ಮಂಡ್ಯ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಯವರಿಗೆ (H.D Kumaraswamy) ಕೌಂಟರ್ ಕೊಡಲು ಸಿಎಂ ಡಿ.ಕೆ ಶಿವಕುಮಾರ್ (D.K Shivakumar) ಅವರು ಸಜ್ಜಾಗಿದ್ದಾರೆ. ಇದಕ್ಕಾಗಿ ಅ.31 ರಂದು ಮಂಡ್ಯ ವಿಶ್ವವಿದ್ಯಾಲಯದ ಆವರಣದಲ್ಲಿ ಕಾರ್ಯಕ್ರಮಕ್ಕೆ ಬೃಹತ್ ವೇದಿಕೆ ಸಿದ್ಧವಾಗಿದೆ.
ಮಂಡ್ಯದಲ್ಲಿ (Mandya) ಕೈಗಾರಿಕೆ ಸ್ಥಾಪನೆಗೆ ಜಾಗ ಕೊಡುವಂತೆ ಸಿಎಂಗೆ ಹೆಚ್ಡಿಕೆ ಪತ್ರ ಬರೆದ ಬೆನ್ನಲ್ಲೇ ಕಾರ್ಯಕ್ರಮಕ್ಕೆ ತಯಾರಿ ಮಾಡಿಕೊಳ್ಳಲಾಗಿದೆ. ಈ ಮೂಲಕ ಅಭಿವೃದ್ಧಿ ಕಾಮಗಾರಿಗೆ ಚಾಲನೆ ಹೆಸರಿನಲ್ಲಿ ಕುಮಾರಸ್ವಾಮಿಯವರಿಗೆ ಕೌಂಟರ್ ಕೊಡಲು ಸಿಎಂ ಮುಂದಾಗಿದ್ದಾರೆ. ಈ ವೇದಿಕೆಯಲ್ಲಿ ನೂರಾರು ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಸಿಗಲಿದೆ. ಇದನ್ನೂ ಓದಿ: ಮೋದಿ ಅವರಪ್ಪನೂ ಜೈಲಿಗೆ ಹೋಗ್ಬೇಕು ಎಂದ ಖರ್ಗೆಗೆ ಸಂಕಷ್ಟ – ದೂರು ದಾಖಲು
ಕಾರ್ಯಕ್ರಮದ ಮೂಲಕ ಕೇಂದ್ರ ಸಚಿವರಾಗಿ ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ಹೆಚ್ಡಿಕೆ ಕೊಡುಗೆ ಶೂನ್ಯ. ಜಿಲ್ಲೆಯ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರದಿಂದ 10 ಸಾವಿರ ಕೋಟಿ ರೂ. ನೀಡಿದೆ ಎಂಬ ಸಂದೇಶ ರವಾನಿಸಲು ಮುಂದಾಗಿದ್ದಾರೆ. ಇದರ ಬೆನ್ನಲ್ಲೇ ಕುಮಾರಸ್ವಾಮಿಯವರು 10 ಸಾವಿರ ಕೋಟಿ ರೂ. ಅಭಿವೃದ್ಧಿಯ ಲೆಕ್ಕ ಕೇಳಿದ್ದಾರೆ. ಇದನ್ನೂ ಓದಿ: ಶಿವಮೊಗ್ಗ | 539 ಕೆರೆಗಳ 2,431 ಎಕರೆ ಭೂಮಿ ಒತ್ತುವರಿ ತೆರವಿಗೆ ಈಶ್ವರ್ ಖಂಡ್ರೆ ಸೂಚನೆ
