರೆ. ಬೆಂಗಳೂರಿನ ಮಾರತಹಳ್ಳಿಯ ಕಾರ್ತಿಕ್ ನಗರದಲ್ಲಿರುವ ಬಾಗಮನೆ ಟೆಕ್ ಪಾರ್ಕ್‍ನಲ್ಲಿ ಈ ಘಟನೆ ನಡೆದಿದೆ. ವಿನಯ್ ಕೆಳಗೆ ಬಿದ್ದ ರಭಸಕ್ಕೆ ಕೈ, ಕಾಲು ಹಾಗೂ ತಲೆಗೆ ಗಾಯಗಾಳಾಗಿವೆ. ಅವರನ್ನು ತಕ್ಷಣವೇ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಲಾಗಿದ್ದು, ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Advertisement
Advertisement
ನಿರ್ಮಾಣ ಹಂತದಲ್ಲಿರುವ ಕಟ್ಟಡಕ್ಕೆ ಬೆಂಕಿ ತಗುಲಿದೆ. ಶಾರ್ಟ್ ಸರ್ಕಿಟ್‍ನಿಂದ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಘಟನೆಯಲ್ಲಿ ಯಾವುದೇ ಸಾವು, ನೋವುಗಳು ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ 8 ಅಗ್ನಿಶಾಮಕ ವಾಹನಗಳು ತೆರಳಿ ಅಗ್ನಿ ನಂದಿಸುವ ಕಾರ್ಯ ನಡೆಸಿದರು. ಇದನ್ನೂ ಓದಿ: ಆಂಬ್ಯುಲೆನ್ಸ್ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ!
Advertisement
Advertisement
ಹತ್ತು ಅಗ್ನಿಶಾಮಕ ವಾಹನಗಳ ಜೊತೆ ಲ್ಯಾಡರ್ ಬಳಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಾಗಮನೆ ಟೆಕ್ ಪಾರ್ಕ್‍ನಲ್ಲಿರುವ ಲೊಗ್ಯಾಟೋ ಕಂಪನಿಯಲ್ಲಿ ಈ ಅಗ್ನಿ ಅವಘಡ ನಡೆದಿದೆ. 12 ಅಗ್ನಿಶಾಮಕ ವಾಹನದಿಂದ ಕಾರ್ಯಾಚರಣೆ ನಡೆಯುತ್ತಿದೆ. ಏರಿಯಲ್ ಲ್ಯಾಡರ್ ಮೂಲಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಇದನ್ನೂ ಓದಿ: ಕೆಂಪು ಟೋಪಿ ವಿರುದ್ಧ ಅಪಪ್ರಚಾರ, ಬೇರೆ ಬಣ್ಣದ ಟೋಪಿ ಧರಿಸಲು ಜನರಿಗೆ ಒತ್ತಾಯ: ಅಖಿಲೇಶ್